Bengaluru Police: ಕ್ರಿಮಿನಲ್​ ಚಟುವಟಿಕೆ ನಡೆಸುತ್ತಿದ್ದವರ ಮನೆ ಮೇಲೆ ದಾಳಿ; ಒಟ್ಟು 74 ಆರೋಪಿಗಳು ವಶಕ್ಕೆ

ನಂದಿನಿ ಲೇಔಟ್, ಸ್ವತಂತ್ರ ಯೋಧರನಗರ, ಕೂಲಿನಗರ ಸೇರಿದಂತೆ ಹಲವೆಡೆ ಪೊಲೀಸರು ದಾಳಿ ಮಾಡಿದ್ದಾರೆ. ರೌಡಿಶೀಟರ್, ಕಳ್ಳತನ ಪ್ರಕರಣದ ಒಟ್ಟು 74 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ನಂದಿನಿ ಲೇಔಟ್ ಪೊಲೀಸರ ವಿಶೇಷ ಕಾರ್ಯಾಚರಣೆ ಮಾಡಲಾಗಿದೆ.

Bengaluru Police: ಕ್ರಿಮಿನಲ್​ ಚಟುವಟಿಕೆ ನಡೆಸುತ್ತಿದ್ದವರ ಮನೆ ಮೇಲೆ ದಾಳಿ; ಒಟ್ಟು 74 ಆರೋಪಿಗಳು ವಶಕ್ಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Jul 25, 2021 | 11:11 PM

ಬೆಂಗಳೂರು: ಕ್ರಿಮಿನಲ್​ ಚಟುವಟಿಕೆ ನಡೆಸುತ್ತಿದ್ದವರ ಮನೆ ಮೇಲೆ ದಾಳಿ ನಡೆಸಿ, ಒಟ್ಟು 74 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸರ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸ್ ಜನಸಂಪರ್ಕ ಸಭೆಯಲ್ಲಿ ದೂರು ಹಿನ್ನೆಲೆಯಲ್ಲಿ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ನೇತೃತ್ವದಲ್ಲಿ ದಾಳಿ ಮಾಡಿದ್ದಾರೆ.

ನಂದಿನಿ ಲೇಔಟ್, ಸ್ವತಂತ್ರ ಯೋಧರನಗರ, ಕೂಲಿನಗರ ಸೇರಿದಂತೆ ಹಲವೆಡೆ ಪೊಲೀಸರು ದಾಳಿ ಮಾಡಿದ್ದಾರೆ. ರೌಡಿಶೀಟರ್, ಕಳ್ಳತನ ಪ್ರಕರಣದ ಒಟ್ಟು 74 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ನಂದಿನಿ ಲೇಔಟ್ ಪೊಲೀಸರ ವಿಶೇಷ ಕಾರ್ಯಾಚರಣೆ ಮಾಡಲಾಗಿದೆ.

ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ, ಎಸಿಪಿ ವೆಂಕಟೇಶ ನಾಯ್ಡು, ಇನ್​ಸ್ಪೆಕ್ಟರ್ ವೆಂಕಟೇಗೌಡ ನೇತೃತ್ವದಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವವರ ಮನೆ ಮೇಲೆ ದಾಳಿ ಮಾಡಲಾಗಿದೆ. ಮಾದಕ ಸೇವನೆ ಅನುಮಾನದಡಿಯಲ್ಲಿ ಕೆಲವರಿಗೆ ವೈದ್ಯಕೀಯ ಪರೀಕ್ಷೆ ಕೂಡ ನಡೆಸಲಾಗಿದೆ. ಪೊಲೀಸ್ ಜನಸಂಪರ್ಕ ಸಭೆಯಲ್ಲಿ ಕೇಳಿ ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ ದಿಢೀರ್ ದಾಳಿ ನಡೆಸಿ ಪರಿಶೀಲನೆ ಮಾಡಲಾಗಿದೆ.

ವ್ಹೀಲಿಂಗ್​ನಲ್ಲಿ ತೊಡಗಿದ್ದ ಐವರ ಸೆರೆ ಅಪಾಯಕಾರಿ ಚಾಲನೆ ಹಾಗೂ ವ್ಹೀಲಿಂಗ್​ನಲ್ಲಿ ತೊಡಗಿದ್ದ ಐವರನ್ನು ಬಂಧಿಸಲಾಗಿದೆ. ಬೆಂಗಳೂರು ಪಶ್ಚಿಮ ವಿಭಾಗದ ಸಂಚಾರಿ ಪೊಲೀಸರು ಐದು ಮಂದಿಯನ್ನು ಸೆರೆ ಹಿಡಿದಿದ್ದಾರೆ. ಕೆಂಗೇರಿ, ಬ್ಯಾಟರಾಯನಪುರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಕೆಂಗೇರಿ 4, ಬ್ಯಾಟರಾಯನಪುರ ಠಾಣೆಯಲ್ಲಿ 1 ಕೇಸ್ ದಾಖಲು ಮಾಡಲಾಗಿದೆ.

ಯುವಜನರು ದ್ವಿಚಕ್ರ ವಾಹನಗಳನ್ನು ಹಿಡಿದು ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸುವುದು, ವ್ಹೀಲಿಂಗ್ ನಡೆಸುವುದು ಕೆಲವೆಡೆ ಕಂಡುಬಂದಿತ್ತು. ವಾರಾಂತ್ಯಗಳಲ್ಲಿ, ಫ್ಲೈ ಓವರ್ ರಸ್ತೆ ಮೇಲೆ, ಅಷ್ಟೇ ಅಲ್ಲದೆ ಸಹಜ ಟ್ರಾಫಿಕ್ ಇರುವ ಸಂದರ್ಭದಲ್ಲಿ ನಗರದ ರಸ್ತೆಗಳಲ್ಲೂ ಹೀಗೆ ಕೆಲ ಯುವಕರು ಬೇಜಾವಾಬ್ದಾರಿಯುತ ನಡವಳಿಕೆ ತೋರುತ್ತಿದ್ದರು. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ನಗರ ಪೊಲೀಸರು ಮುಂದಾಗಿದ್ದಾರೆ. ಇದೀಗ ಐದು ಮಂದಿಯನ್ನು ಸೆರೆ ಹಿಡಿಯಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Bengaluru News: ಅಪಾಯಕಾರಿ ಚಾಲನೆ ಹಾಗೂ ವ್ಹೀಲಿಂಗ್​ನಲ್ಲಿ ತೊಡಗಿದ್ದ ಐವರ ಸೆರೆ

ಪೊಲೀಸರು ಅಪರಾಧಿಗಳನ್ನು ಹೀಗೂ ಕರೆದೊಯ್ಯುತ್ತಾರಾ?

(Bengaluru City Police Crime Cases Nandini Layout Police Raid at many places)

Published On - 11:04 pm, Sun, 25 July 21

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್