ಬೆಂಗಳೂರು: ಶ್ವಾನ ಬೊಗಳಿದ್ದಕ್ಕೆ ರೊಚ್ಚಿಗೆದ್ದ ವ್ಯಕ್ತಿ, ನಾಯಿ ಮಾಲೀಕನೆಂದು ಬೇರೊಬ್ಬ ವ್ಯಕ್ತಿಗೆ ಚಾಕುವಿನಿಂದ ಇರಿದ

ನಾಯಿ ಮಾಲೀಕ ತನ್ನ ಮೇಲೆ ಶ್ವಾನವನ್ನು ಛೂಬಿಟ್ಟಿದ್ದಾನೆಂದು ತಪ್ಪಾಗಿ ಭಾವಿಸಿ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿ ಓರ್ವರಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವಂತಹ ಘಟನೆ ಮಲ್ಲೇಶ್ವರಂನ 7ನೇ ಕ್ರಾಸ್‌ನಲ್ಲಿ ನಡೆದಿದೆ. ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸ್​ ಎಚ್‌ ರಾಜು ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು: ಶ್ವಾನ ಬೊಗಳಿದ್ದಕ್ಕೆ ರೊಚ್ಚಿಗೆದ್ದ ವ್ಯಕ್ತಿ, ನಾಯಿ ಮಾಲೀಕನೆಂದು ಬೇರೊಬ್ಬ ವ್ಯಕ್ತಿಗೆ ಚಾಕುವಿನಿಂದ ಇರಿದ
ಪ್ರಾತಿನಿಧಿಕ ಚಿತ್ರ
Follow us
|

Updated on: Aug 27, 2023 | 6:59 PM

ಬೆಂಗಳೂರು, ಆಗಸ್ಟ್​ 27: ನಾಯಿ ಮಾಲೀಕ ತನ್ನ ಮೇಲೆ ಶ್ವಾನವನ್ನು (dog barked) ಛೂಬಿಟ್ಟಿದ್ದಾನೆಂದು ತಪ್ಪಾಗಿ ಭಾವಿಸಿ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿ ಓರ್ವರಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವಂತಹ ಘಟನೆ ಮಲ್ಲೇಶ್ವರಂನ 7ನೇ ಕ್ರಾಸ್‌ನಲ್ಲಿ ನಡೆದಿದೆ. ರಾಜಾಜಿನಗರ ನಿವಾಸಿ ಬಾಲಸುಬ್ರಹ್ಮಣ್ಯ ಚಾಕು ಇರಿತಕ್ಕೊಳಗಾದ ವ್ಯಕ್ತಿ. ಹಲ್ಲೆ ಮಾಡಿದ ದಿನಗೂಲಿ ಕೆಲಸಗಾರ ಎಚ್ ರಾಜು ಎಂಬಾತನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ.  ಮಾಹಿತಿ ಪ್ರಕಾರ ಎಚ್ ರಾಜು ಆಗಸ್ಟ್ 21 ರಂದು ಕೆಲಸ ಮುಗಿಸಿಕೊಂಡು ಮನೆಗೆ ವಾಪಸಾಗುತ್ತಿದ್ದರು. ಈ ವೇಳೆ ನಾಯಿಯೊಂದು ಬೊಗಳಿದೆ. ಆಗ ಎದುರಿನಿಂದ ಬಂದ ವ್ಯಕ್ತಿಯನ್ನು ನೋಡಿದ ರಾಜು ಇವರೇ ಸಾಕು ನಾಯಿಯ ಮಾಲೀಕ ಎಂದು ತಪ್ಪಾಗಿ ಭಾವಿಸಿ, ಕೋಪಗೊಂಡು ಚಾಕುವಿನಿಂದ ಇರಿದಿದ್ದಾನೆ.

ಕೆಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಗೊಂಡ ಬಾಲಸುಬ್ರಮಣ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತಾಗಿ ಬಾಲಸುಬ್ರಮಣ್ಯ ಮಾತನಾಡಿದ್ದು, ಆತ ನನ್ನ ಕಡೆಗೆ ಬರಲು ಆರಂಭಿಸಿದ್ದು, ಜೊತೆಗೆ ನನ್ನನ್ನು ನಿಂದಿಸಿದ. ಆತ ಏನು ಹೇಳುತ್ತಿದ್ದಾನೆಂದು ನನಗೆ ಅರ್ಥವಾಗಿಲ್ಲ. ನಾನು ವಿವರಿಸುವ ಮೊದಲೇ ನನ್ನ ಮೇಲೆ ಚಾಕುವಿನಿಂದ ಇರಿಯಲಾಗಿತ್ತು.

ಇದನ್ನೂ ಓದಿ: ಬೆಳಗಾವಿ: ಕುಡಿದು ಬಂದು ಗಲಾಟೆ ಮಾಡ್ತಿದ್ದ ಮಗ; ಕಾಟ ತಾಳಲಾರದೇ ಕೊಲೆ ಮಾಡಿಸಿದ ತಂದೆ

ನನ್ನ ಕೈ ಮತ್ತು ಬೆರಳುಗಳಿಗೂ ಚಾಕುವಿನಿಂದ ಇರಿದಿದ್ದಾನೆ. ನಾನು ನೋವಿನಿಂದ ನರಳಾಡಲು  ಪ್ರಾರಂಭಿಸಿದೆ. ಬಳಿಕ ಕೆಲವು ದಾರಿಹೋಕರು ನನ್ನನ್ನು ಆಸ್ಪತ್ರೆಗೆ ಸೇರಿಸಿದರು ಎಂದು ಬಾಲಸುಬ್ರಮಣ್ಯ ಹೇಳಿರುವುದಾಗಿ ಹಿಂದೂಸ್ತಾನ್​ ಟೈಮ್ಸ್​ ವರದಿ ಮಾಡಿದೆ.

ಇದನ್ನೂ ಓದಿ: ಮೈಸೂರು: ಗಂಡ-ಹೆಂಡತಿ, ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರ ಮೃತದೇಹ ಪತ್ತೆ

ಸದ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸ್​ ಎಚ್‌ ರಾಜು ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹುಚ್ಚುನಾಯಿ ಹಾವಳಿ: ಪ್ರವಾಸಿಗರು ಆಕ್ರೋಶ

ಮಂಡ್ಯ: ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ನ ಬೃಂದಾವನದಲ್ಲಿ ಹುಚ್ಚುನಾಯಿ ಹಾವಳಿ ಹೆಚ್ಚಳವಾಗಿದ್ದು, ಬೃಂದಾವನ ವೀಕ್ಷಣೆಗೆ ಬಂದಿದ್ದ ಐವರು ಪ್ರವಾಸಿಗರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿ ಕಚ್ಚಿದೆ. ಹುಚ್ಚು ನಾಯಿ ದಾಳಿಗೆ ಸಿಲುಕಿದ ಐವರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಬೃಂದಾವನ ಅಧಿಕಾರಿಗಳ ವಿರುದ್ದ ಪ್ರವಾಸಿಗರು ಆಕ್ರೋಶ ಹೊರಹಾಕಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು