AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಪಾರ್ಟಿ ಪ್ರಕರಣ: ಬಂಧನಕ್ಕೊಳಗಾಗಿದ್ದ ನಟ ಸಿದ್ದಾಂತ್ ಕಪೂರ್ ಸೇರಿ ಐವರ ಬಿಡುಗಡೆ

ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ಸೇರಿ ಐವರಿಗೆ ಜಾಮೀನು ಠಾಣಾ ಜಾಮೀನು ಮಂಜೂರಾಗಿದೆ.

ಡ್ರಗ್ಸ್ ಪಾರ್ಟಿ ಪ್ರಕರಣ: ಬಂಧನಕ್ಕೊಳಗಾಗಿದ್ದ ನಟ ಸಿದ್ದಾಂತ್ ಕಪೂರ್ ಸೇರಿ ಐವರ ಬಿಡುಗಡೆ
ನಟ ಸಿದ್ದಾಂತ್ ಕಪೂರ್
TV9 Web
| Edited By: |

Updated on:Jun 14, 2022 | 11:01 AM

Share

ಬೆಂಗಳೂರು: ನಗರದ ಖಾಸಗಿ ಹೋಟೆಲ್​​ನಲ್ಲಿ ಡ್ರಗ್ಸ್​ ಪಾರ್ಟಿ (Drug Party) ನಡೆಸುತ್ತಿದ್ದ ಪ್ರಕರಣ ಸಂಬಂಧ ಬಂಧಿತಕ್ಕೊಳಗಾಗಿದ್ದ ಬಾಲಿವುಡ್ ನಟ ಸಿದ್ಧಾಂತ್ ಕಪೂರ್ (siddhanth kapoor) ಸೇರಿ ಐವರಿಗೆ ಜಾಮೀನು ಠಾಣಾ ಜಾಮೀನು ಮಂಜೂರಾಗಿದೆ. ಪಾರ್ಟಿ ವೇಳೆ ಡ್ರಗ್ಸ್ ಸೇವಿಸಿದ್ದ ಆರೋಪದಡಿ ನಟ ಸಿದ್ದಾಂತ್ ಸೇರಿದಂತೆ ಒಟ್ಟು ಐವರನ್ನು ಹಲಸೂರು ಠಾಣಾ ಪೊಲೀಸರು ಬಂಧಿಸಿದ್ದರು. ಸದ್ಯ ಬಂಧಿತ ಐವರಿಗೂ ಠಾಣಾ ಜಾಮೀನು (Station Bail) ಮಂಜೂರಾಗಿದ್ದು, ಸೋಮವಾರ ರಾತ್ರಿ ಬಿಡುಗಡೆಯಾಗಿದ್ದಾರೆ. ಮಂಗಳವಾರ (ಜೂನ್ 14) ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ. ಪೊಲೀಸರ ಕಾರ್ಯದ ಬಗ್ಗೆ ಮಾತನಾಡಿದ ಸಿದ್ದಾಂತ್, ಬೆಂಗಳೂರು ಪೊಲೀಸರು ಉತ್ತಮ ಕಾರ್ಯ ಮಾಡಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: Crime News: ತಂದೆಯನ್ನೇ ಕೊಂದು ತಿಂದ, ಪೊಲೀಸರನ್ನು ನೋಡಿ ಸಿಕ್ಕಿ ಬಿದ್ದ..!

ಏನಿದು ಪ್ರಕರಣ?

ಹೋಟೆಲ್​ನಲ್ಲಿ ಪಾರ್ಟಿ ನಡೆಸುತ್ತಿದ್ದ ಆರೋಪದಡಿ ದಿ ಪಾರ್ಕ್​ ಫೈವ್​ಸ್ಟಾರ್​ ಹೋಟೆಲ್ ಮೇಲೆ ಹಲಸೂರು ಪೊಲೀಸರಿಂದ ದಾಳಿ ಮಾಡಲಾಗಿದೆ. ಹಲಸೂರು ಬಳಿಯ GT ಮಾಲ್ ಬಳಿಯ ಪಾರ್ಕ್ ಹೋಟೆಲ್​ನ ಪಾರ್ಟಿಯಲ್ಲಿ ನಟಿ ಶ್ರದ್ಧಾ ಕಪೂರ್ ಸಹೋದರ ನಟ ಸಿದ್ಧಾಂತ್​ ಕಪೂರ್ ಭಾಗಿಯಾಗಿದ್ದ ಶಂಕೆ ವ್ಯಕ್ತವಾಗಿದೆ. ರಾತ್ರಿ 12 ಗಂಟೆಗೆ ಹೋಟೆಲ್ ಮೇಲೆ ಪೊಲೀಸರು ದಾಳಿ ಮಾಡಿದ್ದು, ಹೋಟೆಲ್​ನಲ್ಲಿ ದೊಡ್ಡ ಪ್ರಮಾಣದ ಡ್ರಗ್ಸ್ ಪಾರ್ಟಿ ಆಯೋಜನೆ ಮಾಡಲಾಗಿತ್ತು ಎನ್ನಲಾಗುತ್ತಿದೆ.

ಇದನ್ನೂ ಓದಿ: Crime News: ಮಂಡ್ಯದಲ್ಲಿ ಹಾಡುಹಗಲೇ ಮಚ್ಚಿನಿಂದ ಹಲ್ಲೆ: ಬೆಂಕಿ ಹಚ್ಚಿ ಮಹಿಳೆ ಕೊಲೆಗೆ ಯತ್ನ

ಪಾರ್ಟಿಯಲ್ಲಿದ್ದ 50ಕ್ಕೂ ಅಧಿಕ ಜನರಿಗೆ ಮೆಡಿಕಲ್ ಟೆಸ್ಟ್ ಮಾಡಲು ಮೂರು ಟಿಟಿ ವಾಹನಗಳಲ್ಲಿ ಪೊಲೀಸರು ಆಸ್ಪತ್ರೆಗೆ ಕರೆದೊಯ್ದರು. ಪಾರ್ಟಿಯಲ್ಲಿ ಐವರು ಡ್ರಗ್ಸ್ ಸೇವನೆ ಮಾಡಿರುವುದು ಧೃಡಪಟ್ಟಿದ್ದು, ಐವರನ್ನ ವಶಕ್ಕೆ ಪಡೆದು ಎನ್‌ಡಿಪಿಎಸ್ ಕಾಯ್ದೆಯ ಅಡಿ ಹಲಸೂರು ಠಾಣೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಸದ್ಯ ಸಿದ್ದಾಂತ್ ಸೇರಿದಂತೆ ಐವರಿಗೆ ಜಾಮೀನು ಮಂಜೂರಾಗಿದ್ದು, ಇಂದಿನ ವಿಚಾರಣೆ ನಂತರದ ಬೆಳವಣಿಗೆಗಳನ್ನು ಕಾದುನೋಡಬೇಕಿದೆ.

ಒಂದು ಪಾರ್ಟಿಗೆ 1.5 ಲಕ್ಷ ಸಂಭಾವನೆ

ಬೆಂಗಳೂರಿನಲ್ಲಿ 40ಕ್ಕೂ ಅಧಿಕ ಪಾರ್ಟಿಗಳಲ್ಲಿ ಡಿ.ಜೆ. ಕೆಲಸ ನಿರ್ವಹಿಸಿದ್ದ ನಟ ಸಿದ್ಧಾಂತ್, ಒಂದು ಪಾರ್ಟಿಗೆ 1.5 ಲಕ್ಷ ರೂ. ಸಂಭಾವನೆ ಪಡೆಯುತ್ತಿದ್ದ ಎನ್ನಲಾಗುತ್ತಿದೆ. ದಿ ಪಾರ್ಕ್ ಹೋಟೆಲ್‌ನಲ್ಲಿ ಮೂರನೇ ಬಾರಿ ಪಾರ್ಟಿಗೆ ಡಿ.ಜೆಯಾಗಿ ಆಹ್ವಾನಿಸಲಾಗಿತ್ತು. ಇದರ ನಂತರ ಗೋವಾದಲ್ಲಿ‌ ಮತ್ತೊಂದು ಪಾರ್ಟಿಯಲ್ಲಿ ಭಾಗಿಯಾಗಬೇಕಿತ್ತು. ಆದರೆ ತಡರಾತ್ರಿ ಡ್ರಗ್ಸ್ ಪಾರ್ಟಿ ಅನುಮಾನದಲ್ಲಿ ದಾಳಿ ನಡೆಸಿದಾಗ ಸಿದ್ದಾಂತ್ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ. ಖಾಸಗಿ ಹೊಟೇಲ್​ನಲ್ಲಿ ಆಯೋಜಿಸಿದ್ದ ಪಾರ್ಟಿ ಓಪನ್ ಪಾರ್ಟಿಯಾಗಿದ್ದರಿಂದ ನಿರ್ದಿಷ್ಟವಾಗಿ ಆಯೋಜಕರಿರಲಿಲ್ಲ. ಆದರೆ ಪಾರ್ಟಿಗೆ ಡ್ರಗ್ಸ್ ಪೂರೈಕೆ ಮಾಡಿದವರ ಬಂಧನಕ್ಕೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ನೀರಿನಲ್ಲಿ ಡ್ರಗ್ಸ್ ಮಿಕ್ಸ್ ಆಗಿತ್ತೇ?

ಪೊಲೀಸರ ದಾಳಿ ವೇಳೆ ಸಿದ್ಧಾಂತ್ ಅವರನ್ನು ವೈದ್ಯಕೀಯ ತಪಾಸಣೆ ನಡೆಸಲಾಗಿತ್ತು. ಈ ವೇಳೆ ಡ್ರಗ್ಸ್ ಸೇವನೆ ಮಾಡಿರುವುದು ದೃಢಪಟ್ಟಿತ್ತು. ಆದರೆ ವಿಚಾರಣೆ ವೇಳೆ ನೀರಿನಲ್ಲಿ ಡ್ರಗ್ಸ್ ಮಿಶ್ರಣವಾಗಿರಬಹುದು ಎಂದಿರುವ ಸಿದ್ಧಾಂತ್ ಮತ್ತು ತಂಡ ಹೇಳಿದೆ. ಸದ್ಯ ಹೋಟೆಲ್ ಆವರಣದ ಸಿಸಿಟಿವಿ ಡಿವಿಆರ್​ಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:41 am, Tue, 14 June 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ