AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ಅದಲು ಬದಲು: ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ ಬೆಳಕಿಗೆ..!

ಹೊಸ ವರ್ಷಕ್ಕೆ ಕೆಲವೇ ದಿನಗಳು ಬಾಕಿ ಇದೆ. 2024ಕ್ಕೆ ಗುಡ್​ಬೈ ಹೇಳಿ 2025 ನೂತನ ವರ್ಷವನ್ನು ಬರಮಾಡಿಕೊಳ್ಳಲು ಜನರು ಕಾತರದಿಂದ ಕಾಯುತ್ತಿದ್ದಾರೆ. ಭರ್ಜರಿ ಪಾರ್ಟಿ ಮೂಲಕ ವಿನೂತನವಾಗಿ ಹೊಸ ವರ್ಷಾಚರಣೆಗೆ ಪ್ಲ್ಯಾನ್ ಮಾಡಿಕೊಳ್ಳುತ್ತಿದ್ದಾರೆ. ಏತನ್ಮಧ್ಯೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ ಬೆಳಕಿಗೆ ಬಂದಿದೆ. ಹಾಗಾದ್ರೆ, ಏನಿದು ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ? ಹೇಗೆ ನಡೆಯುತ್ತೆ? ಎನ್ನುವುದರ ವಿವರ ಇಲ್ಲಿದೆ.

ಹೊಸ ವರ್ಷಕ್ಕೆ ಅದಲು ಬದಲು: ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ ಬೆಳಕಿಗೆ..!
Love
ರಮೇಶ್ ಬಿ. ಜವಳಗೇರಾ
|

Updated on:Dec 21, 2024 | 11:45 AM

Share

ಬೆಂಗಳೂರು, (ಡಿಸೆಂಬರ್ 21): ಹೊಸ ವರ್ಷ ಅಂದ ಕೂಡಲೇ ಪಾರ್ಟಿ, ಸೆಲೆಬ್ರೇಷನ್ ಇದ್ದೇ ಇರುತ್ತೆ. ಅದರಲ್ಲೂ ಇಂದಿನ ಯುವಕರ ಕಾರುಬಾರು, ಮೋಜು ಮಸ್ತಿ ಕೇಳಬೇಕಾ? ಅವರದ್ದು ಬೇರೆಯದ್ದೇ ಲೇವಲ್ ಇರುತ್ತೆ. ಈ ಹೊಸ ವರ್ಷಕ್ಕೆ ಅಂತಾನೆ ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ ಬೆಳಕಿಗೆ ಬಂದಿದೆ. ಹೌದು… ಅಚ್ಚರಿ ಅನ್ನಿಸಿದರೂ ಸತ್ಯ. ‘ಸ್ವಿಂಗರ್ಸ್’ ಎನ್ನುವ ಹೆಸರಿನಲ್ಲಿ ಪಾರ್ಟಿಗೆ ಎಂದು ಕರೆದು ಪರಸ್ಪರ ಗರ್ಲ್ ಫ್ರೆಂಡ್ ಎಕ್ಸ್ ಚೇಂಜ್ ಮಾಡಿಕೊಳ್ಳುವ ಈ ದಂಧೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಳಕಿಗೆ ಬಂದಿದೆ. ಈ ಸಂಬಂಧ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ವಿಚಾರಣೆ ವೇಳೆ ಆಘಾತಕಾರಿ ಮಾಹಿತಿ ಪತ್ತೆಯಾಗಿದೆ.

ಯುವಕನೋರ್ವ ಪರಿಚಯಸ್ಥ ಯುವತಿಯನ್ನ ಪಾರ್ಟಿಗೆ ಎಂದು ಕರೆದು ಬಳಿಕ ಸ್ನೇಹಿತನ ಜೊತೆಗೆ ಸಹಕರಿಸುವಂತೆ ಬಲವಂತ ಮಾಡಿದ್ದಾನೆ. ಇದಕ್ಕೆ ಒಪ್ಪದಿದ್ದಕ್ಕೆ ಸ್ನೇಹಿತರ ಜೊತೆಗೆ ಸೇರಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇನ್ನೂ ನೊಂದ ಯುವತಿ ಘಟನೆ ಸಂಬಂಧ ಸಿಸಿಬಿಗೆ ದೂರು ನೀಡಿದ್ದು, ಕೂಡಲೇ ಅಲರ್ಟ್ ಆದ ಪೊಲೀಸರು ಕರಾಳ ದಂಧೆ ನಡೆಸುತ್ತಿದ್ದ ಕಾಮುಕರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಹರೀಶ್,ಹೇಮಂತ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಪ್ರೀತಿಗಾಗಿ ಪ್ರಾಣಕೊಟ್ಟ‌ ವಿವಾಹಿತರು: ಪ್ರೇಮಿಗಳ ಲವ್ ಕಹಾನಿ ಸಾವಿನಲ್ಲಿ ಅಂತ್ಯ

ಹರೀಶ್ ಎಂಬಾತ ಯುವತಿಯನ್ನ ಪರಿಚಯ ಮಾಡಿಕೊಂಡಿದ್ದ. ಅಲ್ಲದೇ ಆಕೆಯನ್ನ ಲೈಂಗಿಕವಾಗಿ ಬಳಸಿಕೊಂಡಿದ್ದ. ಜೋಡಿ ಹಕ್ಕಿಯಂತೆ ಎಲ್ಲಾ ಕಡೆ ಸುತ್ತಾಡಿದ್ದಾರೆ. ಬರುಬರುತ್ತಾ ಹರೀಶ್ ತನ್ನ ತನ್ನ ಅಸಲು ಮುಖ ತೋರಿಸಿದ್ದಾನೆ.

ಸ್ವಿಂಗರ್ಸ್ ವಾಟ್ಸ್ ಗ್ರೂಪ್

ವಾಟ್ಸ್ ಗ್ರೂಪ್ ಮಾಡಿಕೊಂಡಿದ್ದ ‘ಸ್ವಿಂಗರ್ಸ್’ ಟೀಂ, ಬೆಂಗಳೂರು ಹೊರ ವಲಯದಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು. ಪಾರ್ಟಿಗೆ ಕಪಲ್ಸ್ ಜೊತೆಗೆ ಆಸಾಮಿಗಳು ತಮ್ಮ ಪ್ರಿಯತಮೆಯರನ್ನು ಪರಸ್ಪರ ಎಕ್ಸ್ ಚೇಂಜ್ ಮಾಡಿಕೊಳ್ಳುತ್ತಿದ್ದರು ಅಷ್ಟೇ ಅಲ್ಲ ಒಬ್ಬನ ಗರ್ಲ್ ಫ್ರೆಂಡ್ ಜೊತೆಗೆ ಮತ್ತೊಬ್ಬ ಬೆಡ್ ಶೇರ್ ಮಾಡುತ್ತಿದ್ದ. ಇದೇ ರೀತಿ ಯುವತಿಯನ್ನ ಹರೀಶ್ ಎಂಬಾತ ಕೂಪಕ್ಕೆ ದೂಡಿದ್ದ. ಒಪ್ಪದಿದ್ದಾಗ ಸ್ನೇಹಿತರ ಜೊತೆಗೆ ಸೇರಿ ಅತ್ಯಾಚಾರ ಮಾಡಿದ್ದಾನೆ.

ಆರೋಪಿಗಳ ಫೋನ್​ನಲ್ಲಿ ವಿಡಿಯೋಗಳು ಪತ್ತೆ

ಘಟನೆಯಿಂದ ಬೇಸತ್ತ ಯುವತಿ ಸಿಸಿಬಿಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಸಿಸಿಬಿ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳ ಮೊಬೈಲ್‌ ಪರಿಶೀಲನೆ ವೇಳೆ ಭಯಾನಕ‌ ಸತ್ಯ ಬಯಲಾಗಿದೆ. ಮೊಬೈಲ್ ನಲ್ಲಿ ಹತ್ತಾರು ಯುವತಿಯರ ಬೆತ್ತಲೆ ಫೋಟೊ ಪತ್ತೆಯಾಗಿವೆ. ಇನ್ನು ಏಕಾಂತದಲ್ಲಿದ್ದ ವಿಡಿಯೋಗಳನ್ನು ಸಹ ಆರೋಪಿಗಳು ರೆಕಾರ್ಡ್​ ಮಾಡಿಟ್ಟುಕೊಂಡಿರುವುದು ಪತ್ತೆಯಾಗಿದೆ. ಅದೇ ವೀಡಿಯೋ ತೋರಿಸಿ ಯುವತಿಗೆ ಬ್ಲಾಕ್ ಮೇಲ್ ಮಾಡುತ್ತಿರುವುದಾಗಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ಒಟ್ಟಾರೆಯಾಗಿ ಇಂತಹ ನೀಚ ಕಾಮುಕರನ್ನು ನಂಬಿ ಪಾರ್ಟಿ, ಮೋಜು ಮಸ್ತಿ ಎಂದು ಹೋಗುವ ಹೆಣ್ಮಕ್ಕಳು ಯುವತಿಯರು ಸ್ವಲ್ಪ ಹುಷಾರಾಗಿರುವುದು ಒಳಿತು. ಎಲ್ಲರೂ ಹಾಗೇ ಇರುವುದಿಲ್ಲ. ಆದರೂ ಎಚ್ಚರಿದಿಂದ ಇರಬೇಕಷ್ಟೇ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:47 am, Sat, 21 December 24