ಬೆಂಗಳೂರು: ಬ್ಲೇಡ್ನಿಂದ ಕತ್ತು ಕೊಯ್ದು ಭೀಕರ ಕೊಲೆ; ಕಾರಣವೇನು?
ಇಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ಕಲಾಸಿಪಾಳ್ಯ(Kalasipalya) ಠಾಣಾ ವ್ಯಾಪ್ತಿಯಲ್ಲಿ ನವಂಬರ್ 11 ರಂದು ಮಧ್ಯಾಹ್ನ 2 ಗಂಟೆಗೆ ನಡೆದಿದೆ. ಹೌದು, ಬ್ಲೇಡ್ನಿಂದ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ನಂತರ ದುಷ್ಕರ್ಮಿಗಳು ಚೀಲದಲ್ಲಿ ತುಂಬಿ ಆತನನ್ನು ಸುಟ್ಟು ಹಾಕಿದ್ದರು. ಇದೀಗ ಆರೋಪಿ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರು, ನ.12: ಹಣಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ಕಲಾಸಿಪಾಳ್ಯ(Kalasipalya) ಠಾಣಾ ವ್ಯಾಪ್ತಿಯಲ್ಲಿ ನವಂಬರ್ 11 ರಂದು ಮಧ್ಯಾಹ್ನ 2 ಗಂಟೆಗೆ ನಡೆದಿದೆ. ಹೌದು, ಬ್ಲೇಡ್ನಿಂದ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ನಂತರ ದುಷ್ಕರ್ಮಿಗಳು ಚೀಲದಲ್ಲಿ ತುಂಬಿ ಆತನನ್ನು ಸುಟ್ಟು ಹಾಕಿದ್ದರು. ಸುಧಾರಣ್ (28) ಮೃತ ವ್ಯಕ್ತಿ. ತಮಿಳುನಾಡು ಮೂಲದವರಾದ ಆರೋಪಿ ವಿಜಯಕುಮಾರ್ (33) ಹಾಗೂ ಮೃತ ವ್ಯಕ್ತಿ ಸುಧಾರಣ್ ಇಬ್ಬರೂ ತರಕಾರಿ ಮಂಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಇನ್ನು ಈ ಘಟನೆ ಕಲಾಸಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಣಕ್ಕಾಗಿ ಶುರುವಾದ ಜಗಳ
ನಿನ್ನೆ ಮಧ್ಯಾಹ್ನ ಹಣದ ವಿಷಯವಾಗಿ ಇಬ್ಬರ ಮಧ್ಯೆ ಜಗಳ ಶುರುವಾಗಿತ್ತು. ಜೇಬಿನಲ್ಲಿದ್ದ ಹಣ ಯಾಕೆ ತಗೊಂಡೆ ಎಂದು ವಿಜಯಕುಮಾರ್ ಜೊತೆ ಜಗಳ ತೆಗೆದಿದ್ದ ಸುಧಾರಣ್ ಕುಮಾರ್, ಈ ವೇಳೆ ಮಾತಿಗೆ ಮಾತು ಬೆಳೆದು ಜಗಳ ಜೋರಾಗಿದೆ. ಕೂಡಲೇ ವಿಜಯಕುಮಾರ್ ಬ್ಲೇಡ್ನಿಂದ ಸುಧಾರಣ್ ಕತ್ತು ಕುಯ್ದು ಕೊಲೆ ಮಾಡಿದ್ದಾನೆ. ನಂತರ ಶವ ಚೀಲದಲ್ಲಿ ಶವ ಹಾಕಿ ಬೆಂಕಿ ಹಚ್ಚಿ ಸುಟ್ಟು ಎಸ್ಕೇಪ್ ಆಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು, ಆರೋಪಿಯನ್ನ ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಕಲಾಸಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ಬೈಕ್ ಅಡ್ಡ ಗಟ್ಟಿ ಯುವಕನನ್ನ ಕಲ್ಲಿನಿಂದ ಜಜ್ಜಿ ಕೊಲೆ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
KSRTC ಬಸ್‍ನ ಟೈರ್ ಬ್ಲಾಸ್ಟ್, ಹಳ್ಳಕ್ಕೆ ಉರುಳಿದ ಬಸ್
ರಾಮನಗರ: KSRTC ಬಸ್‍ನ ಟೈರ್ ಬ್ಲಾಸ್ಟ್ ಆಗಿ ಹಳ್ಳಕ್ಕೆ ಉರುಳಿದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಚಿಕ್ಕತೊರೆಪಾಳ್ಯ ಬ್ರಿಡ್ಜ್ ಬಳಿ ನಡೆದಿದೆ. 10ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯವಾಗಿದ್ದು, ಮಾಗಡಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಸ್ ಹುಲಿಯೂರುದುರ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದು, ಟೈರ್ ಸಿಡಿದು ಚಾಲಕನ ನಿಯಂತ್ರಣಕ್ಕೆ ಸಿಗದೇ ಹಳ್ಳಕ್ಕೆ ಬಿದ್ದಿದೆ. ಸ್ಥಳಕ್ಕೆ ತಾವರೆಕರೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:01 pm, Sun, 12 November 23