ಬೆಂಗಳೂರು: ಬಹುಮಾನ ಪಡೆಯುವ ವೇಳೆ ಕುಸಿದುಬಿದ್ದು ಯುವಕ ಸಾವು
ಬೆಂಗಳೂರಿನ (Bengaluru) ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ಬಹುಮಾನ ಪಡೆಯುವ ವೇಳೆ ಕುಸಿದುಬಿದ್ದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಕೂಡಲೇ ರಾಬಿನ್ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
ಬೆಂಗಳೂರು, ಜ.26: ಬಹುಮಾನ ಪಡೆಯುವ ವೇಳೆ ಕುಸಿದುಬಿದ್ದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಿನ (Bengaluru) ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಷ್ಟ್ರೀಕೃತ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದ ರಾಬಿನ್(22) ಮೃತವ್ಯಕ್ತಿ. ಗಣರಾಜ್ಯೋತ್ಸವ ಹಿನ್ನೆಲೆ ಕ್ರಿಕೆಟ್ ಪಂದ್ಯಾವಳಿ ನಡೆಸಲಾಗಿತ್ತು. 2-3 ಪಂದ್ಯಗಳಲ್ಲಿ ಆಡಿ ಗೆಲುವಿಗೆ ಕಾರಣಕರ್ತನಾಗಿದ್ದ ರಾಬಿನ್, ಪಂದ್ಯ ಗೆದ್ದ ಬಳಿಕ ಬಹುಮಾನ ಪಡೆಯುವಾಗ ವೇದಿಕೆ ಮೇಲೆಯೇ ಹೃದಯಾಘಾತ(Heart Attack)ವಾಗಿ ಕುಸಿದು ಬಿದ್ದಿದ್ದಾನೆ. ಬಳಿಕ ಕೂಡಲೇ ರಾಬಿನ್ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
ಕೊಲೆಯಾದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ
ರಾಮನಗರ: ನಗರದ ಜಿಲ್ಲಾ ಕ್ರೀಡಾಂಗಣದ ಹಿಂದಿನ ರೈಲು ಹಳಿ ಬಳಿ ಕೊಲೆಯಾದ ಸ್ಥಿತಿಯಲ್ಲಿ 6 ವರ್ಷದ ಬಾಲಕನ ಶವ ಪತ್ತೆಯಾಗಿದೆ. ಕೊಲೆ ಮಾಡಿ ಹಳಿ ಬಳಿ ಎಸೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಬಾಲಕನ ಶವ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ರಾಮನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಮಂಡ್ಯ: ಶಿಕ್ಷಕಿ ಕೊಲೆಯಾದ 30 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಪೊಲೀಸರು
ಕಾರುಗಳ ನಡುವೆ ಸರಣಿ ಅಪಘಾತ, ಐವರಿಗೆ ಗಾಯ
ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಗೌರಿಕಟ್ಟೆಯಲ್ಲಿ ಹೊರನಾಡು, ಶೃಂಗೇರಿ ಪ್ರವಾಸಕ್ಕೆ ಬಂದಿದ್ದವರ ಕಾರುಗಳ ನಡುವೆ ಡಿಕ್ಕಿಯಾಗಿದ್ದು, ಗಾಯಾಳುಗಳಿಗೆ ಕೊಪ್ಪ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕಿರಿದಾದ ಹಾಗೂ ತಿರುವುಗಳಿರುವ ಶೃಂಗೇರಿ-ಹೊರನಾಡು ಪರ್ಯಾಯ ರಸ್ತೆ ಇದಾಗಿದ್ದು, ಸರಣಿ ಅಪಘಾತದಿಂದ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಟ ನಡೆಸುವ ಸ್ಥಿತಿ ಇದಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ