ಬೆಂಗಳೂರು: ಅಕ್ರಮ ಸಂಬಂಧ ಆರೋಪ, ಪತಿಯಿಂದಲೇ ಪತ್ನಿಯ ಕೊಲೆ

ಅಕ್ರಮ ಸಂಬಂಧ ಹಿನ್ನಲೆ ಪತಿಯೇ ಪತ್ನಿಯನ್ನ ಕೊಲೆ ಮಾಡಿರುವ ಘಟನೆ ನಗರದ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.14 ವರ್ಷಗಳ ಹಿಂದೆ ಶೇಕ್ ಸೊಹೇಲ್ ಜೊತೆ ಮದುವೆಯಾಗಿದ್ದ ತಬ್ಸಿಮ್ ಬೇಬಿಯನ್ನ ಇದೀಗ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಬೆಂಗಳೂರು: ಅಕ್ರಮ ಸಂಬಂಧ ಆರೋಪ, ಪತಿಯಿಂದಲೇ ಪತ್ನಿಯ ಕೊಲೆ
ಸಾಂದರ್ಭಿಕ ಚಿತ್ರ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Mar 21, 2023 | 9:55 AM

ಬೆಂಗಳೂರು: ಅಕ್ರಮ ಸಂಬಂಧ ಶಂಕಿಸಿ ಪತಿಯೇ ಪತ್ನಿಯನ್ನ ಕೊಲೆ ಮಾಡಿರುವ ಘಟನೆ ನಗರದ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 14 ವರ್ಷಗಳ ಹಿಂದೆ ಶೇಕ್ ಸೊಹೇಲ್ ಜೊತೆ ಮದುವೆಯಾಗಿದ್ದ ತಬ್ಸಿಮ್ ಬೇಬಿಯನ್ನ ಇದೀಗ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕೋಲ್ಕತ್ತಾ ಮೂಲದ ಶೇಕ್ ಸೊಹೇಲ್​ ಪತ್ನಿಯ ಅಕ್ರಮ ಸಂಬಂಧ ವಿಚಾರ ತಿಳಿದು ಆರು ವರ್ಷಗಳ ಹಿಂದೆ ಕೋಲ್ಕತ್ತಾಗೆ ಕರೆದುಕೊಂಡು ಹೋಗಿದ್ದ. ಆದರೆ ಮತ್ತೆ ಪತಿಯನ್ನ ಬಿಟ್ಟು ಪ್ರಿಯಕರನ ಜೊತೆ ಇರಲು ಬೆಂಗಳೂರಿಗೆ ಬಂದಿದ್ದಳು. ಇದೀಗ ಆರು ವರ್ಷಗಳ ಬಳಿಕ ಬೆಂಗಳೂರಿಗೆ ಬಂದಿದ್ದ ಪತಿ ಶೇಕ್​​ ಸೊಹೆಲ್. ನಿನ್ನೆ ರಾತ್ರಿ ಮಾತನಾಡಬೇಕೆಂದು ತಬ್ಸಿಮ್ ಬೇಬಿಯನ್ನ ಭೇಟಿಯಾಗಿದ್ದನು. ​ಈ ವೇಳೆ ಮಾತಿಗೆ ಮಾತು ಬೆಳೆದು ತಬ್ಸಿಮ್ ಬೇಬಿಯನ್ನ ಕೊಲೆಗೈದಿದ್ದಾನೆ. ಬಳಿಕ ತಬ್ಸಿಮ್ ಬೇಬಿ ಹಾಗೂ ಪ್ರಿಯಕರ ನಯೀಮ್​ಗೆ ಸೇರಿದ ಎರಡೂವರೆ ವರ್ಷದ ಮಗುವಿಗೂ ಗಾಯಗೊಳಿಸಿದ್ದಾನೆ. ಸದ್ಯ ಆರೋಪಿ ಸೊಹೇಲ್​ನನ್ನು ಹೆಣ್ಣೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಡರಾತ್ರಿ ಬಾಣಂತಿಯ ಭೀಕರ ಹತ್ಯೆ; ನಿಧಿಗಾಗಿ ನಡೆಯಿತಾ ಕೊಲೆ?

ಕೊಪ್ಪಳ: ತಡರಾತ್ರಿ ಒಂದೂವರೆ ತಿಂಗಳ ಬಾಣಂತಿ ನೇತ್ರಾವತಿ ಕುರಿ(26) ಎಂಬುವವರನ್ನ ಕೊಲೆ ಮಾಡಿರುವ ಘಟನೆ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದಿದೆ. ಅಮಾವಾಸ್ಯೆ ಹಿನ್ನೆಲೆ ನಿಧಿಗಾಗಿ ಕೊಲೆ‌ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮನೆಯ ಸ್ವಲ್ಪ ದೂರದರಲ್ಲೇ ಬೆಂಕಿ ಹಚ್ಚಿ ನೇತ್ರಾವತಿ ಕೊಲೆ ಎಂಬಾಕೆಯನ್ನ ಕೊಲೆ ಮಾಡಿದ್ದು, ಸ್ಥಳಕ್ಕೆ ಕೊಪ್ಪಳ‌ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ವಿಜಯಪುರ: ಭೀಮಾತೀರದ ಅಕ್ಕಳ ಭೀಭತ್ಸ ಕೃತ್ಯ: ಕೊಲೆ ಹಿಂದೆ ಇದೆ ಎರಡು ಪ್ರೇಮ ಕಹಾನಿ

ಲಾರಿ ಬೈಕ್ ಮುಖಾಮುಖಿ ಡಿಕ್ಕಿ; ಬೈಕ್​ ಸವಾರ ಸ್ಥಳದಲ್ಲೇ ಸಾವು

ವಿಜಯಪುರ: ನಗರದ ಹೊರ ವಲಯದ ಸೊಲ್ಲಾಪುರ ರಸ್ತೆಯಲ್ಲಿ ಲಾರಿ, ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್​ ಸವಾರ ಉಮರ್ ಬುಡನಸಾಬ್ ಲಾಟಿ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ವಿಜಯಪುರ ಸಂಚಾರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:55 am, Tue, 21 March 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ