ಲಾಕ್ಡೌನ್ ಮಧ್ಯೆ ಅಕ್ರಮ ಹುಕ್ಕಾ ಬಾರ್ ಮೇಲೆ ಸಿಸಿಬಿ ರೇಡ್
ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಅನಧಿಕೃತವಾಗಿ ನಡೆಸುತ್ತಿದ್ದ ಹುಕ್ಕಾ ಬಾರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಮಾಲೀಕ ಹಾಗೂ ಮ್ಯಾನೇಜರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸೂರಜ್ ಕುಮಾರ್(29), ಲಕ್ಷ್ಮಣ್(26), ಜೀತು(21) ಸೇರಿ ನಾಲ್ವರು ಅರೆಸ್ಟ್ ಆಗಿದ್ದಾರೆ. ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹುಕ್ಕಾಬಾರ್ ನಡೆಸಲಾಗುತ್ತಿತ್ತು. ಘಟನಾ ಸ್ಥಳದಲ್ಲಿ ಹುಕ್ಕಾ ಪಾಟ್ಸ್ , ತಂಬಾಕು, ಲಿಕ್ಕರ್ ಬಾಟಲ್ಸ್ ಜಪ್ತಿ ಮಾಡಿದ್ದಾರೆ. ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಕಾಯ್ದೆ, ಅಬಕಾರಿ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಅನಧಿಕೃತವಾಗಿ ನಡೆಸುತ್ತಿದ್ದ ಹುಕ್ಕಾ ಬಾರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಮಾಲೀಕ ಹಾಗೂ ಮ್ಯಾನೇಜರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸೂರಜ್ ಕುಮಾರ್(29), ಲಕ್ಷ್ಮಣ್(26), ಜೀತು(21) ಸೇರಿ ನಾಲ್ವರು ಅರೆಸ್ಟ್ ಆಗಿದ್ದಾರೆ.
ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹುಕ್ಕಾಬಾರ್ ನಡೆಸಲಾಗುತ್ತಿತ್ತು. ಘಟನಾ ಸ್ಥಳದಲ್ಲಿ ಹುಕ್ಕಾ ಪಾಟ್ಸ್ , ತಂಬಾಕು, ಲಿಕ್ಕರ್ ಬಾಟಲ್ಸ್ ಜಪ್ತಿ ಮಾಡಿದ್ದಾರೆ. ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಕಾಯ್ದೆ, ಅಬಕಾರಿ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.