ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ; ಮೃತದೇಹಗಳೊಟ್ಟಿಗೆ 5 ದಿನ ಕಳೆದ 3 ವರ್ಷದ ಮಗು
ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ನಗರದ ತಿಗಳರಪಾಳ್ಯದ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತಯಾಗಿವೆ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ತಿಗಳರ ಪಾಳ್ಯದ ಮನೆಯೊಂದರಲ್ಲಿ ಈ ವಿಷಾದಕರ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳೀಯ ಪತ್ರಿಕೆಯೊಂದರ ಸಂಪಾದಕರ ಕುಟುಂಬದ ಸದಸ್ಯರು ಆತ್ಮಹತ್ಯೆ ಮಾಡಿಕೊಂಡವರು. ಅವರ ಕುಟುಂಬದ ಭಾರತಿ (50), ಸಿಂಚನ(33), ಸಿಂಧುರಾಣಿ (30), ಮಧು ಸಾಗರ(27) ಆತ್ಮಹತ್ಯೆ ಮಾಡಿಕೊಂಡವರು. ಜತೆಗೆ ಒಂಭತ್ತು ತಿಂಗಳು ಮಗುವನ್ನು ಸಾಯಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಈಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಐದು ದಿನದ ಹಿಂದೆಯೆ ಮನೆಯಲ್ಲಿ ಅತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಮನೆಯಲ್ಲಿ ಒಟ್ಟು 6 ಮಂದಿ ಇದ್ದರು. ಕಳೆದ ಐದು ದಿನಗಳಿಂದ 3 ವರ್ಷದ ಒಂದು ಮಗು ಮಾತ್ರ ಬದುಕಿತ್ತು. ಆಹಾರವಿಲ್ಲದೆ ನಿತ್ರಾಣವಾಗಿತ್ತು. ಸದ್ಯ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೌಟುಂಬಿಕ ಕಲಹದಿಂದ ಕುಟುಂಬದ ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮನೆಯಲ್ಲಿ ಪ್ರತಿದಿನ ಗಲಾಟೆ ಆಗುತ್ತಿತ್ತು ಎನ್ನಲಾಗಿದೆ. ಶಂಕರ್ ಪತ್ನಿ ಜತೆ ಓರ್ವ ಮಗ, ಇಬ್ಬರು ಹೆಣ್ಣುಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:
Bengaluru Metro: ಬೆಂಗಳೂರು ಮೆಟ್ರೋ ರೈಲು ಸೇವೆ ಅವಧಿ ವಿಸ್ತರಣೆ; ವಿವರ ಇಲ್ಲಿದೆ
ಪ್ರಧಾನಿ ಮೋದಿ ಸ್ವೀಕರಿಸಿದ ಉಡುಗೊರೆ, ಸ್ಮರಣಿಕೆಗಳ ಹರಾಜು ಇಂದಿನಿಂದ; ನೀವೂ ಭಾಗವಹಿಸಬೇಕೆ? ಮಾಹಿತಿ ಇಲ್ಲಿದೆ
(Bengaluru 5 members of same family committed suicide in Byadarahalli)
Published On - 7:26 pm, Fri, 17 September 21