AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಪತಿಯ ಬಿಟ್ಟು ಓಡಿಹೋಗಿದ್ದ ಮಹಿಳೆ, ಆಕೆಯ ಪ್ರಿಯಕರನ ಬರ್ಬರ ಕೊಲೆ

ಹೀನಾ ಮೆಹಬೂಬ್ (19) ಹಾಗೂ ಕೊಕಟನೂರ ಗ್ರಾಮದ ತೌಫಿಕ್ ಶೌಕತ್ (24) ಜೋಡಿಗೆ ನಾಲ್ಕು ತಿಂಗಳ ಹಿಂದೆ ಮದುವೆ ಆಗಿತ್ತು. ವಿವಾಹದ ಬಳಿಕ ಇಬ್ಬರೂ ಬಾಡಿಗೆ ಕಾರಿನಲ್ಲಿ ದರ್ಗಾಕ್ಕೆ ಹೋಗಿದ್ದರು. ಆಗ ವಧುವಿಗೆ ಚಾಲಕನ ಮೇಲೆಯೇ ಆಯ್ತು ಲವ್! ಆಮೇಲೆ ನಡೆದಿದ್ದು ಭಯಾನಕ, ಏನದು? ಇಲ್ಲಿದೆ ವಿವರ

ಬೆಳಗಾವಿ: ಪತಿಯ ಬಿಟ್ಟು ಓಡಿಹೋಗಿದ್ದ ಮಹಿಳೆ, ಆಕೆಯ ಪ್ರಿಯಕರನ ಬರ್ಬರ ಕೊಲೆ
ಕೊಲೆ ಆರೋಪಿ ತೌಫಿಕ್ ಶೌಕತ್ ಮತ್ತು ಹೀನಾ ಮೆಹಬೂಬ್
ಸಹದೇವ್​ ಮಾನೆ
| Edited By: |

Updated on: Jan 31, 2024 | 9:20 AM

Share

ಬೆಳಗಾವಿ, ಜನವರಿ 31: ಆ ಜೋಡಿಗೆ ಆಗಷ್ಟೇ ಮದುವೆಯಾಗಿತ್ತು. ವಿವಾಹದ (Marriage) ಸಂಭ್ರಮದಲ್ಲಿ ಇಬ್ಬರೂ ದರ್ಗಾಕ್ಕೆ ಹೋಗಲು ತೀರ್ಮಾನಿಸಿದ್ದಾರೆ. ಬಾಡಿಗೆ ಕಾರೊಂದನ್ನು ಗೊತ್ತುಮಾಡಿಕೊಂಡು ದರ್ಗಾಕ್ಕೆ ಹೋಗಿದ್ದಾರೆ. ಈ ಸಣ್ಣ ಪ್ರಯಾಣದ ಅವಧಿಯಲ್ಲೇ ವಧುವಿಗೆ ಕಾರಿನ ಚಾಲಕನ ಜತೆ ಪ್ರೇಮಾಂಕುರವಾಗಿದೆ. ಕೆಲವೇ ದಿನಗಳಲ್ಲಿ ಆತನ ಜತೆ ಆಕೆ ಓಡಿಹೋಗಿದ್ದಾಳೆ. ಆದರೆ, ನಂತರ ನಡೆದಿದ್ದು ಮಾತ್ರ ಭಯಾನಕ ಘಟನೆ. ಕಾರು ಚಾಲಕನ ಜತೆಗಿನ ಪ್ರೇಮ ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಅಂದಹಾಗೆ ಈ ಘಟನೆ ನಡೆದಿದ್ದು, ಬೆಳಗಾವಿ (Belagavi) ಜಿಲ್ಲೆಯ ಅಥಣಿ (Athani) ತಾಲೂಕಿನ ಕೊಕಟನೂರ ಗ್ರಾಮದಲ್ಲಿ.

ಹೀನಾ ಮೆಹಬೂಬ್ (19) ಹಾಗೂ ಕೊಕಟನೂರ ಗ್ರಾಮದ ತೌಫಿಕ್ ಶೌಕತ್ (24) ಜೋಡಿಗೆ ನಾಲ್ಕು ತಿಂಗಳ ಹಿಂದೆ ಮದುವೆ ಆಗಿತ್ತು. ವಿವಾಹದ ಬಳಿಕ ಇಬ್ಬರೂ ಬಾಡಿಗೆ ಕಾರಿನಲ್ಲಿ ದರ್ಗಾಕ್ಕೆ ಹೋಗಿದ್ದರು. ಈ ವೇಳೆ ಕಾರು ಚಾಲಕ ಯಾಸಿನ್​ ಅದಮ್ ​(21) ಮೇಲೆ ಹೀನಾಗೆ ಪ್ರೇಮಾಂಕುರವಾಗಿದೆ. ಇದಾದ ಒಂದೇ ತಿಂಗಳಲ್ಲಿ ಗಂಡನ ಬಿಟ್ಟು ಪ್ರಿಯಕರ ಯಾಸಿನ್​ ಜೊತೆ ಹೀನಾ ಓಡಿಹೋಗಿದ್ದಳು. ಇದರಿಂದ ರೊಚ್ಚಿಗೆದ್ದಿದ್ದ ತೌಫಿಕ್ ಶೌಕತ್ ಹತ್ಯೆಗೆ ಸಂಚು ಹೂಡಿದ್ದ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ತೋಟದ ಮನೆಯಲ್ಲಿ ವಾಸವಿದ್ದ ಯಾಸಿನ್, ಹೀನಾ ಜೋಡಿ ಮೇಲೆ ಮಂಗಳವಾರ ಸಂಜೆ ತೌಫಿಕ್​ ದಾಳಿ ನಡೆಸಿದ್ದ. ಲಾಂಗ್​​ನಿಂದ ಹಲ್ಲೆ ನಡೆಸಿ ಪತ್ನಿ ಹೀನಾಳನ್ನು ಹತ್ಯೆ ಮಾಡಿ, ನಂತರ ಆಕೆಯ ಪ್ರಿಯಕರ ಯಾಸಿನ್​ನನ್ನೂ ಕೊಲೆ ಮಾಡಿದ್ದಾನೆ. ಇದೇ ವೇಳೆ, ಜಗಳ ಬಿಡಿಸಲು ಬಂದ ಅತ್ತೆ, ಮಾವನ ಮೇಲೂ ತೌಫಿಕ್ ಲಾಂಗ್​ನಿಂದ ಹಲ್ಲೆ ಮಾಡಿದ್ದಾನೆ. ನಂತರ ಅಲ್ಲಿಂದ ಪರಾರಿಯಾಗಿದ್ದಾನೆ. ಸದ್ಯ ಗಾಯಾಳುಗಳಿಗೆ ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಗೆಳತಿಯ ಆಕ್ಷೇಪಾರ್ಹ ಪೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ವಿಕೃತಿ ಮೆರೆದ ಗೆಳೆಯ

ಚಿತ್ರದುರ್ಗ: ಜಾಗದ ವಿಚಾರಕ್ಕೆ ಗುಂಪು ಘರ್ಷಣೆ

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಈಚಘಟ್ಟ ಗ್ರಾಮದಲ್ಲಿ ಜಾಗದ ವಿಚಾರಕ್ಕೆ ಗುಂಪು ಘರ್ಷಣೆ ಸಂಭವಿಸಿದೆ. ಕಟ್ಟಿಗೆ, ದೊಣ್ಣೆಗಳನ್ನು ಹಿಡಿದು ಗಲಾಟೆ ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಒಂದು ಗುಂಪು ಕುರಿ ಶೆಡ್ ಕಿತ್ತು ಹಾಕಿ ದೌರ್ಜನ್ಯಕ್ಕೆ ಯತ್ನಿಸಿದೆ. ಗಲಾಟೆಯಲ್ಲಿ ಇಬ್ಬರು ಮಹಿಳೆಯರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಹೊಳಲ್ಕೆರೆ ಸರ್ಕಾರಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್