AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ಮಹಿಳೆಯರನ್ನು ಮದುವೆಯಾದ ವ್ಯಕ್ತಿ ಅರೆಸ್ಟ್; ವಯಸ್ಸಾದ ಅವಿವಾಹಿತ ಮಹಿಳೆಯರೇ ಈತನ ಟಾರ್ಗೆಟ್

ತಾನು ವೈದ್ಯ, ಇಂಜಿನಿಯರ್ ಅಂತ ಹೇಳಿ ಬರೋಬ್ಬರಿ 15 ಮಹಿಳೆಯರನ್ನು ವಿವಾಹವಾದ ಬೆಂಗಳೂರು ಮೂಲದ ವ್ಯಕ್ತಿಯನ್ನು ಮೈಸೂರಿನ ಪೊಲೀಸರು ಬಂಧಿಸಿದ್ದಾರೆ.

15 ಮಹಿಳೆಯರನ್ನು ಮದುವೆಯಾದ ವ್ಯಕ್ತಿ ಅರೆಸ್ಟ್; ವಯಸ್ಸಾದ ಅವಿವಾಹಿತ ಮಹಿಳೆಯರೇ ಈತನ ಟಾರ್ಗೆಟ್
10 ವರ್ಷಗಳಲ್ಲಿ 15 ಮಹಿಳೆಯರನ್ನು ಮದುವೆಯಾದ ವ್ಯಕ್ತಿ
Rakesh Nayak Manchi
|

Updated on:Jul 10, 2023 | 6:07 PM

Share

ಮೈಸೂರು: ಸುಳ್ಳು ಹೇಳಿ ಬರೋಬ್ಬರಿ 15 ಮಹಿಳೆಯರನ್ನು ಮದುವೆಯಾದ ವ್ಯಕ್ತಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನಿವಾಸಿಯಾಗಿರುವ 35 ವರ್ಷದ ಮಹೇಶ್ ಕೆಬಿ ನಾಯಕ್, ಮ್ಯಾಟ್ರಿಮೋನಿಯಲ್ ಸೈಟ್​ನಲ್ಲಿ (Matrimonial Site) ಮಹಿಳೆಯರನ್ನು ಸಂಪರ್ಕಿಸಿ ತಾನು ವೈದ್ಯ ಮತ್ತು ಇಂಜಿನಿಯರ್ ಅಂತ ಹೇಳಿಕೊಂಡು ಪರಿಚಯ ಮಾಡಿಕೊಂಡು ಬುಟ್ಟಿಗೆ ಬೀಳಿಸುತ್ತಿದ್ದನು. ಅಷ್ಟೇ ಅಲ್ಲದೆ, ವಯಸ್ಸಾದ ಅವಿವಾಹಿತ ಮಹಿಳೆಯರು ಹಾಗೂ ವಿಚ್ಛೇದಿತ ಮಹಿಳೆಯರೇ ಈತನ ಟಾರ್ಗೆಟ್ ಆಗಿತ್ತು.

ಇತ್ತೀಚೆಗಷ್ಟೇ ಮದುವೆಯಾದ ಮಹಿಳಾ ಸಾಫ್ಟ್‌ವೇರ್ ಇಂಜಿನಿಯರ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಕುವೆಂಪು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಮಹೇಶ್​ನನ್ನು ಬಂಧಿಸಿದ್ದಾರೆ. ಆರೋಪಿಗೆ ಬೇರೆ ಬೇರೆ ಮಹಿಳೆಯರೊಂದಿಗೆ ನಾಲ್ವರು ಮಕ್ಕಳನ್ನು ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: PUBG Love: ಭಾರತ-ಪಾಕಿಸ್ತಾನ ಪಬ್ಜಿ ಲವ್​ ಸ್ಟೋರಿ, ಭಾರತ ಈಗ ನನ್ನ ದೇಶ ಎಂದ ಪಾಕ್ ಮಹಿಳೆ

ಆರೋಪಿ 5ನೇ ತರಗತಿವರೆಗೆ ಓದಿದ್ದು, ವೈದ್ಯ, ಇಂಜಿನಿಯರ್ ಅಥವಾ ಸಿವಿಲ್ ಕಂಟ್ರಾಕ್ಟರ್‌ನಂತೆ ವರ್ತಿಸಿ ಮಹಿಳೆಯರನ್ನು ಮದುವೆಯಾಗಿದ್ದಾನೆ. ಮಹೇಶ್​​ನನ್ನು ಬಂಧಿಸಿದ ಪೊಲೀಸರು ಆತನಿಂದ 2 ಲಕ್ಷ ರೂಪಾಯಿ ನಗದು, ಎರಡು ಕಾರುಗಳು, ಚಿನ್ನಾಭರಣಗಳು ಮತ್ತು ಏಳು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ತಾನು ವೈದ್ಯ ಎಂದು ಜನರನ್ನು ನಂಬಿಸಲು ತುಮಕೂರಿನಲ್ಲಿ ಮಹೇಶ್ ನಕಲಿ ಕ್ಲಿನಿಕ್ ಸ್ಥಾಪಿಸಿದ್ದ ಎನ್ನಲಾಗಿದೆ. ಆದಾಗ್ಯೂ, ಇಂಗ್ಲಿಷ್‌ನಲ್ಲಿ ಮಾತನಾಡಲು ಹೆಣಗಾಡಿದ ನಂತರ ಅವನು ಮದುವೆಯಾಗಲು ಪ್ರಯತ್ನಿಸಿದ ಅನೇಕ ಮಹಿಳೆಯರು ಅನುಮಾನ ವ್ಯಕ್ತಪಡಿಸಿ ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:00 pm, Mon, 10 July 23

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ