ಮಸಾಜ್ ಪಾರ್ಲರ್ ಹೆಸರಲ್ಲಿ ಅಕ್ರಮ ಚಟುವಟಿಕೆ: ಇಬ್ಬರು ಸಿಸಿಬಿ ಬಲೆಗೆ

|

Updated on: Feb 21, 2020 | 6:28 PM

ಬೆಂಗಳೂರು: ಮಸಾಜ್ ಪಾರ್ಲರ್ ಹೆಸರಿನಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಹದೇವಪುರದ ಹೂಡಿಯಲ್ಲಿ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಗಳಾದ ಎಂ.ಬಿ.ಗೌಸ್, ಹರೀಶ್​ರನ್ನು ಬಂಧಿಸಿದ್ದಾರೆ. ದಾಳಿ ವೇಳೆ ಆರು ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ಆರೋಪಿಗಳ ಬಳಿ 5 ಮೊಬೈಲ್ ಫೋನ್, ಒಂದು ಸ್ವೈಪಿಂಗ್ ಮಿಷಿನ್ ಮತ್ತು 10,710 ನಗದು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಮಸಾಜ್ ಪಾರ್ಲರ್ ಹೆಸರಲ್ಲಿ ಅಕ್ರಮ ಚಟುವಟಿಕೆ: ಇಬ್ಬರು ಸಿಸಿಬಿ ಬಲೆಗೆ
Follow us on

ಬೆಂಗಳೂರು: ಮಸಾಜ್ ಪಾರ್ಲರ್ ಹೆಸರಿನಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮಹದೇವಪುರದ ಹೂಡಿಯಲ್ಲಿ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಗಳಾದ ಎಂ.ಬಿ.ಗೌಸ್, ಹರೀಶ್​ರನ್ನು ಬಂಧಿಸಿದ್ದಾರೆ.

ದಾಳಿ ವೇಳೆ ಆರು ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ಆರೋಪಿಗಳ ಬಳಿ 5 ಮೊಬೈಲ್ ಫೋನ್, ಒಂದು ಸ್ವೈಪಿಂಗ್ ಮಿಷಿನ್ ಮತ್ತು 10,710 ನಗದು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಓರ್ವ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.