ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಗುಂಡಿಗೆ ಬಿದ್ದು ಮಗು ಸಾವು
ನಿರ್ಮಾಣ ಹಂತದ ಕಟ್ಟಡದ ಗುಂಡಿಗೆ ಬಿದ್ದು 6 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸುಲ್ತಾನ್ಪೇಟೆ ಬಳಿ ತಡರಾತ್ರಿ ನಡೆದಿದೆ.
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಗುಂಡಿಗೆ ಬಿದ್ದು 6 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಸುಲ್ತಾನ್ಪೇಟೆ ಬಳಿ ತಡರಾತ್ರಿ ನಡೆದಿದೆ. ಬಿಲ್ಡಿಂಗ್ ಕೆಲಸಕ್ಕೆ ಬಂದಿದ್ದ ದಂಪತಿಯ ಮಗಳು ಮಹೇಶ್ವರಿ(6) ಎಂಬ ಆರು ವರ್ಷದ ಮಗು ಆಟವಾಡುತ್ತಿದ್ದಾಗ ಲಿಫ್ಟ್ಗೆಂದು ತೆಗೆದಿದ್ದ ಗುಂಡಿಗೆ ಬಿದ್ದು ಸಾವನ್ನಪ್ಪಿದೆ. ವಿಕ್ರಮ್ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡ ಇದಾಗಿದ್ದು, ಅನುಮತಿ ಪಡೆಯದೆ 6ನೇ ಮಹಡಿ ಕಟ್ಟಡ ಕಟ್ಟಿರುವ ಮಾಲೀಕ, ಯಾವುದೇ ಮುಂಜಾಗ್ರತಾ ಕ್ರಮ ವಹಿಸದೆ ಕಟ್ಟಡ ನಿರ್ಮಾಣ ಮಾಡಿದ್ದಾನೆ. ಲಿಫ್ಟ್ ಗುಂಡಿಯಲ್ಲಿ ನೀರು ನಿಂತಿದ್ದರೂ ತೆರವು ಮಾಡದೆ ನಿರ್ಲಕ್ಷ್ಯತೋರಿದ್ದ ಕಟ್ಟಡದ ಮಾಲೀಕ, ಈ ಕುರಿತು ಕೆ.ಆರ್.ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಗುಡಿಸಲಿಗೆ ಬೆಂಕಿ ಬಿದ್ದು ವ್ಯಕ್ತಿ ಸಜೀವ ದಹನ
ಚಿಕ್ಕಬಳ್ಳಾಫುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಗುಡಿಸಲಿಗೆ ಬೆಂಕಿ ತಗುಲಿ ನರಸಿಂಹಪ್ಪ(50) ಎಂಬಾತ ಸಜೀವ ದಹನವಾಗಿರುವ ಘಟನೆ ನಡೆದಿದೆ. ಜೊತೆಗೆ ಗುಡಿಸಲಿನಲ್ಲಿದ್ದ 5 ಕುರಿಗಳು ಸಾವನ್ನಪ್ಪಿವೆ. ಇತನ ಗುಡಿಸಲು ಅರಣ್ಯದ ಪಕ್ಕದಲ್ಲಿದ್ದ ಕಾರಣ ಅರಣ್ಯಕ್ಕೆ ಬೆಂಕಿ ಬಿದ್ದು ಗುಡಿಸಲಿಗೂ ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಕಲಬುರಗಿ: ಒಂದು ದಿನದ ಹಸುಗೂಸು ಸಾವು: ವೈದ್ಯರ ನಿರ್ಲಕ್ಷ್ಯಕ್ಕೆ ಕುಟುಂಬದ ಆಕ್ರೋಶ
ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ
ಬೆಂಗಳೂರು: ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂದಿನಿ ಲೇಔಟ್ನ ಜೈ ಮಾರುತಿ ನಗರದಲ್ಲಿ ನಡೆದಿದೆ. ಕಾವ್ಯಾ(23) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿರುವ ರ್ದುದೈವಿ, 9 ದಿನಗಳ ಹಿಂದೆಯಷ್ಟೇ ಈ ಕುಟುಂಬ ಜೈ ಮಾರುತಿ ನಗರಕ್ಕೆ ಬಂದು ನೆಲೆಸಿದ್ದರು. ಇನ್ನು ಕಾವ್ಯಾ 8 ವರ್ಷಗಳ ಹಿಂದೆ ವೆಂಕಟೇಶ್ ಎಂಬುವವರ ಜೊತೆ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಗಂಡು ಮಕ್ಕಳು ಸಹ ಇದ್ದಾರೆ.
ಮೂಲತಃ ಮೈಸೂರಿನವರಾದ ವೆಂಕಟೇಶ್ ಬಂಡೆ ಕೆಲಸ ಮಾಡುತ್ತಿದ್ದಾನೆ. ಈ ಸಂಬಂಧ ಇತ ಮೂರು ದಿನಕ್ಕೊಮ್ಮೆ ಮನೆಗೆ ಹೋಗುತ್ತಿದ್ದನಂತೆ. ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಪತ್ನಿ ಕಾವ್ಯಾ ನೇಣಿಗೆ ಶರಣಾಗಿದ್ದಾಳೆ. ಈ ಕುರಿತು ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ