Bengaluru: ಬೆಂಗಳೂರು ಜಲಮಂಡಳಿ ನಿರ್ಲಕ್ಷ್ಯ: ಬೆಸ್ಕಾಂ ನೌಕರ ಸಾವು
ಬೆಂಗಳೂರು ಜಲಮಂಡಳಿ ನಿರ್ಲಕ್ಷ್ಯಕ್ಕೆ ಬೆಸ್ಕಾಂ ನೌಕರ ಸಾವನ್ನಪ್ಪಿರುವಂತಹ ಘಟನೆ ನಗರದಲ್ಲಿ ನಡೆದಿದೆ. ವಿವೇಕ್ ಮೃತ ಬೆಸ್ಕಾಂ ನೌಕರ.
ಬೆಂಗಳೂರು: ಬೆಂಗಳೂರು ಜಲಮಂಡಳಿ (Bengaluru Jal Board) ನಿರ್ಲಕ್ಷ್ಯಕ್ಕೆ ಬೆಸ್ಕಾಂ ನೌಕರ ಸಾವನ್ನಪ್ಪಿರುವಂತಹ ಘಟನೆ ನಗರದಲ್ಲಿ ನಡೆದಿದೆ. ವಿವೇಕ್ ಮೃತ ಬೆಸ್ಕಾಂ ನೌಕರ. ಕುಟುಂಬ ಬಿಡಬ್ಲ್ಯುಎಸ್ಎಸ್ಬಿ ರಸ್ತೆಗೆ ಎತ್ತರವಾಗಿ ಚೇಂಬರ್ ನಿರ್ಮಿಸಿಸುತ್ತಿದ್ದು, ಬೈಕ್ ಚೇಂಬರ್ ಮೇಲೆ ಹತ್ತಿದಾಗ ನಿಯಂತ್ರಣಕ್ಕೆ ಸಿಗದೆ ಅಪಘಾತವಾಗಿದೆ. ಮೂಲತಃ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಹಾರನಹಳ್ಳಿ ನಿವಾಸಿ. ದುಬೈ, ಜಪಾನ್ ಸೇರಿದಂತೆ ಹಲವೆಡೆ ಕಾರ್ಯಕ್ರಮ ನೀಡಿದ್ದ ವಿವೇಕ್ ಮ್ಯೂಜಿಸಿಯನ್ ಕೂಡ ಆಗಿದ್ದು, ಬೆಸ್ಕಾಂನಲ್ಲೂ ಕೆಲಸ ಮಾಡುತ್ತಿದ್ದರು. 9 ತಿಂಗಳ ಹಿಂದೆ ಮದುವೆಯಾಗಿದ್ದ ವಿವೇಕ್ ಪತ್ನಿ 6 ತಿಂಗಳ ಗರ್ಭಿಣಿಯಾಗಿದ್ದು, ಪ್ರಸ್ತುತ ಬೆಂಗಳೂರಿನ ಗಿರಿನಗರದಲ್ಲಿ ವಾಸವಾಗಿದ್ದರು. ಕಳೆದ 1 ತಿಂಗಳಲ್ಲಿ ಇದೇ ಸ್ಥಳದಲ್ಲಿ 4ಕ್ಕೂ ಹೆಚ್ಚು ಅಪಘಾತವಾಗಿದೆ. ಪದೇಪದೆ ಅಪಘಾತದ ಬಗ್ಗೆ ಬಿಬಿಎಂಪಿಗೆ ಮಾಹಿತಿ ನೀಡಿದ್ದರೂ ನಿರ್ಲಕ್ಷ್ಯ ತೋರಿಸುತ್ತಿದೆ.
ಮೈಸೂರು: ಮನೆಯಲ್ಲಿ ನೇಣು ಬಿಗಿದುಕೊಂಡು ಸಾಫ್ಟ್ವೇರ್ ಇಂಜಿನಿಯರ್ ಆತ್ಮಹತ್ಯೆ
ಮೈಸೂರು: ಮನೆಯಲ್ಲಿ ನೇಣು ಬಿಗಿದುಕೊಂಡು ಸಾಫ್ಟ್ವೇರ್ ಇಂಜಿನಿಯರ್ ಪ್ರತಾಪ್(38) ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ರೂಪಾ ನಗರದಲ್ಲಿ ನಡೆದಿದೆ. ಬೆಂಗಳೂರಿನ ಖಾಸಗಿ ಕಂಪನಿಯ ಉದ್ಯೋಗಿ ಆಗಿದ್ದ ಪ್ರತಾಪ್, ಸಧ್ಯ ವರ್ಕ್ ಫ್ರಮ್ ಹೋಮ್ ಮೂಲಕ ಕೆಲಸ ಮಾಡುತ್ತಿದ್ದರು. ಇನ್ನು 38 ವರ್ಷವಾದರೂ ಪ್ರತಾಪ್ಗೆ ಮದುವೆಯಾಗಿರಲಿಲ್ಲ. ಜೀವನದಲ್ಲಿ ಜಿಗುಪ್ಸೆ ಬಂದು ಟೆಕ್ಕಿ ನೇಣಿಗೆ ಶರಣಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಳಗಾವಿ: ಕುಡಿದು ಪೀಡಿಸುತ್ತಿದ್ದ ಮಗನನ್ನೇ ಕೊಂದ ತಂದೆ
ಬೆಂಗಳೂರು: ಪತ್ನಿ, ಮಕ್ಕಳಿಬ್ಬರಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಂದೆ
ಬೆಂಗಳೂರು: ಪತ್ನಿ, ಇಬ್ಬರು ಪುತ್ರಿಯರಿಗೆ ವಿಷವುಣಿಸಿ ಪತಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಗರದ ಕೋಣನಕುಂಟೆಯ ಠಾಣಾ ವ್ಯಾಪ್ತಿಯ ವಡ್ಡರಪಾಳ್ಯ ಮನೆಯೊಂದರಲ್ಲಿ ನಡೆದಿದೆ. ಪತ್ನಿ ವಿಜಯಾ(28), ಪುತ್ರಿಯರಾದ ನಿಶಾ(7), ದೀಕ್ಷಾ(5) ಮೃತ ದುರ್ದೈವಿಗಳು. ಪತಿ ನಾಗೇಂದ್ರ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಊಟದಲ್ಲಿ ವಿಷವುಣಿಸಿ ಹತ್ಯೆ ಶಂಕೆ ವ್ಯಕ್ತವಾಗಿದೆ. ಇನ್ನು ಪತಿ ನಾಗೇಂದ್ರ ಕ್ಯಾನ್ಸರ್ನಿಂದ ಬಳತ್ತಿದ್ದು, ಬ್ಲೇಡ್ನಿಂದ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗುತ್ತಿದೆ. 2014ರಲ್ಲಿ ದಂಪತಿ ಮದುವೆಯಾಗಿದ್ದರು. ನಾಗೇಂದ್ರನಿಗೆ ವಿಪರೀತ ಕುಡಿದ ಚಟ ಇತ್ತು. ಪತ್ನಿ ವಿಜಯ ಮೆಡಿಕಲ್ನಲ್ಲಿ ಕೆಲಸ ಮಾಡುತ್ತಿದ್ದರು. ವಿಜಯ ಆರ್ಥಿಕವಾಗಿ ಕುಟುಂಬಕ್ಕೆ ಆಧಾರವಾಗಿದ್ದರು. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬಿಜೆಪಿ ಶಾಸಕ ಪುತ್ರನ ಕಚೇರಿಯಲ್ಲಿ ಲೋಕಾಯುಕ್ತ ದಾಳಿ ಅಂತ್ಯ, ಐವರ ಬಂಧನ, ಕಾರ್ಯಚರಣೆ ವೇಳೆ ಏನೇನು ಸಿಕ್ತು? ಇಲ್ಲಿದೆ ಮಾಹಿತಿ
ಆಕಸ್ಮಿಕ ಬೆಂಕಿ ತಗುಲಿ ಎರಡು ಗುಡಿಸಲುಗಳು ಸಂಪೂರ್ಣ ಭಸ್ಮ
ಚಿಕ್ಕಮಗಳೂರು: ಆಕಸ್ಮಿಕವಾಗಿ ಬೆಂಕಿ ತಗುಲಿದ ಎರಡು ಗುಡಿಸಲುಗಳು ಸಂಪೂರ್ಣ ಭಸ್ಮವಾದ ಘಟನೆ ಕಡೂರು ತಾಲೂಕಿನ ದೊಣ್ಣೆಕೋರಳಿ ಗ್ರಾಮದ ಭೋವಿಕಾಲೋನಿಯಲ್ಲಿ ನಡೆದಿದೆ. ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿ ಈರಬೋವಿ,ಆನಂದ್ ಎಂಬುವವರಿಗೆ ಸೇರಿದ ಗುಡಿಸಲು ಹೊತ್ತಿ ಉರಿದಿದ್ದು, ದಾಖಲಾತಿ, ಬಟ್ಟೆ, ಪಾತ್ರೆಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಯಗಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:52 pm, Fri, 3 March 23