ಶಿಕ್ಷಕನಿಂದ ಮಾನಹಾನಿ ಮೆಸೇಜ್ ರವಾನೆ; ಎಸ್​ಡಿಎಂ ಶಾಲೆಯಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ, ಸಾವು

ಶಿಕ್ಷಕರೊಬ್ಬರು ತನ್ನ ಕುರಿತು ಮತ್ತೊಬ್ಬ ವಿದ್ಯಾರ್ಥಿನಿಗೆ ಮಾನಹಾನಿ ಮೆಸೇಜ್ ಮಾಡಿದ ಹಿನ್ನೆಲೆ ಮನನೊಂದ ಎಸ್​ಡಿಎಂ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. SDM ಶಾಲೆಯ ಚಿತ್ರಕಲಾ ಶಿಕ್ಷಕ ರೂಪೇಶ್ ಪೂಜಾರಿ ಮೆಸೇಜ್ ಕಳುಹಿಸಿದ ಶಿಕ್ಷಕನಾಗಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿಕ್ಷಕನಿಂದ ಮಾನಹಾನಿ ಮೆಸೇಜ್ ರವಾನೆ; ಎಸ್​ಡಿಎಂ ಶಾಲೆಯಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ, ಸಾವು
ಶಿಕ್ಷಕನಿಂದ ಮೆಸೇಜ್ ರವಾನೆ; ಎಸ್​ಡಿಎಂ ಶಾಲೆಯಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ, ಸಾವು
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Rakesh Nayak Manchi

Updated on:Feb 13, 2024 | 2:41 PM

ಮಂಗಳೂರು, ಫೆ.12: ತನ್ನ ಬಗ್ಗೆ ಶಿಕ್ಷಕ ಮಾನಹಾನಿ ಮೆಸೇಜ್ ರವಾನಿಸಿದ ಹಿನ್ನೆಲೆ ಮನನೊಂದ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಎಸ್​ಡಿಎಸ್​ ಶಾಲೆಯ (SDM School) 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ನಡೆದಿದೆ. ಪ್ರಕರಣ ಸಂಬಂಧ ಚಿತ್ರಕಲಾ ಶಿಕ್ಷಕ ರೂಪೇಶ್ ಪೂಜಾರಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತನ್ನ ಬಗ್ಗೆ ಮತ್ತೊಬ್ಬ ವಿದ್ಯಾರ್ಥಿನಿಗೆ ಚಿತ್ರಕಲಾ ಶಿಕ್ಷಕ ರೂಪೇಶ್ ಪೂಜಾರಿ ಮಾನಹಾನಿ ಮೆಸೇಜ್ ಮಾಡಿ ವಿಚಾರ ತಿಳಿದ 10ನೇ ತರಗತಿ ವಿದ್ಯಾರ್ಥಿನಿ ತನ್ನ ಪೋಷಕರಿಗೆ ತಿಳಿಸಿದ್ದಳು. ಅದರಂತೆ ಶಾಲೆಗೆ ತೆರಳಿ ವಿಚಾರಿಸಲಾಗಿತ್ತು. ಫೆಬ್ರವರಿ 7 ರಂದು ಎಂದಿನಂತೆ ಶಾಲೆಗೆ ಹೋಗುತ್ತಿದ್ದಾಗ ವಿದ್ಯಾರ್ಥಿನಿ ಬಿಸ್ಕೆಟ್ ಪ್ಯಾಕೇಟ್ ಜೊತೆಗೆ ಇಲಿ ಪಾಷಾಣ ಕೂಡ ಖರೀದಿಸಿ ಕೊಂಡು ಹೋಗಿದ್ದಳು.

ಇದನ್ನೂ ಓದಿ: ಹಿಮಾಚಲ ಪ್ರದೇಶ: ಏಮ್ಸ್​ನ ನಾಲ್ಕನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ಬಳಿಕ, ಶಾಲೆಯಲ್ಲಿ ಬಿಸ್ಕೇಟ್​ಗೆ ಇಲಿ ಪಾಷಾಣ ಲೇಪಿಸಿ ಸೇವನೆ ಮಾಡಿದ್ದಾಳೆ. ಇದರಿಂದ ಆಕೆ ಅಸ್ವಸ್ಥಗೊಂಡಿದ್ದು, ಕೂಡಲೇ ಶಿಕ್ಷಕರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಕಿಡ್ನಿ, ಲಿವರ್ ನಿಷ್ಕ್ರಿಯಗೊಂಡ ಹಿನ್ನೆಲೆ ಇಂದು ಚಿಕಿತ್ಸೆ ಫಲಿಸದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.

ಪ್ರಕರಣ ಸಂಬಂಧ ಮೃತ ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಅನ್ವಯ ಧರ್ಮಸ್ಥಳ ಠಾಣಾ ಪೊಲೀಸರು ಆರೋಪಿ ರೂಪೇಶ್ ಪೂಜಾರಿ ವಿರುದ್ಧ ಐಪಿಸಿ 354D, 509, POSO Act 12, 75JJ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:57 pm, Mon, 12 February 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ