AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಷೇಧದ ನಡುವೆಯೂ ತೆರೆದಿದ್ದ ಹುಕ್ಕಾ ಬಾರ್​ಗಳ ಮೇಲೆ ಸಿಸಿಬಿ ದಾಳಿ, 7 ಜನರ ಬಂಧನ

ಕರ್ನಾಟಕದಲ್ಲಿ ಹುಕ್ಕಾ ಬಾರ್​ಗಳನ್ನು ನಿಷೇಧಿಸಲಾಗಿದೆ. ನಿಷೇಧದ ನಡುವೆಯೂ ಕೆಲವು ಕಡೆ ಹುಕ್ಕಾ ಬಾರ್​ಗಳನ್ನು ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ 7 ಜನರನ್ನು ಬಂಧಿಸಿದ್ದಾರೆ. ಹಾಗೂ 12.5 ಲಕ್ಷ ಮೌಲ್ಯದ ಹುಕ್ಕಾ ಫ್ಲೇವರ್ ಹಾಗೂ ಇತರೇ ವಸ್ತುಗಳನ್ನು ಸೀಜ್ ಮಾಡಿದ್ದಾರೆ.

ನಿಷೇಧದ ನಡುವೆಯೂ ತೆರೆದಿದ್ದ ಹುಕ್ಕಾ ಬಾರ್​ಗಳ ಮೇಲೆ ಸಿಸಿಬಿ ದಾಳಿ, 7 ಜನರ ಬಂಧನ
ಹುಕ್ಕಾ ಬಾರ್​ಗಳ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರ ದಾಳಿ
ಜಗದೀಶ ಬಿ.
| Edited By: ಆಯೇಷಾ ಬಾನು|

Updated on: Feb 27, 2024 | 1:06 PM

Share

ಬೆಂಗಳೂರು, ಫೆ.27: ರಾಜ್ಯದಲ್ಲಿ ಹುಕ್ಕಾ ಬಾರ್ (Hookah Bar) ತೆರೆಯುವುದು ಅಥವಾ ನಡೆಸುವುದನ್ನು ನಿಷೇಧಿಸಲು ಅವಕಾಶ ಕಲ್ಪಿಸುವ 2024ನೇ ಸಾಲಿನ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ(ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮ) ವಿಧೇಯಕ ಅಂಗೀಕಾರ ಆಗಿದೆ. ಈ ಮೂಲಕ ರಾಜ್ಯದಲ್ಲಿ ಹುಕ್ಕಾ ಬಾರ್ ನಡೆಸುವಂತಿಲ್ಲ. ಸದ್ಯ ಇಂದು ಬೆಂಗಳೂರಿನಲ್ಲಿ ನಿಷೇಧಿತ ಹುಕ್ಕಾ ಕೇಂದ್ರಗಳ ಮೇಲೆ ಸಿಸಿಬಿ (CCB Police) ದಾಳಿ ನಡೆಸಿದೆ.

ಮಹಾಲಕ್ಷ್ಮೀ ಲೇಔಟ್, ಹೆಚ್​ಎಎಲ್ ಹಾಗೂ ಕೆ.ಆರ್. ಪುರಂ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಹುಕ್ಕಾ ಬಾರ್​ಗಳ ಮೇಲೆ ನಿಷೇಧ ಹೇರಿತ್ತು. ಆದರೂ ಕೆಲವು ಕಡೆಗಳಲ್ಲಿ ಅನಧಿಕೃತವಾಗಿ ಹುಕ್ಕಾ ಬಾರ್​ಗಳನ್ನು ನಡೆಸಲಾಗುತ್ತಿತ್ತು. ಈ ಬಗ್ಗೆ ಸೂಕ್ತ ಮಾಹಿತಿ ಆಧರಿಸಿ ನಗರ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಏಳು ಜನರನ್ನು ಬಂಧಿಸಲಾಗಿದೆ. 12.5 ಲಕ್ಷ ಮೌಲ್ಯದ ಹುಕ್ಕಾ ಫ್ಲೇವರ್ ಹಾಗೂ ಇತರೇ ವಸ್ತುಗಳನ್ನು ಸೀಜ್ ಮಾಡಲಾಗಿದೆ.

ನಿಷೇಧ ಹೇರಿದಾಗಿನಿಂದಲೂ ಸುಮಾರು‌ 20 ಹುಕ್ಕಾ ಬಾರ್​ಗಳು ಅನಧಿಕೃತವಾಗಿ ನಡೀತಾ ಇತ್ತು. ಎಲ್ಲೆಲ್ಲಿ ಅನಧಿಕೃತವಾಗಿ ನಡೆಸ್ತಾ ಇದ್ದಾರೆ ಅಂತ ಹುಕ್ಕಾ ಕೇಂದ್ರಗಳನ್ನು ಪತ್ತೆ ಮಾಡಿ ಕ್ಲೋಸ್ ಮಾಡಲಾಗ್ತಿದೆ. 710 ಹುಕ್ಕಾ ಫ್ಲೇವರ್, 36 ಹುಕ್ಕಾ ಪ್ಯಾಕೇಟ್, 28 ಬಾಕ್ಸ್ ಫಾಯಿಲ್ ಪೇಪರ್, 19 ಪಿಲ್ಟರ್​ಗಳು ಜೊತೆಗೆ 25 ಹುಕ್ಕಾ ಪೈಪ್​ಗಳನ್ನು ಸಿಸಿಬಿ ಸೀಜ್ ಮಾಡಿದೆ.

ಇದನ್ನೂ ಓದಿ: Hookah: ಕರ್ನಾಟಕದಲ್ಲಿ ಹುಕ್ಕಾ ನಿಷೇಧ; ಇದು ಸಿಗರೇಟ್​ಗಿಂತ ಅಪಾಯಕಾರಿಯಾ?

ಹುಕ್ಕಾ, ತಂಬಾಕು ಅಥವಾ ನಿಕೋಟಿನ್ ಒಳಗೊಂಡ ನಿಕೋಟಿನ್ ರಹಿತ ತಂಬಾಕು ರಹಿತ ಸ್ವಾಧಭರಿತ, ಸ್ವಾಧರಹಿತ ಮೇಲಾಸಿಸ್ , ಶಿಶಾ ಹಾಗೂ ಇದೇ ಮಾದರಿಯ ಇನಿತ್ತರ ಹೆಸರುಗಳಿಂದ ಕರೆಯುವ ಹುಕ್ಕಾ ಉತ್ಪನ್ನ ಮಾರಾಟವನ್ನು ಕರ್ನಾಟಕದಲ್ಲಿ ನಿಷೇಧಿಸಲಾಗಿದೆ.

ಹುಕ್ಕಾ ಬಾರ್‌ಗಳ ಪರಿಣಾಮವನ್ನು ಅಧ್ಯಯನ ಮಾಡಿದ ಆರೋಗ್ಯ ತಜ್ಞರು ನಿಷೇಧಕ್ಕೆ ಶಿಫಾರಸು ಮಾಡಿದ್ದರು. ಬಳಿಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಹ ರಾಜ್ಯದಲ್ಲಿ ಹುಕ್ಕಾ ಬಾರ್‌ ನಿಷೇಧಿಸುವುದಾಗಿ ಹೇಳಿದ್ದರು. ಇದೀಗ ಅಧಿಕೃತವಾಗಿ ಕರ್ನಾಟಕದಲ್ಲಿ ಹುಕ್ಕಾ ಉತ್ಪನ್ನ ಹಾಗೂ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ ಆದೇಶ ಉಲ್ಲಂಘಿಸಿದರೆ COTPA 2003, 2015 ಕಾಯ್ದೆ ಅನ್ವಯ ಕ್ರಮಕೈಗೊಳ್ಳುವುದಾಗಿ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್