ಲಾಕ್ಡೌನ್ ಸಮಯದಲ್ಲಿ 51 ಅಕ್ರಮ ಅಡ್ಡೆ ಮೇಲೆ ಸಿಸಿಬಿ ರೇಡ್
ಬೆಂಗಳೂರು: ಕಳೆದ 40 ದಿನಗಳ ಲಾಕ್ಡೌನ್ ಸಂದರ್ಭದಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದ ವಿವಿಧ ಅಡ್ಡೆಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಕಲಿ ಸ್ಯಾನಿಟೈಸರ್, ನಕಲಿ ಮಾಸ್ಕ್, ಅಕ್ರಮ ಮದ್ಯ ಮಾರಾಟ ಸೇರಿದಂತೆ MRPಗಿಂತ ಹೆಚ್ಚಿನ ಬೆಲೆಗೆ ಮಾರುತ್ತಿದ್ದ ಆಹಾರ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ವಿವಿಧೆಡೆ 51 ಕಡೆ ದಾಳಿ ನಡೆಸಿರುವ ಸಿಸಿಬಿ ಅಧಿಕಾರಿಗಳು ಈವರೆಗೆ 70 ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿಯಲ್ಲಿ ಸುಮಾರು ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಬೆಂಗಳೂರು: ಕಳೆದ 40 ದಿನಗಳ ಲಾಕ್ಡೌನ್ ಸಂದರ್ಭದಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದ ವಿವಿಧ ಅಡ್ಡೆಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಕಲಿ ಸ್ಯಾನಿಟೈಸರ್, ನಕಲಿ ಮಾಸ್ಕ್, ಅಕ್ರಮ ಮದ್ಯ ಮಾರಾಟ ಸೇರಿದಂತೆ MRPಗಿಂತ ಹೆಚ್ಚಿನ ಬೆಲೆಗೆ ಮಾರುತ್ತಿದ್ದ ಆಹಾರ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.
ನಗರದ ವಿವಿಧೆಡೆ 51 ಕಡೆ ದಾಳಿ ನಡೆಸಿರುವ ಸಿಸಿಬಿ ಅಧಿಕಾರಿಗಳು ಈವರೆಗೆ 70 ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿಯಲ್ಲಿ ಸುಮಾರು ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.