ಬಿಜೆಪಿ ಮುಖಂಡನಿಗೆ ಚಾಕು ಇರಿತ: ‘ಪೃಥ್ವಿ ಸಿಂಗ್ ಮೋಸ್ಟ್ ಬೋಗಸ್’: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​

ಬೆಳಗಾವಿ ಜಿಲ್ಲೆಯ ವಿಜಯನರಗದಲ್ಲಿ ರಮೇಶ್ ಜಾರಕಿಹೊಳಿ ಅವರ ಅತ್ಯಾಪ್ತ ಪೃಥ್ವಿ ಸಿಂಗ್​ಗೆ ಕಾಂಗ್ರೆಸ್ ಎಂಎಲ್​ಸಿ ಚನ್ನರಾಜ ಹಟ್ಟಿಹೊಳಿ ಆಪ್ತರಿಂದ ಚಾಕುವಿನಿಂದ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸದ್ಯ ಈ ಕೇಸ್​ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮಾತನಾಡಿದ್ದು, ಪೃಥ್ವಿ ಸಿಂಗ್ ಮೋಸ್ಟ್ ಬೋಗಸ್​ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಮುಖಂಡನಿಗೆ ಚಾಕು ಇರಿತ: ‘ಪೃಥ್ವಿ ಸಿಂಗ್ ಮೋಸ್ಟ್ ಬೋಗಸ್’: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on:Dec 04, 2023 | 8:38 PM

ಬೆಳಗಾವಿ, ಡಿಸೆಂಬರ್​​​​​ 04: ಶಾಸಕ ರಮೇಶ್ ಜಾರಕಿಹೊಳಿ ಆಪ್ತ, ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ ಪ್ರಕರಣ ರಾಜಕೀಯ ಪ್ರೇರಿತವೋ ಅಥವಾ ಷಡ್ಯಂತ್ರವೋ ಗೊತ್ತಾಗಬೇಕು. ಪೃಥ್ವಿ ಸಿಂಗ್ ಮೋಸ್ಟ್ ಬೋಗಸ್ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು, ತಮ್ಮ, ಮಗ ಸೇರಿದಂತೆ ನಾವೆಲ್ಲರೂ ಶಾಂತಿ ಪ್ರಿಯರು. ತನಿಖೆ ಆಗಬೇಕು ಎಂದು ಎಸ್​ಪಿ ಜೊತೆ ಮಾತನಾಡಿದ್ದೇನೆ. ಪ್ರಕರಣದ ಬಗ್ಗೆ 24 ಗಂಟೆಯೊಳಗೆ ಸತ್ಯಾಸತ್ಯತೆ ಗೊತ್ತಾಗಬೇಕು ಎಂದಿದ್ದಾರೆ.

ಚಾಕು ಇರಿತದ ಹಿಂದೆ ಯಾರಿದ್ದಾರೆ ಎಂದು ಗೊತ್ತಾಗಬೇಕು. ಅವನು ಯಾರ ಆಪ್ತ ಅನ್ನೋದಕ್ಕಿಂತ ನಮ್ಮ ಹೆಸರು ಬಂದಿದೆ. ಬಗ್ಗೆ ವಿಚಾರ ಮಾಡಿದ್ದೇನೆ. ಬಿಜೆಪಿ ಮುಖಂಡ ಪೃಥ್ವಿ ಸಿಂಗ್​ನನ್ನೇ ವಿಚಾರಣೆ ಮಾಡಬೇಕು. ಪೃಥ್ವಿ ಹೆಸರು ಬರೆದಿಟ್ಟು ಹುಡುಗರು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಹೇಳಿದ್ದಾರೆ.

ಯಾರೇ ಭಾಗಿಯಾಗಿದ್ದರೂ ಕಾನೂನುಕ್ರಮ ಕೈಗೊಳ್ತಾರೆ: ಡಾ.ಪರಮೇಶ್ವರ್

ಪ್ರಕರಣ ಕುರಿತಾಗಿ ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ.ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದು, ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಕಾನೂನುಕ್ರಮ ಕೈಗೊಳ್ಳುತ್ತಾರೆ. ಏನೇ ಇದ್ದರೂ ಪೊಲೀಸರು ನೋಡಿಕೊಳ್ಳುತ್ತಾರೆ ಎಂದಿದ್ದಾರೆ.

ಹಲ್ಲೆ ಮಾಡಿರುವವರನ್ನು ಕೂಡಲೇ ಬಂಧಿಸುವಂತೆ ವಿಜಯೇಂದ್ರ ಆಗ್ರಹ

ಕೆಎಲ್‌ಇ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಪೃಥ್ವಿ ಸಿಂಗ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದ್ದು, ಧೈರ್ಯವಾಗಿರು ಯಾವುದಕ್ಕೂ ತಲೆ ಕೆಡಸಿಕೊಳ್ಳಬೇಡ. ನಾನು ಎಲ್ಲಾ ಮಾತನಾಡುತ್ತೇನೆ ಎಂದು ಧೈರ್ಯ ತುಂಬಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ರಮೇಶ್​ ಜಾರಕಿಹೊಳಿ ಅತ್ಯಾಪ್ತ ಬಿಜೆಪಿ ಮುಖಂಡನಿಗೆ ಚಾಕು ಇರಿತ; ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಆಪ್ತರಿಂದ ಕೃತ್ಯ

ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಚನ್ನರಾಜ ಹಟ್ಟಿಹೊಳಿ ಸಮ್ಮುಖದಲ್ಲೇ ಹಲ್ಲೆ ನಡೆದಿರುವ ಅನುಮಾನವಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಇಡೀ ಸಂಪುಟ ಬೆಳಗಾವಿಯಲ್ಲಿದೆ. ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಕೂಡಲೇ ಬಂಧಿಸಬೇಕು ಎಂದಿದ್ದಾರೆ.

ಯಾಕೆ ಹಲ್ಲೆ ಆಯ್ತು ಅನ್ನೋದು ತನಿಖೆಯಿಂದ ಹೊರ ಬರಬೇಕು. ಆಡಳಿತ ಪಕ್ಷದ ಎಂಎಲ್​ಸಿ ಅವರ ಪುಡಾರಿಗಳನ್ನ ಕಳುಹಿಸಿ ಮಾರಣಾಂತಿಕ ಹಲ್ಲೆ ಮಾಡುತ್ತಾರೆ. ಕಲಬುರಗಿಯಲ್ಲಿ ಮಣಿಕಂಠ ರಾಠೋಡ ಮೇಲೆ ಮಾರಣಾಂತಿಕ ಹಲ್ಲೆ ಆಯ್ತು. ಒಂದು ಕ್ಷಣ ತಡ ಮಾಡದೇ ತಕ್ಷಣ ಎಂಎಲ್‌ಸಿ ಬಂಧಿಸಬೇಕು‌. ಅರೆಸ್ಟ್ ಮಾಡದಿದ್ದರೆ ರಾಜ್ಯಾದ್ಯಂತ ಪ್ರತಿಯೊಬ್ಬ ಕಾರ್ಯಕರ್ತ ಬೀದಿಗೆ ಇಳಿತಾರೆ. ಅಧಿಕಾರದ ಸೊಕ್ಕಿನಿಂದ ಮೆರೆಯುವ ಇವರಿಗೆ ಶಿಕ್ಷೆ ಆಗಬೇಕು‌. ಬಿಜೆಪಿ ಜತೆಗೆ ಗುರುತಿಸಿಕೊಂಡಿದ್ದಕ್ಕೆ ಹಲ್ಲೆ ಮಾಡಿದ್ದಾರೆ. ಜವಾಬ್ದಾರಿ ಸಚಿವರು ತಮ್ಮ ಎಲ್ಲಿದ್ದಾನೆ ಕರೆದುಕೊಂಡು ಬಂದು ಕೊಡಲಿ ಎಂದು ಹೇಳಿದ್ದಾರೆ.

ರಾಜಕೀಯ ದ್ವೇಷದಿಂದ ಪೃಥ್ವಿ ಸಿಂಗ್ ಮೇಲೆ ಹಲ್ಲೆ: ಕೇಶವ ಪ್ರಸಾದ್ 

ಬಿಜೆಪಿ ಎಂಎಲ್‌ಸಿ ಕೇಶವ ಪ್ರಸಾದ್ ಪ್ರತಿಕ್ರಿಯಿಸಿದ್ದು, ರಾಜಕೀಯ ದ್ವೇಷದಿಂದ ಪೃಥ್ವಿ ಸಿಂಗ್ ಮೇಲೆ ಹಲ್ಲೆಯಾಗಿದೆ. ಈಗಿರುವ ಸರ್ಕಾರ ವಿರೋಧಿಗಳನ್ನು ಟಾರ್ಗೆಟ್ ಮಾಡುತ್ತಿದೆ. ಬಿಜೆಪಿ ಸದನ ಒಳಗೆ ಮತ್ತು ಹೊರಗೆ ಹೋರಾಟ ಮಾಡುತ್ತೇವೆ ಎಂದರು.

ಹಲ್ಲೆ ಮಾಡಿದ್ದು ಯಾರು ಎಂದು ತನಿಖೆ ಆಗಬೇಕು: MLC ಛಲವಾದಿ

ಪೃಥ್ವಿ ಸಿಂಗ್​ ಆರೋಗ್ಯ ವಿಚಾರಿಸಿದ ಬಳಿಕ MLC ಛಲವಾದಿ ಮಾತನಾಡಿ, ಪೃಥ್ವಿ ಸಿಂಗ್​ಗೆ ಹಲ್ಲೆ ಮಾಡಿದ್ದು ಯಾರು ಎಂದು ತನಿಖೆ ಆಗಬೇಕು. ಈಗಾಗಲೇ ದೂರು ನೀಡಲಾಗಿದೆ. ಡಿಸಿಪಿ, ಎಸಿಪಿ ಸ್ಥಳಕ್ಕೆ ಬಂದಿದ್ದಾರೆ. ಈ ವಿಚಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಗಮನಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:27 pm, Mon, 4 December 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್