ಜಾಲತಾಣಗಳಲ್ಲಿ ಮುಖ್ಯಮಂತ್ರಿ ಮತ್ತು ಪೊಲೀಸರಿಗೆ ನಿಂದಿಸುತ್ತಿದ್ದವ ಸಿಸಿಬಿ ವಶಕ್ಕೆ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳನ್ನೇ ಪದೇ ಪದೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಮಹಾಲಕ್ಷ್ಮೀ ಲೇಔಟ್​ನ ನಿವಾಸಿಯಾಗಿರುವ ವಿನಯ್ ಅಲಿಯಾಸ್ ನಾಗಕಿಂಗ್ ಎಂಬಾತನನ್ನ ವಶಕ್ಕೆ ಪಡೆದಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪೊಲೀಸ್ ಆಯುಕ್ತರಿಗೆ ಅತಿ ಕೆಟ್ಟ ಪದಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸುತ್ತಿದ್ದ. ವಿನಾಕಾರಣ ಗಣ್ಯರ ವಿರುದ್ಧ ಅವಾಚ್ಯ ಶಬ್ದಗಳನ್ನ ಬಳಸಿ ಪೋಸ್ಟ್ ಮಾಡುತ್ತಿದ್ದ. ಪ್ರತಿದಿನ ಸಾಮಾಜಿಕ ಜಾಲತಾಣಗಳಲ್ಲಿ ತೇಜೋವಧೆ ಮಾಡುತ್ತಿದ್ದ. ಹೀಗಾಗಿ ಆರೋಪಿಯ ಮನೆಗೆ ನುಗ್ಗಿ ಸಿಸಿಬಿ ಅಧಿಕಾರಿಗಳು ಕರೆದೊಯ್ದಿದ್ದಾರೆ.

ಜಾಲತಾಣಗಳಲ್ಲಿ ಮುಖ್ಯಮಂತ್ರಿ ಮತ್ತು ಪೊಲೀಸರಿಗೆ ನಿಂದಿಸುತ್ತಿದ್ದವ ಸಿಸಿಬಿ ವಶಕ್ಕೆ
CCB ಕಚೇರಿ

Updated on: Apr 22, 2020 | 7:53 PM

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳನ್ನೇ ಪದೇ ಪದೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಮಹಾಲಕ್ಷ್ಮೀ ಲೇಔಟ್​ನ ನಿವಾಸಿಯಾಗಿರುವ ವಿನಯ್ ಅಲಿಯಾಸ್ ನಾಗಕಿಂಗ್ ಎಂಬಾತನನ್ನ ವಶಕ್ಕೆ ಪಡೆದಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪೊಲೀಸ್ ಆಯುಕ್ತರಿಗೆ ಅತಿ ಕೆಟ್ಟ ಪದಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸುತ್ತಿದ್ದ. ವಿನಾಕಾರಣ ಗಣ್ಯರ ವಿರುದ್ಧ ಅವಾಚ್ಯ ಶಬ್ದಗಳನ್ನ ಬಳಸಿ ಪೋಸ್ಟ್ ಮಾಡುತ್ತಿದ್ದ. ಪ್ರತಿದಿನ ಸಾಮಾಜಿಕ ಜಾಲತಾಣಗಳಲ್ಲಿ ತೇಜೋವಧೆ ಮಾಡುತ್ತಿದ್ದ. ಹೀಗಾಗಿ ಆರೋಪಿಯ ಮನೆಗೆ ನುಗ್ಗಿ ಸಿಸಿಬಿ ಅಧಿಕಾರಿಗಳು ಕರೆದೊಯ್ದಿದ್ದಾರೆ.

Published On - 6:58 pm, Wed, 22 April 20