ಬಳ್ಳಾರಿಯಲ್ಲಿ ಮಾಜಿ ಮೇಯರ್ ಮಗನ ಅಟ್ಟಹಾಸ: ದಾರಿ ಬಿಡಿ ಎಂದಿದ್ದಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ಹುಟ್ಟು ಹಬ್ಬ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಡಿಜೆ ಹಾಕಿಕೊಂಡು ಬಳ್ಳಾರಿ ಮಾಜಿ ಮೇಜರ್ ಮಗ ರಘು ಮತ್ತು ಆತನ ಸಹಚರರು ಕುಣಿಯುತ್ತಿದ್ದರು. ಈ ವೇಳೆ ದಾರಿ ಬಿಡಿ ಎಂದು ಯುವಕ ತಿಪ್ಪೇಸ್ವಾಮಿ ಪ್ರಶ್ನಿಸಿದ್ದಕ್ಕೆ ಆತನ ಮೇಲೆ ರಘು ಹಾಗೂ ಆತನ ಸಹಚರರು ಹಲ್ಲೆ ಮಾಡಿದ್ದಾರೆ. ​

ಬಳ್ಳಾರಿಯಲ್ಲಿ ಮಾಜಿ ಮೇಯರ್ ಮಗನ ಅಟ್ಟಹಾಸ: ದಾರಿ ಬಿಡಿ ಎಂದಿದ್ದಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Mar 05, 2024 | 2:54 PM

ಬಳ್ಳಾರಿ, ಮಾರ್ಚ್​​ 05: ಬಳ್ಳಾರಿ (Bellari) ಮಾಜಿ ಮೇಯರ್ ಮಗ ಅಟ್ಟಹಾಸ ಮೆರೆದಿದ್ದಾನೆ. ಮಾಜಿ ಮೇಯರ್ ಮಗ ರಘು ಮತ್ತವರ ಗ್ಯಾಂಗ್ ಹುಟ್ಟು ಹಬ್ಬದ ಸಂಭ್ರಮಾಚರಣೆ ನಿಮಿತ್ತ ರಸ್ತೆಯಲ್ಲಿ ಡಿಜೆ ಹಾಕಿ, ತಲವಾರು ಹಿಡಿದು ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ ದಾರಿ ಬಿಡಿ ಎಂದು ಯುವಕ ತಿಪ್ಪೇಸ್ವಾಮಿ ಹೇಳಿದರು. ಇದಕ್ಕೆ ರಘು ಹಾಗೂ ಅವನ ಸ್ನೇಹಿತರು ತಿಪ್ಪೇಸ್ವಾಮಿ ಅವರ ಮೇಲೆ ಮಾರಣಾಂತಿಕ ಹಲ್ಲೆ (Attack) ಮಾಡಿದರು. ಇದರಿಂದ ತಿಪ್ಪೇಸ್ವಾಮಿ ತೀವ್ರ ಗಾಯಗಳಾಗಿವೆ. ಇನ್ನು ಪ್ರಕರಣ ಸಂಬಂಧ ಬಳ್ಳಾರಿ ಗಾಂಧಿನಗರ ಠಾಣೆಯಲ್ಲಿ ರಘಾವೇಂದ್ರ ಸೇರಿ ಎಂಟು ಜನರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಪ್ರಮುಖ ಆರೋಪಿ ರಾಘವೇಂದ್ರ ಸೇರಿದಂತೆ ಈತನ ಸಹಚರರಾದ ರಾಜು, ರಾಜಶೇಖರ, ಬಾಲು ಅನಿಲ್ ಕುಮಾರ್, ಭಾಸ್ಕರ್ ಏಳು ಜನರ ಬಂಧನವಾಗಿದೆ.

ನಿಧಿ ಶೋಧಿಸುತ್ತಿದ್ದನನ್ನು ಪ್ರಶ್ನಿಸಿದ್ದಕ್ಕೆ ಮಾರಣಾಂತಿಕ ಹಲ್ಲೆ

ಕೋಲಾರ: ನಿಧಿ ಶೋಧಿಸುತ್ತಿದ್ದನ್ನನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಕೋಲಾರ ತಾಲೂಕಿನ ತ್ಯಾವನಹಳ್ಳಿಯ ಗಂಗಮ್ಮ ದೇಗುಲದಲ್ಲಿ ನಡೆದಿದೆ. ತ್ಯಾವನಹಳ್ಳಿಯ ಆನಂದ್ ಮತ್ತು ಗ್ಯಾಂಗ್​ ಹಲ್ಲೆ ಮಾಡಿದ ಆರೋಪಿಗಳು. ಮಂಜುನಾಥ್ ಥಳಿತಕ್ಕೆ ಒಳಗಾದ ಮಹಿಳೆ. ಆನಂದ್ ಮತ್ತು ಗ್ಯಾಂಗ್ ಮಂಜುನಾಥ ಅವರ ತಲೆಗೆ ಕಲ್ಲಿನಿಂದ ಹೊಡೆದಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗ್ರಾಮಸ್ಥರು ಬರುತ್ತಿದ್ದಂತೆ ಆನಂದ್ ಮತ್ತು ಗ್ಯಾಂಗ್ ಕಾಲ್ಕಿತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲೊಂದು ಅಮಾನುಷ ಕೃತ್ಯ, ಹೆತ್ತ ತಾಯಿಯಿಂದಲೇ ಮಗುವಿನ ಮೇಲೆ ಹಲ್ಲೆ

ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಮಂಜುನಾಥ್​ ಪ್ರಜ್ಞಾಹೀನ ಸ್ಥಿತಿ ತಲುಪಿದ್ದು, ಕೂಡಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸ್ನೇಹಿತರ ಗಲಾಟೆಯಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಸಾವು

ಕಲಬುರಗಿ: ಸ್ನೇಹಿತರ ಗಲಾಟೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಅಭಿಷೇಕ್ (18) ಮೃತ ಯುವಕ. ಮಾರ್ಚ್ 3ರಂದು ಕಲಬುರಗಿ ನಗರದ ಸರಸ್ವತಿಪುರಂನಲ್ಲಿ ಸ್ನೇಹಿತರ ಮಧ್ಯೆ ಜಗಳವಾಗಿ ಅಭಿಷೇಕ್​ನನ್ನು ಥಳಿಸಲಾಗಿತ್ತು. ಈ ಗಲಾಟೆಯಲ್ಲಿ ಗಾಯಗೊಂಡು ಅಭಿಷೇಕ ಜಿಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು (ಮಾ.05) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:32 pm, Tue, 5 March 24

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM