ಬೆಂಗಳೂರು: ಆನೆದಂತಗಳಿಂದ ಮಾಡಿದ್ದ ಪುರಾತನ ಕಾಲದ ವಸ್ತುಗಳ ಮಾರಾಟಕ್ಕೆ ಯತ್ನ, 6 ಜನರ ಬಂಧನ

ಮೊಘಲರ ಕಾಲದ್ದು ಎಂದು ಹೇಳಲಾಗುವ ಪುರಾತನ ಕಾಲದ ಆನೆದಂತದಿಂದ ಮಾಡಿರುವ ವಿವಿಧ ಶೈಲಿಯ ಬೆಲೆಬಾಳುವ ವಸ್ತುಗಳನ್ನು ಮಾರಾಟಕ್ಕೆ ಯತ್ನಿಸಿದ್ದ ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಆನೆದಂತಗಳಿಂದ ಮಾಡಿದ್ದ ಪುರಾತನ ಕಾಲದ ವಸ್ತುಗಳ ಮಾರಾಟಕ್ಕೆ ಯತ್ನ, 6 ಜನರ ಬಂಧನ
ಆನೆದಂತಗಳಿಂದ ಮಾಡಿದ್ದ ಪುರಾತನ ಕಾಲದ ವಸ್ತುಗಳು
Edited By:

Updated on: Nov 18, 2022 | 10:04 PM

ಬೆಂಗಳೂರು: ಆನೆದಂತದಿಂದ ಮಾಡಿದ ಪುರಾತನ ಕಾಲದ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ತಂಡದ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಮೊಘಲರ ಕಾಲದ್ದು ಎಂದು ಹೇಳಲಾಗುವ ಪುರಾತನ ಕಾಲದ ಆನೆದಂತದಿಂದ ಮಾಡಿರುವ ವಿವಿಧ ಶೈಲಿಯ ಬೆಲೆಬಾಳುವ ವಸ್ತುಗಳನ್ನು ಮಾರಾಟಕ್ಕೆ ಯತ್ನಿಸುವಾಗ ಅನ್ಯ ರಾಜ್ಯದ ಇಬ್ಬರು ಸೇರಿ ಒಟ್ಟು ಆರು ಮಂದಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಹರಿಯಾಣ ಹಾಗೂ ಪಂಜಾಬ್ ಮೂಲದ ಹಿಮ್ಮತ್ ಸಿಂಗ್, ಪ್ರವೀಣ್ ಸಾಂಬಿಯಾಲ್ , ಸ್ಥಳೀಯ ಆರೋಪಿಗಳಾದ ಅಬ್ದುಲ್ ಕಯೂಮ್, ಮೊಹಮ್ಮದ್ ರಫೀಕ್,‌ ಮೊಹಮ್ಮದ್ ಇಸ್ರಾರ್ ಹಾಗೂ ಆಮ್ಜದ್ ಪಾಷಾ ಬಂಧಿತ ಅರೋಪಿಗಳಿಂದ ಆನೆದಂತ ಮಾಡಿರುವ ಚೌಕಾಕಾರದ ಬಾಕ್ಸ್ 533 ಗ್ರಾಂ, ಹಿಡಿಕೆಯಿರುವ ಚಾಕು, ಬಾಗಿಲ ಹಿಡಿಕೆ, ಆನೆ ಮೂರ್ತಿ ವಾಕಿಂಗ್ ಸ್ಟಿಕ್, ಮೊಟ್ಟೆ ಆಕಾರದ 20 ಏರಾಟಿಕ್ ವರ್ಕ್ಸ್ (ಕಾಮಸೂತ್ರ ವಾತ್ಸಾಯನ) ಸೇರಿದಂತೆ ಆನೆ ದಂತದಿಂದ ಮಾಡಿರುವ ಒಟ್ಟು ಏಳೂವರೆ ಕೆ.ಜಿ.ತೂಕದ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ವನ್ಯಜೀವಿ ಅಪರಾಧ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಸಿಸಿಬಿ ಪೊಲೀಸರು ಹೆಚ್ಚಿನ ತನಿಖೆ ಚುರುಕುಗೊಳಿಸಿದ್ದಾರೆ.

ಖಚಿತ ಮಾಹಿತಿ ಮೇರೆ ಸಿಸಿಬಿ ದಾಳಿ

ಹಲಸೂರು ಗೇಟ್ ಬಳಿಯ ಬನ್ನಪ್ಪ ಪಾರ್ಕ್ ಬಳಿ ಪುರಾತನ ಕಾಲದ ವಸ್ತುಗಳ ಮಾರಾಟಕಕ್ಕೆ ಯತ್ನಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಲೆಬಾಳುವ ವಸ್ತುಗಳನ್ನ ಎಲ್ಲಿಂದ ತಂದು ಯಾರಿಗೆ ಮಾರಾಟ ಮಾಡಲು ಮುಂದಾಗಿದ್ದರು ಎಂಬುದರ ಬಗ್ಗೆ ಇನ್ನಷ್ಟೇ ಗೊತ್ತಾಗಬೇಕಿದೆ .

ಅರೆಸ್ಟ್ ಅಗಿರುವ ಆರೋಪಿಗಳ ವಿರುದ್ಧ ಈ ಹಿಂದೆ ಕ್ರಿಮಿನಲ್‌ ಕೇಸ್ ದಾಖಲಾಗಿದೆಯಾ ಎಂಬುದರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ವಶಪಡಿಸಿಕೊಂಡಿರುವ ವಸ್ತುಗಳು ಮೇಲ್ನೊಟಕ್ಕೆ ಮೊಘಲರ ಕಾಲದ ವಸ್ತುಗಳು ಎಂದು ಅಂದಾಜಿಸಲಾಗಿದೆ. ನಿಖರವಾಗಿ ಪತ್ತೆ ಹಚ್ಚಲು ಡೆಹ್ರಾಡೂನ್ ನಲ್ಲಿರುವ ವೈಲ್ಡ್ ಲೈಫ್ ಇನ್ ಸ್ಟಿಟ್ಯೂಟ್ ಗೆ ಕಳುಹಿಸಲು ಸಿಸಿಬಿ ತೀರ್ಮಾನಿಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:04 pm, Fri, 18 November 22

Loading...
Unable to load recommendations.
Follow Us