ಬೆಂಗಳೂರು: 14 ನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ

ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

ಬೆಂಗಳೂರು: 14 ನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ
ಎಂತಹುದೇ ಪರಿಸ್ಥಿತಿಯಲ್ಲೂ ಆತ್ಮಹತ್ಯೆಯ ಆಯ್ಕೆ ಬೇಡ

ಬೆಂಗಳೂರು: 14ನೇ ಅಂತಸ್ತಿನಿಂದ ಜಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮಾನ್ಯತಾ ಟೆಕ್​ ಪಾರ್ಕ್​ನಲ್ಲಿ ನಡೆದಿದೆ. ಬಿಹಾರ ಮೂಲದ ರಿತಿಕ್ ಈಶ್ವರ್(21) ಆತ್ಮಹತ್ಯೆ ಮಾಡಿಕೊಂಡ ಯುವಕ.ಇಂಟೀರಿಯರ್ ಡೆಕೋರೇಷನ್ ಕೆಲಸ ಮಾಡುತ್ತಿದ್ದ ಹೃತಿಕ್ ಪ್ರೇಮ ವೈಫಲ್ಯದಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಖಿಸಲಾಗಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

ಗದಗ: ಅಪಘಾತದಲ್ಲಿ ಮೂವರು ಮೃತ್ಯು
ಗದಗ: ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಮೂವರು ಸವಾರರು ಸಾವನ್ನಪ್ಪಿದ ದುರ್ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ. ಬೈಕ್‌ನಲ್ಲಿ ಹೋಗುತ್ತಿದ್ದ ಅಣ್ಣ, ತಂಗಿ ಮತ್ತು  ಮಗು ಸಾವನ್ನಪ್ಪಿದವರು. ಮೊಹಮ್ಮದ್ ಶಫಿ (34) ಬಿಬಿಜಹಾರ್ ಲಂಗೋಟಿ(22), ಮೊಹಮ್ಮದ್ ಆಜಿಬ್‌ (1) ಮೃತಪಟ್ಟ ದುರ್ದೈವಿಗಳು. ಸ್ಥಳದಲ್ಲೇ ಗೂಡ್ಸ್ ವಾಹನವನ್ನು ಬಿಟ್ಟು ಚಾಲಕ ಪರಾರಿಯಾಗಿದ್ದು, ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಡಲ ತೀರದಲ್ಲಿ ಎರಡು ಮೃತದೇಹ ಪತ್ತೆ
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹುಯ್ಲಮುಡಿ ಕಡಲ ತೀರದಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ. ಬೆಂಗಳೂರು ಮೂಲದ ಆದಿತ್ಯ ಮತ್ತು  ಲಕ್ಷ್ಮೀ  ಅವರ ಮೃತದೇಹ ಪತ್ತೆಯಾಗಿದೆ.
ಆದಿತ್ಯ ಹಾಗೂ ಲಕ್ಷ್ಮೀ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದ್ದು, ಭಟ್ಕಳ ಗ್ರಾಮಾಂತರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

ದೇಶದಲ್ಲಿ ಶೀಘ್ರದಲ್ಲೇ ನಿರ್ಮಾಣವಾಗಲಿದೆ ಮೊದಲ ಎಲೆಕ್ಟ್ರಿಕ್​ ಹೆದ್ದಾರಿ; ಈ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

GST Rate: ಜಿಎಸ್​ಟಿ ಸಮಿತಿ ಸಭೆಯ ನಂತರ ಯಾವ ಸರಕು ತೆರಿಗೆ ದರ ಎಷ್ಟಾಗಿದೆ? ಇಲ್ಲಿದೆ ಪೂರ್ಣ ಮಾಹಿತಿ

(Bengaluru Bihar Youth Suicide in Manyata Tech Park 14th floor)

Read Full Article

Click on your DTH Provider to Add TV9 Kannada