ಮದುವೆ ಮಂಟಪದಿಂದ ಫೋಟೋಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ: ಇಬ್ಬರು ಮಹಿಳೆಯರು ಸೇರಿ 8 ಜನರ ಬಂಧನ

| Updated By: ಗಂಗಾಧರ​ ಬ. ಸಾಬೋಜಿ

Updated on: Nov 26, 2024 | 2:15 PM

ಬೆಳಗಾವಿಯ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ಫೋಟೋಗ್ರಾಫರ್​ರನ್ನು ನಾಲ್ವರು ದುಷ್ಕರ್ಮಿಗಳು ಅಪಹರಿಸಿ ಹಲ್ಲೆ ಮಾಡಿದ ಘಟನೆ ನಡೆದಿದೆ. ಹೆಣ್ಣುಮಕ್ಕಳನ್ನು ಕಾಡಿಸಿದ ಆರೋಪದ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ. ಮಾಳಮಾರುತಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಮದುವೆ ಮಂಟಪದಿಂದ ಫೋಟೋಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ: ಇಬ್ಬರು ಮಹಿಳೆಯರು ಸೇರಿ 8 ಜನರ ಬಂಧನ
ಮದುವೆ ಮಂಟಪದಿಂದ ಫೋಟೋಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ: ಇಬ್ಬರು ಮಹಿಳೆಯರು ಸೇರಿ 8 ಜನರ ಬಂಧನ
Follow us on

ಬೆಳಗಾವಿ, ನವೆಂಬರ್​ 26: ನಾಲ್ವರು ದುಷ್ಕರ್ಮಿಗಳಿಂದ ಮದುವೆ ಮಂಟಪದಿಂದ ಫೋಟೋಗ್ರಾಫರ್ (Photographer) ಕಿಡ್ನ್ಯಾಪ್ ಮಾಡಿ ಹಲ್ಲೆ ಮಾಡಿರುವಂತಹ ಘಟನೆ ನಗರದ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಹೆಣ್ಣು ಮಕ್ಕಳನ್ನು ಕಾಡಿಸುತ್ತಿದ್ದರೆಂದು ಹೇಳಿ ಹಲ್ಲೆ ಮಾಡಲಾಗಿದೆ. ಬೈಲಹೊಂಗಲ ಪಟ್ಟಣದಲ್ಲಿ ವಾಸವಾಗಿರುವ ಉಮೇಶ್ ಹೊಸೂರು ಕಿಡ್ನ್ಯಾಪ್ ಆಗಿದ್ದ ಫೋಟೋಗ್ರಾಫರ್. ಕೇಸ್ ದಾಖಲಾಗುತ್ತಿದ್ದಂತೆ ವಿಕ್ಕಿ, ಪ್ರವೀಣ್ ಉಮರಾಣಿ, ಬಸವರಾಜ ನರಟ್ಟಿ ಸೇರಿ 8 ಜನರನ್ನು ಬಂಧಿಸಲಾಗಿದೆ. ಮಾಳಮಾರುತಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

4 ದಿನಗಳ ಹಿಂದೆ ಮದುವೆ ಆರ್ಡರ್ ಅಂತಾ ಉಮೇಶ್‌ ಬೆಳಗಾವಿಗೆ ಬಂದಿದ್ದರು. ಈ ವೇಳೆ ನಾಲ್ವರು ಅವರನ್ನು ಕಿಡ್ನ್ಯಾಪ್ ಮಾಡಿ, ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಕ್ರಾಸ್ ಬಳಿ ಕಾರು ನಿಲ್ಲಿಸಿ ರಾಡ್​ನಿಂದ ಹಲ್ಲೆ ಮಾಡಿ ಬಿಟ್ಟು ಹೋಗಿದ್ದಾರೆ. ಸದ್ಯ ಬೈಲಹೊಂಗಲ ಖಾಸಗಿ ಆಸ್ಪತ್ರೆಯಲ್ಲಿ ಫೋಟೋಗ್ರಾಫರ್ ಉಮೇಶ್‌ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಹೇಳಿದ್ದಿಷ್ಟು 

ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಪ್ರತಿಕ್ರಿಯಿಸಿದ್ದು,  ಉಮೇಶ್ ಹೊಸೂರು ಎಂಬಾತನನ್ನ ಕಿಡ್ನ್ಯಾಪ್ ಮಾಡಿದ್ದಾರೆ ಅಂತಾ ಕೇಸ್ ದಾಖಲಾಗಿದೆ. ಕೆಪಿಟಿಸಿಎಲ್ ಕಲ್ಯಾಣ ಮಂಪಟದಿಂದ ಕಿಡ್ನ್ಯಾಪ್ ಮಾಡಿದ್ದರು. ಬೈಲಹೊಂಗಲ ಕರೆದುಕೊಂಡು ಹೋಗಿ ಉಮೇಶ್ ಮೇಲೆ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ಸಂಬಂಧಿ ಮನೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ಮಹಿಳೆ ಬಾತ್​ರೂಮ್​ನಲ್ಲಿ ನಿಗೂಢ ಸಾವು

ಅಲ್ಲಿಂದ ತಪ್ಪಿಸಿಕೊಂಡು ಹೋದ ಉಮೇಶ್ ಬೈಲಹೊಂಗಲ ಠಾಣೆಗೆ ಹೋಗಿದ್ದರು. ಬೈಲಹೊಂಗಲ ಪೊಲೀಸರ ಸೂಚನೆ ಮೇರೆಗೆ ಮಾಳಮಾರುತಿ ಠಾಣೆಯಲ್ಲಿ ಕಿಡ್ನ್ಯಾಪ್ ಕೇಸ್ ಮಾಡಿದ್ದಾರೆ. ಆರೋಪಿ ಬಸವರಾಜ ನರಟ್ಟಿ ಜೊತೆಗೆ ಉಮೇಶ್ ಕೆಲಸ ಮಾಡಿದ್ದ. ಉಮೇಶ್ ಮದುವೆ ವಿಚಾರವಾಗಿ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು. ಆ ಸಿಟ್ಟಿನಿಂದ ಬುದ್ದಿ ಕಲಿಸಲು ಕಿಡ್ನ್ಯಾಪ್ ಮಾಡಿದ್ದಾರೆ. ಎಂಟು ಜನರನ್ನ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಸೀಜ್

ಗದಗದ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಉಳಟ್ಟಿ ಕ್ರಾಸ್ ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್​ನ್ನು​ ಪೊಲೀಸರು ಜಪ್ತಿ ಮಾಡಿರುವಂತಹ ಘಟನೆ ನಡೆದಿದೆ. ಚಾಲಕ ಹಾಗೂ ಟಿಪ್ಪರ್ ಮಾಲೀಕರ ವಿರುದ್ಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.