ಲವ್​ ಜಿಹಾದ್​: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಇಸ್ಲಾಂಗೆ ಮತಾಂತರಕ್ಕೆ ಯತ್ನ

ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯನ್ನು ಬೆಳಗಾವಿಗೆ ಕರೆದುಕೊಂಡು ಹೋಗಿ, ಲೈಂಗಿಕ ದೌರ್ಜನ್ಯವೆಸಗಿ, ಬಳಿಕ ಸಂತ್ರಸ್ತ ಮಹಿಳೆಯ ಖಾಸಗಿ ಫೋಟೋಗಳನ್ನು ಸೆರೆಹಿಡಿದು ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ಪೀಡುಸುತ್ತಿದ್ದ ಏಳು ಆರೋಪಿಗಳ ವಿರುದ್ಧ ಸವದತ್ತಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರನ್ನು ಬಂಧಿಸಲಾಗಿದೆ.

ಲವ್​ ಜಿಹಾದ್​: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಇಸ್ಲಾಂಗೆ ಮತಾಂತರಕ್ಕೆ ಯತ್ನ
ಸಾಂದರ್ಭಿಕ ಚಿತ್ರ
Follow us
Sahadev Mane
| Updated By: ವಿವೇಕ ಬಿರಾದಾರ

Updated on:Apr 22, 2024 | 6:30 AM

ಬೆಳಗಾವಿ, ಏಪ್ರಿಲ್​ 21: ರಾಜ್ಯದಲ್ಲಿ ಲವ್ ಜಿಹಾದ್‌ನ (Love Jihad) ಮತ್ತೊಂದು ಕರಾಳ ಮುಖ ಅನಾವರಣಗೊಂಡಿದೆ. ಹಿಂದೂ (Hindu) ಯುವತಿಯರಷ್ಟೇ ಅಲ್ಲದೆ ವಿವಾಹಿತೆಯರನ್ನೂ ಲವ್ ಜಿಹಾದ್ ಜಾಲಕ್ಕೆ ತಳ್ಳಲು ಯತ್ನಿಸಿರುವ ಘಟನೆ ನಡೆದಿದೆ. ಕೆಲಸ ಕೊಡಿಸುತ್ತೇನೆಂದು ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ, ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದ್ದ ಆರೋಪಿಗಳನ್ನು ಬೆಳಗಾವಿ (Belagavi) ಪೊಲೀಸರು (Police) ಬಂಧಿಸಿದ್ದಾರೆ. ಆರೀಫ್ ಮತ್ತು ಆತನ ಪತ್ನಿ ಬಂಧಿತ ಆರೋಪಿಗಳು.

ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಸಂತ್ರಸ್ತ ಮಹಿಳೆ ವಾಸವಾಗಿದ್ದಾರೆ. ಸಂತ್ರಸ್ತ ಮಹಿಳೆಯ ಪತಿ ಮುನವಳ್ಳಿ ಪಟ್ಟಣದಲ್ಲಿ ಕಿರಾಣಿ ಅಂಗಡಿ ಹೊಂದಿದ್ದಾರೆ. ಪತಿ ಇಲ್ಲದಿದ್ದಾಗ ಸಂತ್ರಸ್ತ ಮಹಿಳೆ ಆಗಾಗ ಕಿರಾಣಿ ಅಂಗಡಿಯಲ್ಲಿ ಕೂತು, ವ್ಯಾಪಾರ ಮಾಡುತ್ತಿದ್ದರು. ಈ ವಿಚಾರ ತಿಳಿದ ಆರೋಪಿ ಆರೀಫ್ ಬೇಪಾರಿ ನೆರೆ ಮನೆಯವರೆಂದು ಮಹಿಳೆಯನ್ನು ಪರಿಚಯ ಮಾಡಿಕೊಂಡು, ಅವರ ಮೊಬೈಲ್ ನಂಬರ್ ಪಡೆದುಕೊಂಡಿದ್ದಾನೆ.

ಬಳಿಕ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯನ್ನು ಬೆಳಗಾವಿಗೆ ಕರೆದುಕೊಂಡುಹೋಗಿ ನಿರಂತರವಾಗಿ ‌ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬೆಳಗಾವಿ ಬಂದ ಬಳಿಕ ಆರೀಫ್‌ಗೆ ಮತ್ತೆ ಐವರು ದುಷ್ಕರ್ಮಿಗಳು ಸಾಥ್ ನೀಡಿದ್ದಾರೆ. ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯದ ಮತ್ತು ಮಹಿಳೆಯ ಖಾಸಗಿ ಫೋಟೋಗಳನ್ನು ಸೆರೆಹಿಡಿದು, ಮತಾಂತರಗೊಳ್ಳುವಂತೆ ಬ್ಯ್ಲಾಕ್​ ಮೇಲ್​ ಮಾಡಿದ್ದಾರೆ.

ಇದನ್ನೂ ಓದಿ: ಅವಳು ನನ್ನ ಜೊತೆ ಮಾತಾಡಲ್ಲ ಅಂದಳು, ಅದಕ್ಕೆ ಚಾಕು ಹಾಕಿದೆ; ಆರೋಪಿ ಫಯಾಜ್​

“ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಳ್ಳು ಇಲ್ಲದಿದ್ದರೆ ಫೋಟೋ ವೈರಲ್ ಮಾಡುತ್ತೇವೆ” ಅಂತ ಬ್ಯ್ಲಾಕ್​ ಮೇಲೆ ಮಾಡಿದ್ದಾರೆ. ಹಣೆಗೆ ಕುಂಕುಮ ಹಚ್ಚುವುದನ್ನು ನಿಲ್ಲಿಸಬೇಕು, ಹಿಂದೂ ಸಂಪ್ರದಾಯ ಬಿಡಬೇಕು. ನಿತ್ಯ ಬುರ್ಖಾ ಧರಿಸುವ ಜೊತೆಗೆ ಐದು ಸಲ ನಮಾಜ್ ಮಾಡಬೇಕು ಅಂತ ಕಾಡಿದ್ದಾರೆ. ಅಲ್ಲದೆ ದುಷ್ಕರ್ಮಿಗಳು ಒತ್ತಾಯ ಪೂರ್ವಕವಾಗಿ ಮಹಿಳೆಗೆ ಬುರ್ಖಾ ಧಾರಣೆ ‌ಮಾಡಿಸಿದ್ದಾರೆ.

ಮತಾಂತರಕ್ಕೆ ಯತ್ನಿಸಿದ್ದ ದುರಳರ ಜಾಲದಿಂದ ತಪ್ಪಿಸಿಕೊಂಡ ಸಂತ್ರಸ್ತ ಮಹಿಳೆ ಏಳು ಜನ ಆರೋಪಿಗಳ ವಿರುದ್ಧ ಸವದತ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮುನವಳ್ಳಿ ಪಟ್ಟಣದ ಆರೀಫ್ ‌ಬೇಪಾರಿ, ಆದೀಲ್, ಶೋಯಲ್, ಮುಕ್ತಮ್, ಉಮರ್, ಕರೆವ್ವ ಕಟ್ಟಿಮನಿ ಹಾಗೂ ಕೌಸರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೂಡಲೆ ಆರೋಪಿಗಳನ್ನು ಬಂಧಿಸಿ ನ್ಯಾಯ ಕೊಡಿಸುವಂತೆ ಸಂತ್ರಸ್ತ ಮಹಿಳೆ ಆಗ್ರಹಿಸಿದ್ದಾರೆ ಎಂದು ಟಿವಿ9ಗೆ ಎಸ್ ಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ಸಂಬಂಧ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:01 pm, Sun, 21 April 24

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?