ಬುರ್ಖಾಧಾರಿ ಮಹಿಳೆ ಜತೆ ಪ್ರಯಾಣಿಸುತ್ತಿದ್ದ ಬೈಕ್ ಸವಾರನ ಮೇಲೆ ಹಲ್ಲೆ: ಇಬ್ಬರ ಬಂಧನ; ಕಠಿಣ ಕ್ರಮದ ಭರವಸೆ ನೀಡಿದ ಸಿಎಂ
ಕೆಲ ದಿನಗಳ ಹಿಂದೆ ಡೈರಿ ಸರ್ಕಲ್ ಫ್ಲೈ ಓವರ್ ಬಳಿ ಈ ಘಟನೆ ನಡೆದಿತ್ತು ಎನ್ನಲಾಗಿದೆ. ಹಲ್ಲೆಯ ವಿಡಿಯೋ ನಿನ್ನೆಯಿಂದ ವೈರಲ್ ಆಗಿತ್ತು.
ಬೆಂಗಳೂರು: ಬುರ್ಖಾ ಧರಿಸಿದ ಮಹಿಳೆ ಜತೆ ಪ್ರಯಾಣಿಸುತ್ತಿದ್ದ ಬೈಕ್ ಸವಾರನ ನಿಂದನೆ ಮತ್ತು ಹಲ್ಲೆ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ. ಹಲ್ಲೆ ವಿಡಿಯೋ ವೈರಲ್ ಆದ 12 ಗಂಟೆಯಲ್ಲೇ ಬಂಧನ ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸರು ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಡೈರಿ ಸರ್ಕಲ್ ಫ್ಲೈ ಓವರ್ ಬಳಿ ಈ ಘಟನೆ ನಡೆದಿತ್ತು ಎನ್ನಲಾಗಿದೆ. ಹಲ್ಲೆಯ ವಿಡಿಯೋ ನಿನ್ನೆಯಿಂದ ವೈರಲ್ ಆಗಿತ್ತು. ಘಟನಾ ಸ್ಥಳ, ಬಾತ್ಮೀದಾರರು ನೀಡಿದ ಮಾಹಿತಿಯ ಅನ್ವಯ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
In connection with the case of assault on a bike rider travelling alongwith a woman of different faith,@BlrCityPolice has acted swiftly, identified & secured 2 accused persons. A case is registered & legal action is initiated. My Govt. deals with such incidents with an iron hand.
— Basavaraj S Bommai (@BSBommai) September 19, 2021
ಮಹಿಳೆಯೊಂದಿಗೆ ಪ್ರಯಾಣಿಸುತ್ತಿದ್ದ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿ, ಅನುಚಿತವಾಗಿ ವರ್ತಿಸಿದ ಇಬ್ಬರು ಆರೋಪಿಗಳನ್ನು @BlrCityPolice ಪೊಲೀಸ್ ತಕ್ಷಣವೇ ಕಾರ್ಯಪ್ರವೃತ್ತರಾಗಿ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದು, ಪ್ರಕರಣವನ್ನು ದಾಖಲಿಸಲಾಗಿದೆ.
ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
12 ಗಂಟೆ ಒಳಗೆ ಪ್ರಕರಣ ಬೇಧಿಸಿದ ತಂಡಕ್ಕೆ ಬೆಂಗಳೂರು ಪೊಲೀಸ್ ಆಯುಕ್ತರು ಮತ್ತು ಅಪರ ಪೊಲೀಸ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಜತೆಗೆ ಉತ್ತಮ ಕಾರ್ಯ ನಿರ್ವಹಿಸಿದ ತಂಡಕ್ಕೆ ಬಹುಮಾನವನ್ನೂ ಘೋಷಿಸಿದ್ದಾರೆ.
— Kamal Pant, IPS (@CPBlr) September 19, 2021
ಇದನ್ನೂ ಓದಿ:
KCET 2021 result: ಸೆ. 20ಕ್ಕೆ ಕೆಸಿಇಟಿ ಫಲಿತಾಂಶ ಪ್ರಕಟ; ಇಲ್ಲಿದೆ ಸಂಪೂರ್ಣ ಮಾಹಿತಿ
(Bengaluru Assault on bike rider bank official with Burqa weared women police arrest 2 accused)
Published On - 3:18 pm, Sun, 19 September 21