ಬೆಂಗಳೂರು ಬಿಎಂಟಿಸಿ ಚಾಲಕ ಆತ್ಮಹತ್ಯೆ ಪ್ರಕರಣ: ಬಿಎಂಟಿಸಿ ಡಿಪೋ‌ ಮ್ಯಾನೇಜರ್ ಎಫ್​ಐಆರ್ ವಿರುದ್ಧ​ ದಾಖಲು

ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಡಿಪೋ‌ ಮ್ಯಾನೇಜರ್ ಮಲ್ಲಿಕಾರ್ಜುನ ವಿರುದ್ಧ ಆರ್​.ಆರ್​​.ನಗರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಬೆಂಗಳೂರು ಬಿಎಂಟಿಸಿ ಚಾಲಕ ಆತ್ಮಹತ್ಯೆ ಪ್ರಕರಣ: ಬಿಎಂಟಿಸಿ ಡಿಪೋ‌ ಮ್ಯಾನೇಜರ್ ಎಫ್​ಐಆರ್ ವಿರುದ್ಧ​ ದಾಖಲು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 30, 2022 | 1:49 PM

ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಡಿಪೋ‌ ಮ್ಯಾನೇಜರ್ ಮಲ್ಲಿಕಾರ್ಜುನ ವಿರುದ್ಧ ಆರ್​.ಆರ್​​.ನಗರ ಠಾಣೆಯಲ್ಲಿ ಎಫ್​ಐಆರ್​ (FIR) ದಾಖಲಾಗಿದೆ. ಡಿಪೋ ಮ್ಯಾನೇಜರ್ ಕಿರುಕುಳದಿಂದ ನನ್ನ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಮೃತ ಹೊಳೆಬಸಪ್ಪ ಪತ್ನಿ ಸೀಮಾ ದೂರು ನೀಡಿದ್ದಾರೆ. ಮ್ಯಾನೇಜರ್ ಕಿರುಕುಳದಿಂದಲೇ ನಾನು ಆತ್ಮಹತ್ಯೆ ಮಾಡಿಕೊಂಡಿದ್ದು ಎಂದು ಹೊಳೆಬಸಪ್ಪ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು.

ನಿನ್ನೆ (ಆ 29) ಆರ್ ಆರ್ ನಗರ ಡಿಪೋದಲ್ಲಿ ಡ್ರೈವರ್ ಕಂ ಕಂಡಕ್ಟರ್ ಹೊಳೆಬಸಪ್ಪ ಆತ್ಮಹತ್ಯೆಗೆ ಶರಣಾಗಿದ್ದರು. ನಿನ್ನೆ ಪೋಸ್ಟ್ ಮಾರ್ಟಂ ಮಾಡುವ ವೇಳೆ ಒಳು ಉಡುಪಿನಲ್ಲಿ ಸಿಕ್ಕ ಡೆತ್ ನೋಟ್ ಪತ್ತೆಯಾಗಿತ್ತು. ಸದ್ಯ ಡೆತ್ ನೋಟ್ ಆರ್ ಆರ್ ನಗರ ಪೊಲೀಸ್ ಪಿಎಸ್ಐ ವಶದಲ್ಲಿದೆ.

ಬಿಎಂಟಿಸಿ ಅಧಿಕಾರಿಗಳು ನಿನ್ನೆಯಿಂದ ಕೇಸ್ ವಾಪಸು ಪಡೆಯುವಂತೆ ಪತ್ನಿ ಸೀಮಾಗೆ ಒತ್ತಡ ಹಾಕುತ್ತಿದ್ದಾರೆ. ಅಧಿಕಾರಿಗಳ ವಿರುದ್ಧ ದೂರು ನೀಡಿದ್ರೆ ಯಾವುದೇ ಪರಿಹಾರ ಬರೋದಿಲ್ಲ ಎಂದು ಅಧಿಕಾರಿಗಳು ಎಚ್ಚರಿಕೆ ನೀಡುತ್ತಿದ್ದಾರೆ. ಹೊಳೆಬಸಪ್ಪ ಡೆತ್ ನೋಟ್​ನಲ್ಲಿ ರಜಾ ಮತ್ತು ನಾನಾ ಕಾರಣಗಳಿಂದ ಡಿಪೋ ಮ್ಯಾನೇಜರ್ ನನಗೆ ಕಿರುಕುಳ ನೀಡುತ್ತಿದ್ದರು ಎಂದು ಬರೆದಿದ್ದಾರೆ.

ಬೇಟೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ವ್ಯಕ್ತಿ ಸಾವು

ಕೊಡಗು: ಬೇಟೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲೂಕಿನ ಗರ್ವಾಲೆಯಲ್ಲಿ ನಡೆದಿದೆ. ಎಡವಾರೆ ಗ್ರಾಮದ ಶಿವಕುಮಾರ್(58) ಮೃತ ವ್ಯಕ್ತಿ. ಶಿವಕುಮಾರ್, ಚನ್ನಕೇಶವ, ನಂದೀಶ್, ಮಂಜುನಾಥ್, ಕೇಶವ ಎಂಬುವರ ಜೊತೆ ಬೇಟೆಗೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಸೋಮವಾರಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಮವಾರಪೇಟೆ ತಾಲ್ಲೂಕಿನ ಸುಂಟಿಕೊಪ್ಪ ಬಳಿ ರಸ್ತೆ ಅಪಘಾತದಲ್ಲಿ ಲಾರಿ ಚಾಲಕ ಸಾವನ್ನಪ್ಪಿರುವ ಘಟನೆ ಮಡಿಕೇರಿ-ಮಾಣಿ ರಾಷ್ಟ್ರೀಯ ಹೆದ್ದಾರಿ175 ರಲ್ಲಿ ನಡೆದಿದೆ. ವಿಟ್ಲ ಮೂಲದ ನಾಗಭೂಷಣ ಮತ ಚಾಲಕ.

ಅಕ್ರಮವಾಗಿ ಆಟೋ ಸಿಲಿಂಡರ್​ಗಳಿಗೆ ಗ್ಯಾಸ್​ ಬರ್ತಿ ಮಾಡುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ದಾಳಿ

ಕಲಬುರಗಿ: ಕಲಬುರಗಿ ತಾಲೂಕಿನ ನಂದಿಕೂರು ಗ್ರಾಮದಲ್ಲಿ ಅಕ್ರಮವಾಗಿ ಆಟೋ ಸಿಲಿಂಡರ್​ಗಳಿಗೆ ಗ್ಯಾಸ್​ ಬರ್ತಿ ಮಾಡುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ದಾಳಿ ಮಾಡಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕಲಬುರಗಿ ಸಿಸಿಬಿ ಪೊಲೀಸರು ನಂದಿಕೂರು ಗ್ರಾಮದ ರೇವಣಸಿದ್ದಪ್ಪ ಅನ್ನೋ ವ್ಯಕ್ತಿಯನ್ನು ಬಂಧಿಸಿದ್ದಾರೆ.

14 ಅಡುಗೆ ಸಿಲಿಂಡರ್, ತೂಕದ ಯಂತ್ರ ಜಪ್ತಿ ಮಾಡಲಾಗಿದೆ. ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರಿ ರಾಜಹಂಸ ಬಸ್ ಹಾಗೂ ಬುಲೆರೋ ಕಾರ್ ಮುಖಾಮುಖಿ ಡಿಕ್ಕಿ: ಓರ್ವ ಸಾವು

ವಿಜಯಪುರ: ಸರ್ಕಾರಿ ರಾಜಹಂಸ ಬಸ್ ಹಾಗೂ ಬುಲೆರೋ ಕಾರ್ ಮುಖಾಮುಖಿ ಡಿಕ್ಕಿಯಾಗಿ ಬುಲೆರೋದಲ್ಲಿದ್ದ ಓರ್ವ ಸ್ಥಳದಲ್ಲಿ ‌ಸಾವನ್ನಪ್ಪಿರುವ ಘಟನೆ ಕೊರ್ತಿ-ಕೊಲ್ಹಾರ ಸೇತುವೆ ಮೇಲೆ ನಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದೆ. ಇಂದು ನಸುಕಿನ‌ ಜಾವ KA25 F 3093 ನಂಬರಿನ ಬಸ್ ಹಾಗೂ ಓಡಿಸ್ಸಾ ಮೂಲದ OD 14 P 7605 ನಂಬರಿನ ಬುಲೆರೋ ಕಾರ್ ಡಿಕ್ಕಿಯಾಗಿವೆ.

ಮೃತನನ್ನು‌ ಓರಿಸ್ಸಾ ಮೂಲದ ಸುಂದರಘಡ ಜಿಲ್ಲೆಯ ಸಂದೀಪ ನಾಯಕ್ ಎಂದು ಗುರುತಿಸಲಾಗಿದೆ. ಗಾಯಾಳು ನಾಲ್ವರನ್ನು ಅಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಬುಲೆರೋ ಕಾರ್ ಚಾಲಕನ ಅಜಾಗರೂಕತೆ ಕಾರಣವೆನ್ನಲಾಗಿದೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ನಡೆದಿದೆ.

ಏಳು ವರ್ಷದಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಖತರ್ನಾಕ್ ಕಳ್ಳರ ಬಂಧನ

ಬೆಂಗಳೂರು: ಏಳು ವರ್ಷದಿಂದ ಪೊಲೀಸರಿಗೆ ಪದೇ ಪದೇ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಖತರ್ನಾಕ್ ಕಳ್ಳರನ್ನು ಬೆಂಗಳೂರು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಜೆಪಿ ನಗರದ ರವಿ ಹಾಗೂ ಶಂಕರ ಬಂಧಿತ ಆರೋಪಿಗಳು. ಮಹಾಲಕ್ಷ್ಮಿ ಲೇಔಟ್​ನಲ್ಲಿ ವರಮಹಾಲಕ್ಷ್ಮಿ ಹಬ್ಬದ ದಿನವೇ ಲಕ್ಷ ಲಕ್ಷ ಬೆಲೆಬಾಳುವ ಚಿನ್ನಾಭರಣ ಎಗರಿಸಿದ್ದರು.

ಮಹದೇವಪುರ,ಕೆ.ಆರ್ ಪುರಂ, ಬೈಯಪ್ಪನಹಳ್ಳಿ ಸೇರಿದಂತೆ ನಾನಾ ಭಾಗದಲ್ಲೂ ಕಳ್ಳತನ ಮಾಡಿದ್ದರು. ಸಧ್ಯ ಬಂಧಿತ ಆರೋಪಿಗಳಿಂದ ಸರಿಸುಮಾರು 50 ಲಕ್ಷ ರೂ ಮೌಲ್ಯದ 800 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಸಾವಿನಲ್ಲೂ ಒಂದಾದ ವೃದ್ದದಂಪತಿ

ಬಾಗಲಕೋಟೆ: ಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ಬನಹಟ್ಟಿ ನಗರದ ಮಂಗಳವಾರಪೇಟೆ ನಿವಾಸಿಗಳಾದ ಭೀಮಪ್ಪ ಬಾಗಲಕೋಟ(೮೦) ಮತ್ತು ಪತ್ನಿ ಕಸ್ತೂರಿ(೭೪) ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ತಡರಾತ್ರಿ ಭೀಮಪ್ಪ ವಿಜಯಪುರ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಗಂಡನ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಪತ್ನಿ ಕೂಡ ಬೆಳಗಿನ ಜಾವ ೪ ಗಂಟೆಗೆ ಬನಹಟ್ಟಿ ನಗರದ ಮನೆಯಲ್ಲಿ ಸಾವನ್ನಪ್ಪಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರ ಸಾವು

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರ ಸಾವನ್ನಪ್ಪಿರುವ ಘಟನೆ ಮಸ್ಕಿ ತಾಲೂಕಿನ ಗುಡುದೂರು ಬ್ರಿಡ್ಜ್ ಬಳಿ ನಡೆದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ನಾಲೆಯಲ್ಲಿ ನಾಪತ್ತೆಯಾಗಿದ್ದಾನೆ. ಮಸ್ಕಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:49 pm, Tue, 30 August 22

ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್