ಕಡೂರಿನಲ್ಲಿ ಬೆಂಗಳೂರಿನ ಕ್ಯಾಬ್ ಡ್ರೈವರ್ ಕೊಲೆ: ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ತುಮಕೂರು(Tumkuru) ಜಿಲ್ಲೆಯ ಮಧುಗಿರಿ ತಾಲೂಕಿನ ದರ್ಶನ ಎಂಬಾತ ಬೆಂಗಳೂರಿನಲ್ಲಿ ಕ್ಯಾಬ್​ ಡ್ರೈವರ್​ ಆಗಿ ಕೆಲಸ ಮಾಡುತ್ತಿದ್ದ. ಈ ವೇಳೆ ಹಾಫ್​ ಮರ್ಡರ್​ ಮಾಡಿ ಜೈಲಿಗೆ ಹೋಗಿ ಬೇಲ್​ ಮೇಲೆ ಆಚೆ ಬಂದಿದ್ದ. ಈ ಹಿನ್ನಲೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ತನ್ನ ತಾತನ ಮನೆಯಲ್ಲಿ ವಾಸವಿದ್ದ. ನಿನ್ನೆ ಸ್ನೇಹಿತರ ಜೊತೆ ಆಚೆ ಹೋಗಿದ್ದವನನ್ನ ಯಾರೋ ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿದ್ದಾರೆ.

ಕಡೂರಿನಲ್ಲಿ ಬೆಂಗಳೂರಿನ ಕ್ಯಾಬ್ ಡ್ರೈವರ್ ಕೊಲೆ: ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು
ಕಡೂರಿನಲ್ಲಿ ಬೆಂಗಳೂರಿನ ಕ್ಯಾಬ್ ಡ್ರೈವರ್ ಕೊಲೆ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 16, 2024 | 10:14 PM

ಚಿಕ್ಕಮಗಳೂರು, ಫೆ.16: ಜಿಲ್ಲೆಯ ಕಡೂರು(Kaduru)ತಾಲೂಕಿನ ಹುಲಿಗೊಂದಿ ಹೊಸೂರು ಗ್ರಾಮದ ಬಳಿ ಕ್ಯಾಬ್ ಚಾಲಕನನ್ನು ಬರ್ಬರವಾಗಿ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ತುಮಕೂರು(Tumkuru) ಜಿಲ್ಲೆಯ ಮಧುಗಿರಿ ತಾಲೂಕಿನ ದರ್ಶನ್(21) ಮೃತ ರ್ದುದೈವಿ. ಇನ್ನು ಬೆಂಗಳೂರಿನಲ್ಲಿ ಕ್ಯಾಬ್ ಡ್ರೈವರ್ ಕೆಲಸ ಮಾಡುತ್ತಿದ್ದ ದರ್ಶನ್, ಹಾಫ್ ಮರ್ಡರ್ ಕೇಸಿನಲ್ಲಿ ಜೈಲು ಸೇರಿದ್ದ. ಇತ್ತೀಚೆಗೆ ಬೇಲ್ ಪಡೆದು ಇಬ್ಬರು ಸ್ನೇಹಿತರ ಜೊತೆ ಕಡೂರಿನ ಮಾಡಾಳು ಗ್ರಾಮದ ತಾತನ ಮನೆಗೆ ಬಂದಿದ್ದ.

ಹೊಲದ ಶೆಡ್​ನಲ್ಲಿ ಮಲಗುತ್ತೇನೆ ಎಂದು ಹೊರಟವ ಮಸಣ ಸೇರಿದ

ವಾರದ ಹಿಂದೆ ಬೆಂಗಳೂರಿಗೆ ವಾಪಸ್ ಹೋಗಿದ್ದ ಮೃತ ದರ್ಶನ್ ಸ್ನೇಹಿತರು, ನಿನ್ನೆ(ಫೆ.15) ರಾತ್ರಿ ಪುನಃ ಬಂದಿದ್ದಾರೆ. ಈ ಹಿನ್ನಲೆ ಕಾರಿನಲ್ಲಿ ಬಂದ ಸ್ನೇಹಿತರ ಜೊತೆ ದರ್ಶನ್ ಹೋಗಿದ್ದನಂತೆ. ತಾತನಿಗೆ ಫ್ರೆಂಡ್ಸ್ ಬಂದಿದ್ದಾರೆ, ಹೊಲದ ಶೆಡ್​ನಲ್ಲಿ ಮಲಗುತ್ತೇನೆ ಎಂದು ಹೇಳಿ ಹೋಗಿದ್ದಾನೆ. ದರ್ಶನ್ ಕಾರಿನಲ್ಲಿ ಹೋಗಿದ್ದನ್ನ ದರ್ಶನ್ ತಾತ ಕೂಡ ನೋಡಿದ್ದರು. ರಾತ್ರಿ ಹೊಲಕ್ಕೆ ಹೋಗಿ ನೋಡಿದಾಗ ಶೆಡ್​ನಲ್ಲಿ ದರ್ಶನ್ ಇರಲಿಲ್ಲ. ಸ್ನೇಹಿತರ ಜೊತೆ ಎಲ್ಲೋ ಹೋಗಿರಬಹುದು ಎಂದು ತಾತ ಮನೆಗೆ ಬಂದಿದ್ದರು. ಬೆಳಗ್ಗೆ ಮಾಡಾಳು ಗ್ರಾಮದ ತುಸು ದೂರದಲ್ಲಿ ದರ್ಶನ್ ಮೃತದೇಹ ಪತ್ತೆಯಾಗಿದೆ. ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಯಾವ ವಿಚಾರಕ್ಕೆ, ಯಾರು ಕೊಲೆಗೈದಿದ್ದಾರೆ ಎನ್ನುವುದು ನಿಗೂಢವಾಗಿದೆ. ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ʻಕರಿಮಣಿ ಮಾಲೀಕ ನೀನಲ್ಲʼ ಎಂದಿದಕ್ಕೆ ಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್​; ಸ್ಪಷ್ಟತೆ ನೀಡಿದ ಪತ್ನಿ

ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಕಾರ್ಮಿಕರ ಸಾವು

ರಾಮನಗರ: ಕಬ್ಬಿಣ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಕಾರ್ಮಿಕರ ಸಾವನ್ನಪ್ಪಿದ ಧಾರುಣ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಜಕ್ಕೇಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಚಾಲಕನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಕೋಲ್ಕತ್ತಾ ಮೂಲದ  ಇವರು BWSSB ಕುಡಿವ ನೀರಿನ ಪೈಪ್​ಲೈನ್ ಕಾಮಗಾರಿಗೆ ಬಂದಿದ್ದರು. ಕನಕಪುರದಿಂದ ಜಕ್ಕೇಗೌಡನದೊಡ್ಡಿ ಕಡೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ. ಈ ಕುರಿತು ಸಾತನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ