AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಕಾರಿನ ಮೇಲೆ ಬಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ: ತಾಯಿ, ಮಗಳು ಸ್ಥಳದಲ್ಲೇ ಸಾವು

ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಕಾರಿನ ಮೇಲೆ ಬಿದ್ದ ಪರಿಣಾಮ ತಾಯಿ ಮತ್ತು ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ದಾರಣ ಘಟನೆ ಆನೆಕಲ್​ ತಾಲೂಕಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ.

Bengaluru: ಕಾರಿನ ಮೇಲೆ ಬಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ: ತಾಯಿ, ಮಗಳು ಸ್ಥಳದಲ್ಲೇ ಸಾವು
ಅಪಘಾತದಲ್ಲಿ ಸಾವನ್ನಪ್ಪಿದ ತಾಯಿ, ಮಗಳುImage Credit source: news9live.com
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Feb 01, 2023 | 6:43 PM

Share

ಬೆಂಗಳೂರು: ಕಾಂಕ್ರೀಟ್ ಮಿಕ್ಸರ್ ಲಾರಿ (concrete mixer lorry) ಯೊಂದು ಕಾರಿನ ಮೇಲೆ ಬಿದ್ದ ಪರಿಣಾಮ ತಾಯಿ ಮತ್ತು ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ದಾರಣ ಘಟನೆ ಆನೆಕಲ್​ ತಾಲೂಕಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ. ತಾಯಿ ತನ್ನ ಮಗಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿದ್ದು, ಗಾಯತ್ರಿ ಕುಮಾರ್ (47) ಮತ್ತು ಸಮತಾ ಕುಮಾರ್ (16) ಮೃತ ದುದೈವಿಗಳು ಎಂದು ಗುರುತಿಸಲಾಗಿದೆ. ಬನ್ನೇರುಟ್ಟ ಸಮೀಪದ ತಿರುವಿನಲ್ಲಿ ವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಸದ್ಯ ಟ್ರಕ್ ಚಾಲಕ ತಲೆಮರೆಸಿಕೊಂಡಿದ್ದು, ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೃತ ಗಾಯತ್ರಿ ಕುಮಾರ್​ ಅವರು ಸುನೀಲ್​ ಕುಮಾರ್​ ಎಂಬುವವರನ್ನು ಮದುವೆ ಆಗಿದ್ದು, ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ. ಅಪಘಾತವಾಗುತ್ತಿದ್ದಂತೆ ಕಾರಿನ ತುರ್ತು ವ್ಯವಸ್ಥೆಯ ಮೂಲಕ ಪತಿ ಸುನೀಲ್​ ಕುಮಾರ್​ ಅವರಿಗೆ ಸಂದೇಶ ಹೋಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಸುನೀಲ್​ ಕುಮಾರ್​, ಲಾರಿ ಕೆಳಗೆ ಕಾರಿನಲ್ಲಿ ಸಿಲುಕಿರುವ ಪತ್ನಿ ಮತ್ತು ಮಗಳನ್ನು ಹೊರತೆಗೆಯಲು ಹರಸಾಹಸ ಪಟ್ಟಿದ್ದಾರೆ. ನಾಲ್ಕು ಕ್ರೇನ್​, ಒಂದು ಜೆಸಿಬಿ ನೆರವಿನಿಂದ ಕಾರಿನಲ್ಲಿದ್ದ ಮೃತದೇಹಗಳನ್ನು ಪೊಲೀಸರು ಹೊರತೆಗೆದಿದ್ದಾರೆ. ಕಾಂಕ್ರೀಟ್ ಮಿಕ್ಸರ್ ಟ್ರಕನ್ನು ರಕ್ಷಣಾ ಸಿಬ್ಬಂದಿಗಳು ಬೇರೆಡೆ ಸ್ಥಳಾಂತರಿಸಿದ್ದಾರೆ.

ಇದನ್ನೂ ಓದಿ: Bengaluru Crime: ಬೆಂಗಳೂರಿನಲ್ಲೊಂದು ಭೀಕರ ಘಟನೆ; ಗರ್ಲ್​ಫ್ರೆಂಡ್​ನ 3 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ, ಕೊಲೆ

ಕೇರಳದಿಂದ ರಾಜ್ಯಕ್ಕೆ ಗಾಂಜಾ, ಡ್ರಗ್ಸ್​ ಸಾಗಿಸುತ್ತಿದ್ದ ಮೂವರ ಸೆರೆ

ಮಂಗಳೂರು: ಕೇರಳದಿಂದ ಕರ್ನಾಟಕಕ್ಕೆ ಗಾಂಜಾ, ಡ್ರಗ್ಸ್​ ಸಾಗಿಸುತ್ತಿದ್ದ ಮೂವರನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ನಿವಾಸಿಗಳಾದ ಅಬೂಬಕ್ಕರ್ ಸಿದ್ದಿಕಿ ಅಲಿಯಾಸ್ ಹ್ಯಾರಿಸ್​, ಎಂ.ಅಖಿಲ್, ಹೈದರ್ ಅಲಿ ಅಲಿಯಾಸ್ ಗಾಡಿ ಹೈದರ್​ ಬಂಧಿತರು. 27 ಲಕ್ಷ ರೂ. ಮೌಲ್ಯದ 111 ಕೆಜಿ ಗಾಂಜಾ, ಮಾದಕದ್ರವ್ಯ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾಮುಕನ ಅಟ್ಟಹಾಸ; ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ

ಬಿಜೆಪಿ ಸೇರಿದ್ದಕ್ಕೆ ಮನೆಗೆ ನುಗ್ಗಿ ಕಾರ್ಯಕರ್ತನಿಗೆ ಮಾರಣಾಂತಿಕ ಹಲ್ಲೆ

ಚಿಕ್ಕಮಗಳೂರು: ಪಕ್ಷ ತೊರೆದು ವಿರೋಧಿ ಪಕ್ಷ ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಎನ್​.ಆರ್​.ಪುರ ತಾಲೂಕಿನ ನಾಗಲಾಪುರ ಸಮೀಪದ ರಾವುರು ಗ್ರಾಮದಲ್ಲಿ ನಡೆದಿದೆ. ಶಿವು ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ಕಾರ್ಯಕರ್ತನಾಗಿದ್ದು, ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಹಿಂಬಾಲಕರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:20 pm, Wed, 1 February 23

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ