ಬೆಂಗಳೂರು: ಓಯೋ ರೂಮ್ನಲ್ಲಿ ಪ್ರಿಯತಮೆ ಬರ್ಬರ ಹತ್ಯೆ, 17 ಬಾರಿ ಇರಿದು ಕೊಂದ ಪ್ರಿಯಕರ
ಬೆಂಗಳೂರಿನಲ್ಲಿ ಪ್ರಿಯಕರನಿಂದಲೇ ಪ್ರಿಯತಮೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಪೂರ್ಣ ಪ್ರಜ್ಞಾಲೇಔಟ್ನ ಹೋಟೆಲ್ ಓಯೋ ರೂಮ್ನಲ್ಲಿ ನಡೆದಿದೆ. 17 ಬಾರಿ ದೇಹದ ವಿವಿಧ ಕಡೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು, ಜೂನ್ 09: ವಿವಾಹಿತ ಮಹಿಳೆಯನ್ನು 17 ಬಾರಿ ದೇಹದ ವಿವಿಧ ಕಡೆ ಚಾಕುವಿನಿಂದ ಇರಿದು (stabbing) ಪ್ರಿಯಕರ ಬರ್ಬರವಾಗಿ ಹತ್ಯೆ (kill) ಮಾಡಿರುವಂತಹ ಘಟನೆ ಪೂರ್ಣ ಪ್ರಜ್ಞಾಲೇಔಟ್ನ ಹೋಟೆಲ್ ಓಯೋ ರೂಮ್ನಲ್ಲಿ ನಡೆದಿದೆ. ಟೆಕ್ಕಿ ಯಶಸ್ ಎಂಬಾತನಿಂದ ಹರಿಣಿ(36) ಹತ್ಯೆಗೈಯಲಾಗಿದೆ. ಮೃತ ಹರಿಣಿಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆದರೂ ಯಶಸ್ ಜತೆ ಅನೈತಿಕ ಸಂಬಂಧ ಹೊಂದಿದ್ದರು. ಸದ್ಯ ಸುಬ್ರಹ್ಮಣ್ಯಪುರ ಠಾಣೆಯ ಪೊಲೀಸರಿಂದ ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ.
ನಡೆದದ್ದೇನು?
ಗೃಹಿಣಿ ಹರಿಣಿ ಇದ್ದ ಏರಿಯಾ ಜಾತ್ರೆಗೆ ಟೆಕ್ಕಿ ಯಶಸ್ ಹೋಗಿದ್ದರು. ಈ ವೇಳೆ ಹರಿಣಿ ಪರಿಚಯವಾಗಿ ಫೋನ್ ನಂಬರ್ ಪಡೆದಿದ್ದರು. ಬಳಿಕ ಸ್ನೇಹ ಬೆಳೆದು ಚಾಟಿಂಗ್, ಡೇಟಿಂಗ್, ಸುತ್ತಾಟ ಮಾಡಿದ್ದರು. ಕೆಲವು ಸಲ ಇಬ್ಬರು ಲೈಂಗಿಕ ಸಂಪರ್ಕ ಕೂಡ ಬೆಳೆಸಿದ್ದರು. ಹಲವು ಬಾರಿ ಇದೇ ರೀತಿ ಭೇಟಿಯಾಗಿ ಫೋನ್ನಲ್ಲಿ ಮಾತಾಡುತ್ತಿದ್ದರು. ಈ ವೇಳೆ ಪತಿ ದಾಸೇಗೌಡನಿಗೆ ಪತ್ನಿಯ ಅನೈತಿಕ ಸಂಬಂಧ ಗೊತ್ತಾಗಿತ್ತು. ಹರಿಣಿ ಫೋನ್ ಕಿತ್ಕೊಂಡಿದ್ದ ದಾಸೇಗೌಡ ಮನೆಯಲ್ಲೇ ಕೂಡಿ ಹಾಕಿದ್ದರು.
ಇದನ್ನೂ ಓದಿ: ಚಿಕ್ಕಬಳ್ಳಾಪುರ ಬಳಿ ರೆಸಾರ್ಟ್ನಲ್ಲಿ ಕೆಲಸ ಮಾಡುತ್ತಿದ್ದವರ ನಡುವಿನ ಜಗಳ ಒಬ್ಬನ ಕೊಲೆಯಲ್ಲಿ ಪರ್ಯಾವಸನ
ಬಳಿಕ ಕೆಲವು ತಿಂಗಳ ನಂತರ ಮತ್ತೆ ಹೊರ ಬಂದಿದ್ದ ಹರಿಣಿ, ಈ ವೇಳೆ ತನ್ನ ಬಾಯ್ಫ್ರೆಂಡ್ ಯಶಸ್ ಸಂಪರ್ಕಿಸಿದ್ದಾರೆ. ಇತ್ತ ಹರಿಣಿ ಸಂಪರ್ಕಕ್ಕೆ ಸಿಗದೇ ಹುಚ್ಚನಂತೆ ಆಗಿದ್ದ ಪ್ರಿಯಕರ ಯಶಸ್, ಸಿಕ್ಕರೆ ಸಾಯಿಸಲು ನಿರ್ಧರಿಸಿದ್ದ. ಹೀಗಾಗಿ ಹರಿಣಿಯನ್ನು ಕೊಲೆ ಮಾಡಲು ಚಾಕು ಕೂಡ ಖರೀದಿಸಿದ್ದ.
ಇದನ್ನೂ ಓದಿ: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
ಜೂನ್ 6ರಂದು ಮಾತುಕತೆ ನಡೆಸಿ ಇಬ್ಬರು ಹೋಟೆಲ್ಗೆ ಹೋಗಿದ್ದರು. ಮೊದಲೇ ರಾಯಲ್ಸ್ ಹೋಟೆಲ್ನಲ್ಲಿ ರೂಮ್ ಬುಕ್ ಮಾಡಿದ್ದ ಯಶಸ್, ಹೋಟೆಲ್ಗೆ ಹೋಗಿ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಬಳಿಕ ಚಾಕುವಿನಿಂದ ಇರಿದು ಹರಿಣಿಯನ್ನು ಹತ್ಯೆಗೈದಿದ್ದಾನೆ. ವಿಷಯ ತಿಳಿದು ಹೋಟೆಲ್ಗೆ ಭೇಟಿ ನೀಡಿದ್ದ ಸುಬ್ರಹ್ಮಣ್ಯಪುರ ಪೊಲೀಸರು, ಬಳಿಕ ಎಫ್ಎಸ್ಎಲ್ ತಂಡ ಕರೆಸಿ ಎಲ್ಲಾ ಸಾಕ್ಷ್ಯ ಸಂಗ್ರಹಿಸಿದ್ದಾರೆ. ಇತ್ತ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಹರಿಣಿ ಅವೈಡ್ ಮಾಡಿದ್ದಕ್ಕೆ ಕೊಲೆ ಮಾಡಿದ್ದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 1:51 pm, Mon, 9 June 25







