ಲಾಕ್​ಡೌನ್ ಸಮಯದಲ್ಲಿ 51 ಅಕ್ರಮ ಅಡ್ಡೆ ಮೇಲೆ ಸಿಸಿಬಿ ರೇಡ್

|

Updated on: May 05, 2020 | 6:17 PM

ಬೆಂಗಳೂರು: ಕಳೆದ 40 ದಿನಗಳ ಲಾಕ್​ಡೌನ್​ ಸಂದರ್ಭದಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದ ವಿವಿಧ ಅಡ್ಡೆಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಕಲಿ ಸ್ಯಾನಿಟೈಸರ್, ನಕಲಿ ಮಾಸ್ಕ್, ಅಕ್ರಮ ಮದ್ಯ ಮಾರಾಟ ಸೇರಿದಂತೆ MRPಗಿಂತ ಹೆಚ್ಚಿನ ಬೆಲೆಗೆ ಮಾರುತ್ತಿದ್ದ ಆಹಾರ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ವಿವಿಧೆಡೆ 51 ಕಡೆ ದಾಳಿ ನಡೆಸಿರುವ ಸಿಸಿಬಿ ಅಧಿಕಾರಿಗಳು ಈವರೆಗೆ 70 ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿಯಲ್ಲಿ ಸುಮಾರು ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಲಾಕ್​ಡೌನ್ ಸಮಯದಲ್ಲಿ 51 ಅಕ್ರಮ ಅಡ್ಡೆ ಮೇಲೆ ಸಿಸಿಬಿ ರೇಡ್
Follow us on

ಬೆಂಗಳೂರು: ಕಳೆದ 40 ದಿನಗಳ ಲಾಕ್​ಡೌನ್​ ಸಂದರ್ಭದಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದ ವಿವಿಧ ಅಡ್ಡೆಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಕಲಿ ಸ್ಯಾನಿಟೈಸರ್, ನಕಲಿ ಮಾಸ್ಕ್, ಅಕ್ರಮ ಮದ್ಯ ಮಾರಾಟ ಸೇರಿದಂತೆ MRPಗಿಂತ ಹೆಚ್ಚಿನ ಬೆಲೆಗೆ ಮಾರುತ್ತಿದ್ದ ಆಹಾರ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರದ ವಿವಿಧೆಡೆ 51 ಕಡೆ ದಾಳಿ ನಡೆಸಿರುವ ಸಿಸಿಬಿ ಅಧಿಕಾರಿಗಳು ಈವರೆಗೆ 70 ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿಯಲ್ಲಿ ಸುಮಾರು ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.