AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸುವಂತೆ ಬೆನ್ನು ಬಿದ್ದಿದ್ದ ಯುವಕ ಹಾಗೂ ಆತನ ಸಹೋದರನನ್ನು ಕೊಲೆಗೈದ ಯುವತಿ ತಂದೆ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕರಿಮನಿ ಗ್ರಾಮದಲ್ಲಿ ಇಂದು (ಮೇ 08) ಎರಡು ಕೊಲೆಗಳಾಗಿವೆ. ದುಂಡನಕೊಪ್ಪ ಗ್ರಾಮದ ಫಕೀರಪ್ಪ ಎಂಬ 50 ವರ್ಷದ ವ್ಯಕ್ತಿ ಕರಿಮನಿ ಗ್ರಾಮದ ಯಲ್ಲಪ್ಪ ಹಳೇಗೋಡಿ ಮತ್ತು ಮಾಯಪ್ಪ ಎಂಬುವರನ್ನು ಕೊಲೆ ಮಾಡಿದ್ದಾನೆ. ಮೇಲ್ನೋಟಕ್ಕೆ ಇದು ಪ್ರೀತಿ ವಿಚಾರಕ್ಕೆ ನಡೆದ ಕೊಲೆ ಎಂದು ತಿಳಿದು ಬಂದಿದೆ.

ಪ್ರೀತಿಸುವಂತೆ ಬೆನ್ನು ಬಿದ್ದಿದ್ದ ಯುವಕ ಹಾಗೂ ಆತನ ಸಹೋದರನನ್ನು ಕೊಲೆಗೈದ ಯುವತಿ ತಂದೆ
ಸಾಂದರ್ಭಿಕ ಚಿತ್ರ
Sahadev Mane
| Edited By: |

Updated on: May 08, 2024 | 2:07 PM

Share

ಬೆಳಗಾವಿ, ಮೇ 08: ಪ್ರೀತಿಸುವಂತೆ (Love) ಬೆನ್ನು ಬಿದ್ದಿದ್ದ ಯುವಕ ಮತ್ತು ಆತನ ಸಹೋದರನನ್ನು ಯುವತಿಯ ತಂದೆ ಕೊಲೆ ಮಾಡಿರುವ ಘಟನೆ ಸವದತ್ತಿ (Savadatti) ತಾಲೂಕಿನ ಕಾರಿಮನಿ ಗ್ರಾಮದಲ್ಲಿ ನಡೆದಿದೆ. ಯಲ್ಲಪ್ಪ ಹಳೇಗೋಡಿ (22), ಮಾಯಪ್ಪ (20) ಕೊಲೆಯಾದ ಯುವಕರು. ದುಂಡನಕೊಪ್ಪ ಗ್ರಾಮದ ಫಕೀರಪ್ಪ ಭಾಂವಿಹಾಳ (50) ಕೊಲೆ ಆರೋಪಿ.

ಫಕೀರಪ್ಪನ‌ ಪುತ್ರಿಯನ್ನು ಪ್ರೀತಿಸುವಂತೆ ಯಲ್ಲಪ್ಪ ಬೆನ್ನುಬಿದ್ದಿದ್ದನು. ಈ ವಿಚಾರ ತಿಳಿದ ಫಕೀರಪ್ಪ “ನನ್ನ ಪುತ್ರಿಯ ತಂಟೆಗೆ ಬರಬೇಡ” ಅಂತ ಎಚ್ಚರಿಕೆ ನೀಡಿದ್ದಾನೆ. ಈ ವೇಳೆ ಫಕೀರಪ್ಪ ಹಾಗೂ ಯಲ್ಲಪ್ಪ ನಡುವೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಯಲ್ಲಪ್ಪನಿಗೆ ಫಕೀರಪ್ಪ ಚಾಕುವಿನಿಂದ ಇರಿದಿದ್ದಾನೆ.

ಜಗಳ ಬಿಡಿಸಲು ಬಂದಿದ್ದ ಮಾಯಪ್ಪನಿಗೂ ಫಕೀರಪ್ಪ ಚಾಕು ‌ಇರಿದಿದ್ದಾನೆ. ಯಲ್ಲಪ್ಪ ಸ್ಥಳದಲ್ಲೇ ಮೃತಪಟ್ಟಿದ್ದು, ‌ಮಾಯಪ್ಪ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಆರೋಪಿ ಫಕೀರಪ್ಪ ಭಾಂವಿಹಾಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ‌ರಾಮದುರ್ಗ ಡಿವೈಎಸ್‌ಪಿ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆಯ ಬಿಲ್​​ ಪಾವತಿಸಲಾಗದೇ ಪತ್ನಿಯನ್ನೇ ಕೊಂದ ಪತಿ

ಕುಡಿದ ಅಮಲಿನಲ್ಲಿ ಮಹಿಳೆ ಕೊಲೆ

ಚಿಕ್ಕಬಳ್ಳಾಪುರ: ಕುಡಿದ ಅಮಲಿನಲ್ಲಿ ಕತ್ತು ಹಿಸುಕಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಗೌರಿಬಿದನೂರು ತಾಲೂಕಿನ ಗ್ರಾಮದ ಕೋನಗಾನಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಸೀಗಲಹಳ್ಳಿ ಗ್ರಾಮದ ಆಲುವೇಲಮ್ಮ (45) ಮೃತ ದುರ್ದೈವಿ. ಆಲುವೇಲಮ್ಮ, ರಾಮಾಂಜಿನಮ್ಮ, ಸಂಜೀವಪ್ಪ ಜೊತೆಯಾಗಿ ಕೂಲಿ ಕೆಲಸಕ್ಕೆ ಹೋಗಿದ್ದಾರೆ. ಮೂವರು ಕುಡಿದು ಜಮೀನಿನಲ್ಲೇ ಜಗಳವಾಡಿಕೊಂಡಿದ್ದಾರೆ.

ಜಗಳ ವಿಕೋಪಕ್ಕೆ ತಿರುಗಿದ್ದು, ಆಲುವೇಲಮ್ಮಳ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಆಲುವೇಲಮ್ಮಳ ಜೊತೆ ಇದ್ದ ರಾಮಾಂಜಿನಮ್ಮ, ಸಂಜೀವಪ್ಪ ಪೊಲೀಸರು ಬಂಧಿಸಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅನೈತಿಕ ಸಂಬಂಧಕ್ಕೆ ಅಡ್ಡಿ ಅಂತ ಪತ್ನಿಯ ಕೊಲೆ

ದೊಡ್ಡಬಳ್ಳಾಪುರ: ಅನೈತಿಕ ಸಂಬಂಧಕ್ಕೆ ಅಡ್ಡಿ ಬರುತ್ತಾಳೆ ಅಂತ ಪತ್ನಿಯನ್ನೇ ಕೊಂದಿದ್ದ ಪತಿಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರವಿಚಂದ್ರ ಬಂಧಿತ ಆರೋಪಿ. ವೀಣಾ (20) ಮೃತ ದುರ್ದೈವಿ.

ರವಿಚಂದ್ರ ಮತ್ತು ವೀಣಾ ಎರಡು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದರು. ದಂಪತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಕರೇನಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದರು. ಮದುವೆ ಬಳಿಕ ರವಿಚಂದ್ರ ಪಕ್ಕದ ಮನೆ ಮಹಿಳೆ ಜೊತೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದನು. ಅನೈತಿಕ ಸಂಬಂಧ ವಿಚಾರ ತಿಳಿದು ಪತ್ನಿ ವೀಣಾ ಪತಿ ರವಿಚಂದ್ರ ಜೊತೆ ಗಲಾಟೆ ಮಾಡಿ ಠಾಣೆ ಮೆಟ್ಟಿಲೇರಿದ್ದಳು.

ಇದರಿಂದ ಕ್ರೋದಗೊಂಡಿದ್ದ ಪತಿ ರವಿಚಂದ್ರ ವೀಣಾಳನ್ನು ಕೊಲೆ ಮಾಡಿ, ಪತ್ನಿ ಕಾಣೆಯಾಗಿದ್ದಾಳೆ ಅಂತ ದೂರು ದಾಖಲಿಸಿದ್ದನು. ನಾಪತ್ತೆ ಪ್ರಕರಣದ ತನಿಖೆಗೆ ಇಳಿದ ಪೊಲೀಸರಿಗೆ ಮೇ 2ರಂದು ನಾರಸಿಂಹನಹಳ್ಳಿ ಅರಣ್ಯದಲ್ಲಿ ವೀಣಾ ಶವ ಪತ್ತೆಯಾಗಿತ್ತು. ಬಳಿಕ ಪೊಲೀಸರು ರವಿಚಂದ್ರನ ಮೇಲೆ ಅನುಮಾನಗೊಂಡು ವಿಚಾರಣೆ ನಡೆಸಿದಾಗ ಆರೋಪಿ ಬಾಯಿಬಿಟ್ಟಿದ್ದಾನೆ. ಆರೋಪಿ ರವಿಚಂದ್ರನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಬಂಧನ ಬೆನ್ನಲ್ಲೇ ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಮಹಿಳೆ ತನ್ನನ್ನೂ ಕೂಡ ಪೊಲೀಸರು ವಿಚಾರಣೆಗೆ ಕರೆಯುತ್ತಾರೆಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ