ಬೆಳಗಾವಿ ಸಿದ್ದೇಶ್ವರ ಜಾತ್ರೆಯಲ್ಲಿ ರಕ್ತದೊಕುಳಿ: ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿಯಲ್ಲಿ ನಡೆದ ಸಿದ್ದೇಶ್ವರ ಜಾತ್ರೆ ವೇಳೆ ಒಂದು ಭಯಾನಕ ಘಟನೆ ನಡೆದಿದೆ. ವಿರೋಧಿಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಹತ್ಯೆಗೈಯಲಾಗಿದೆ. ಘಟನೆ ಸಂಬಂಧ ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಒಟ್ಟು ಎಂಟು ಆರೋಪಿಗಳನ್ನು ಬಂಧಿಸಲಾಗಿದೆ.

ಬೆಳಗಾವಿ ಸಿದ್ದೇಶ್ವರ ಜಾತ್ರೆಯಲ್ಲಿ ರಕ್ತದೊಕುಳಿ: ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ
ಕೊಲೆಯಾದ ವ್ಯಕ್ತಿ, ಬಂಧಿತರು
Image Credit source: tv9 kannada
Edited By:

Updated on: Apr 08, 2026 | 4:51 PM

ಬೆಳಗಾವಿ, ಏಪ್ರಿಲ್​ 08: ಸಿದ್ದೇಶ್ವರ ಜಾತ್ರೆಯಲ್ಲಿ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಕೊಲೆ (Murder) ನಡೆದಿರುವಂತಹ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿಯಲ್ಲಿ ನಡೆದಿದೆ. ಸಂಗನಗೌಡ(50) ಕೊಲೆಯಾದ ವ್ಯಕ್ತಿ. ಪ್ರಕರಣ ಸಂಬಂಧ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಘಟನೆ ಸಂಬಂಧ ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಸಂಗನಗೌಡ ಮತ್ತು ಆರೋಪಿಗಳ ಎರಡು ಕುಟುಂಬಗಳ ಮಧ್ಯೆ ಕೆಲವು ವರ್ಷಗಳಿಂದ ವೈಷಮ್ಯ ಇತ್ತು. ಸಿದ್ದೇಶ್ವರ ಜಾತ್ರೆ ವೇಳೆ ರಾಜಕೀಯ ವಿರೋಧಿಗಳ ಮನೆ ಮುಂದೆ ಸಂಗನಗೌಡ ಪಾಟೀಲ್ ಕುಣಿಯುತ್ತಿದ್ದ. ಈ ವೇಳೆ ಮನೆಯ ಮುಂದೆ ಕುಣಿಯಬೇಡ ಎಂದು ಆರೋಪಿಗಳು ಹೇಳಿದ್ದಾರೆ. ಈ ನಡುವೆ ಗಲಾಟೆ ನಡೆದಿದ್ದು, ಬಳಿಕ ಕೊಲೆಗೈಯಲಾಗಿದೆ. ಕುಡಗೋಲು, ಕೊಡಲಿ, ಕಬ್ಬಿಣದ ರಾಡ್ ನಿಂದು ಹೊಡೆದು ಹತ್ಯೆ ಮಾಡಲಾಗಿದೆ.

ಇದನ್ನೂ ಓದಿ: ರಾತ್ರಿ ಮಲಗಿದ್ದವರ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ! ಆರು ಜನರ ಸ್ಥಿತಿ ಗಂಭೀರ

ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಸಂಗನಗೌಡ ಪಾಟೀಲ್ ಮೃತಪಟ್ಟಿದ್ದಾರೆ. ದೇಮಪ್ಪ ಬಳಗನ್ನವರ, ಮಂಜುನಾಥ ಬಳಗನ್ನವರ, ರುದ್ರಪ್ಪ, ವಿಜಯ್, ಸೂರಪ್ಪ, ಸಿದ್ದಪ್ಪ, ನಾಗರಾಜ,‌ ಬಸವಂತಪ್ಪ ಬಂಧಿತ ಆರೋಪಿಗಳು.

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಲಾರಿ ಚಾಲಕ ದುರ್ಮರಣ

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಲಾರಿ ಚಾಲಕ ದುರ್ಮರಣ ಹೊಂದಿರುವಂತಹ ಘಟನೆ ಮೈಸೂರು ರಸ್ತೆ ಸಾಟ್​​ಲೈಟ್​ ಬಸ್ ನಿಲ್ದಾಣದ ಸಿಗ್ನಲ್​ನಲ್ಲಿ ನಡೆದಿದೆ. ಸಿಗ್ನಲ್​ನಲ್ಲಿದ್ದ ಲಾರಿಗೆ ಹಿಂಬಂದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ವಿಜಯ್ ಕುಮಾರ್(60) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಹಿಂದೂ ಯುವತಿ ಜೊತೆ ವಿವಾಹಿತ ಮುಸ್ಲಿಂ ವ್ಯಕ್ತಿ ಪರಾರಿ: ಲವ್​​ ಜಿಹಾದ್​​ಗೆ ಒಳಗಾದ ಮಗಳನ್ನು ಹುಡುಕಿಕೊಡಿ ಎಂದು ತಾಯಿಯ ಅಳಲು

ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರಿನಿಂದ ಆರ್​.ಆರ್​.ನಗರಕ್ಕೆ ಲಾರಿ ಬರುತ್ತಿತ್ತು. ಸದ್ಯ ಬ್ಯಾಟರಾಯನಪುರ ಸಂಚಾರಿ ಪೊಲೀಸರು ವಾಹನ ತೆರವು ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us