Bengaluru: ಪೊಲೀಸರು ತನ್ನನ್ನು ಹಿಡಿಯುತ್ತಾರೆಂಬ ಆತಂಕದಲ್ಲಿ ಓಡಿದ್ದ ವ್ಯಕ್ತಿ ರೈಲ್ವೆ ಫ್ಲೈ ಓವರ್​ನಿಂದ ಬಿದ್ದು ಮೃತ ಶಂಕೆ

ಪೊಲೀಸರು ತನ್ನನ್ನು ಹಿಡಿಯುತ್ತಾರೆಂಬ ಆತಂಕದಲ್ಲಿ ಓಡಿದ್ದ ವ್ಯಕ್ತಿ ರೈಲ್ವೆ ಫ್ಲೈ ಓವರ್​ನಿಂದ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ನಗರದ ರೈಲ್ವೆ ಫ್ಲೈಓವರ್​ ಬಳಿ ಘಟನೆ ನಡೆದಿದೆ.

Bengaluru: ಪೊಲೀಸರು ತನ್ನನ್ನು ಹಿಡಿಯುತ್ತಾರೆಂಬ ಆತಂಕದಲ್ಲಿ ಓಡಿದ್ದ ವ್ಯಕ್ತಿ ರೈಲ್ವೆ ಫ್ಲೈ ಓವರ್​ನಿಂದ ಬಿದ್ದು ಮೃತ ಶಂಕೆ
ಪ್ರಾತಿನಿಧಿಕ ಚಿತ್ರImage Credit source: indiatoday.in
Follow us
|

Updated on:Apr 03, 2023 | 6:20 PM

ಬೆಂಗಳೂರು: ಪೊಲೀಸರು ತನ್ನನ್ನು ಹಿಡಿಯುತ್ತಾರೆಂಬ ಆತಂಕದಲ್ಲಿ ಓಡಿದ್ದ ವ್ಯಕ್ತಿ ರೈಲ್ವೆ ಫ್ಲೈ ಓವರ್ (railway flyover) ​ನಿಂದ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ನಗರದ ರೈಲ್ವೆ ಫ್ಲೈಓವರ್​ ಬಳಿ ಘಟನೆ ನಡೆದಿದೆ. ಶ್ರೀರಾಂಪುರದ ಸ್ವತಂತ್ರಪಾಳ್ಯದ ನಿವಾಸಿ ಅಬ್ರಹಾಂ(30) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಖಾಸಗಿ ಅಪಾರ್ಟ್​ಮೆಂಟ್​ ಬಳಿ ನಿರ್ಜನ ಪ್ರದೇಶದಲ್ಲಿ ಗಾಂಜಾ ಸೇದುತ್ತಿದ್ದ ಇಬ್ಬರು ವ್ಯಕ್ತಿಗಳ ಜೊತೆ ಅಬ್ರಹಾಂ ಕೂಡ ಇದ್ದ ಎನ್ನಲಾಗಿದೆ. ಗಾಂಜಾ ಸೇದುತ್ತಿದ್ದ ಇಬ್ಬರನ್ನು ಪೊಲೀಸರು ಹಿಡಿದುಕೊಂಡಿದ್ದು, ತನನ್ನು ಪೊಲೀಸರು ಹಿಂಬಾಲಿಸುತ್ತಿರುವ ಭ್ರಮೆಯಲ್ಲಿ ಓಡಿದ್ದಾನೆ. ಗಾಂಜಾ ಮತ್ತಿನಲ್ಲಿ ಓಡುವಾಗ ಬಿದ್ದು ಮೃತಪಟ್ಟ ಶಂಕೆ ವ್ಯಕ್ತವಾಗಿದೆ. ಸದ್ಯ ಅಬ್ರಹಾಂ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನನ್ನ ಮಗನ ಮೇಲೆ ಪೊಲೀಸರೇ ಹಲ್ಲೆ ಮಾಡಿ ಕೊಂದಿದ್ದಾರೆ: ಅಬ್ರಹಾಂ ತಂದೆ ಶಂಕರ್​ ಆರೋಪ

ಘಟನೆ ಕುರಿತಾಗಿ ಅಬ್ರಹಾಂ ತಂದೆ ಶಂಕರ್​ ಮಾತನಾಡಿದ್ದು, ನನ್ನ ಮಗನ ಮೇಲೆ ಪೊಲೀಸರೇ ಹಲ್ಲೆ ಮಾಡಿ ಕೊಂದಿದ್ದಾರೆ ಎಂದು ಬೆಂಗಳೂರಿನ ಮಲ್ಲೇಶ್ವರಂ ಠಾಣೆ ಪೊಲೀಸರ ವಿರುದ್ಧ ಆರೋಪ ಮಾಡಿದ್ದಾರೆ. ನನ್ನ ಮಗ ಅಬ್ರಹಾಂಗೆ ಈ ಹಿಂದೆ ಗಾಂಜಾ ಸೇದುವ ಚಟವಿತ್ತು. ಈಗ ಎಲ್ಲಾ ಚಟಗಳನ್ನು ಬಿಟ್ಟು  ಒಳ್ಳೆಯವನಾಗಿದ್ದ. ಇಂದು ಮಧ್ಯಾಹ್ನ ಊಟ ಮಾಡಲು ಮನೆಗೆ ಬಂದಿದ್ದು, ಊಟದ ನಂತರ ಕೆಲಸ ನಿಮಿತ್ತ ಹೊರಗೆ ಹೋಗಿದ್ದ. ಈ ವೇಳೆ ಅಬ್ರಹಾಂನನ್ನು ಹಿಡಿದು ಪೊಲೀಸರು ಹಲ್ಲೆ ಮಾಡಿದ್ದಾರೆ. ಆತನ ಶವದ ಮೇಲೆ ಪೊಲೀಸರ ಬೂಟಿನ ಗುರುತುಗಳಿವೆ. ನನ್ನ ಮಗನ ಸಾವಿಗೆ ನ್ಯಾಯಬೇಕೆಂದು ಶಂಕರ್​ ಪಟ್ಟುಹಿಡಿದಿದ್ದಾರೆ.​

ಬೆಂಗಳೂರಿನಲ್ಲಿ ಭೀಕರ ಅಪಘಾತ: ಮಹಿಳೆಯ ತಲೆ ಛಿದ್ರ, ಅಜ್ಜಿಯ ಎರಡೂ ಕಾಲು ಕಟ್

ನಿನ್ನೆ ನಗರದ ನಾಯಂಡಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರು. ಅದೃಷ್ಟವಶಾತ್ ಮಗು ಹಾಗೂ ಅಜ್ಜಿ ಪ್ರಾಣಾಪಾಯದಿಂದ ಪಾರಾಗಿದ್ದರು. ಸಿಮೆಂಟ್ ತುಂಬಿದ್ದ ಲಾರಿ ಬೈಕ್​​ ಮೇಲೆ ಹರಿದು ಬಳಿಕ ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಸ್ಕೂಟಿ ಚಲಾಯಿಸುತ್ತಿದ್ದ ಅನುಷಾ ತಲೆ ಛಿದ್ರವಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದರು. ಅಪಘಾತದಲ್ಲಿ ಮೃತ ಅನುಷಾ ತಾಯಿ ವೃದ್ಧೆ ವನಜಾಕ್ಷಿ ಹಾಗೂ ಮಗ ಆರ್ಯಗೆ ಗಂಭೀರ ಗಾಯಗಳಾಗಿದ್ದವು.

ಇದನ್ನೂ ಓದಿ: Devanahalli: ಬ್ಯೂಟಿ ಪಾರ್ಲರ್ ಆಂಟಿಗಾಗಿ ಪತ್ನಿಯನ್ನೆ ಕೊಲೆ ಮಾಡಿದನಾ ಗಂಡ? ಮದುವೆಯಾಗಿ ಮಗುವಿದ್ದರೂ ಗಂಡನಿಗೆ ಬೇರೊಂದು ಲವ್ವಿಡವ್ವಿ!

ಮಂಡ್ಯ ಮೂಲದ ಅನುಷಾ ಸಾವಿಗೀಡಾದ ಮಹಿಳೆ. ಈಕೆ ತನ್ನ ತಾಯಿ ಮತ್ತು 7 ವರ್ಷದ ಮಗುವನ್ನು ದ್ವಿಚಕ್ರವಾಹನದಲ್ಲಿ ಕೂರಿಸಿಕೊಂಡು ದೀಪಾಂಜಲಿನಗರ ಕಡೆಯಿಂದ ಬರುತ್ತಿದ್ದರು. ಈ ಸಂದರ್ಭದಲ್ಲಿ ಸಿಮೆಂಟ್ ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ಬೈಕ್​ ಮೇಲೆ ಹರಿದು ಬಳಿಕ ಕೆಎಸ್​ಆರ್​​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿತ್ತು. ಈ ವೇಳೆ ಲಾರಿ ಅನುಷಾ ತಲೆ ಮೇಲೆ ಹರಿದಿದೆ. ಇನ್ನು ಅಜ್ಜಿ ವನಜಾಕ್ಷಿಯ ಎರಡು ಕಾಲುಗಳ ಕಟ್ ಆಗಿದ್ದು, ಮಗುವಿಗೂ ಸಹ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿತ್ತು.

ದೊಣ್ಣೆಯಿಂದ ಹೊಡೆದು ಯುವಕನ ಬರ್ಬರ ಕೊಲೆ

ಅದೇ ರೀತಿಯಾಗಿ ದೊಣ್ಣೆಯಿಂದ ಹೊಡೆದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಪಿಳ್ಳಣ್ಣ ಗಾರ್ಡನ್​ನಲ್ಲಿ ನಡೆದಿದೆ. ಸತೀಶ್(22) ಕೊಲೆಯಾದ ಯುವಕ. ನಿನ್ನೆ (ಏ.02)ರ ತಡರಾತ್ರಿ ದುಷ್ಕರ್ಮಿಗಳು ದೊಣ್ಣೆಯಿಂದ ಸತೀಶ್​ನ ತೆಲೆಗೆ ಹೊಡೆದು ಕೊಲೆ ಮಾಡಿದ್ದಾರೆ. ನಂತರ ರೈಲ್ವೆ ಟ್ರ್ಯಾಕ್ ಬಳಿ ಇರುವ ಖಾಲಿ ಜಾಗದಲ್ಲಿ ಮೃತದೇಹ ಬಿಸಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಎಫ್​ಎಸ್​ಎಲ್​ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೆಂಗಳೂರಿನ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: Music Volume ​ಕಡಿಮೆ ಮಾಡಿ ಎಂದಿದ್ದಕ್ಕೆ ಸೇನಾಧಿಕಾರಿಯ ಸಹೋದರನ ಮೇಲೆ ಟೆಕ್ಕಿಗಳಿಂದ ಹಲ್ಲೆ

ರಸ್ತೆ ಅಪಘಾತ ತಂದೆ, ಮಗಳು ಸಾವು

ರಾಮನಗರ: ಕಾರು ಮತ್ತು ಬೈಕ್​ ನಡುವೆ ಅಪಘಾತ ಸಂಭವಿಸಿ, ಬೈಕ್​ನಲ್ಲಿ ತೆರಳುತ್ತಿದ್ದ ತಂದೆ, ಮಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಸಾಬರಪಾಳ್ಯ ಬಳಿ ನಡೆದಿದೆ. ಕಲ್ಯಾ ಗ್ರಾಮದ ನಿವಾಸಿ ಯೋಗೇಶ್(47), ಪುತ್ರಿ ಹರ್ಷಿತಾ(14) ಮೃತ ದುರ್ದೈವಿಗಳು. ಯೋಗೇಶ್ ಮಗಳನ್ನು ಬೈಕ್​ನಲ್ಲಿ ಶಾಲೆಗೆ ಬಿಡಲು ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:25 pm, Mon, 3 April 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ