ಬೆಂಗಳೂರು: ಕೊಡಿಗೇಹಳ್ಳಿಯಲ್ಲಿ ಪತಿಯ ಜೊತೆ ಹೋಗುತ್ತಿದ್ದ ಮಹಿಳೆಗೆ ಪುಂಡರಿಂದ ಲೈಂಗಿಕ ಕಿರುಕುಳ

ಪತಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಬಿಹಾರ ಮೂಲದ ಮಹಿಳೆಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ವಿರೂಪಾಕ್ಷಪುರದಲ್ಲಿ ನಡೆದಿದೆ. ಘಟನೆ ಸಂಬಂಧ ಸಹಾಯವಾಣಿ ಮೂಲಕ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಮತ್ತೊಂದೆಡೆ, ಲಾರಿಯನ್ನೇ ಕದ್ದ ಇಬ್ಬರು ಖದೀಮರನ್ನು ಬಂಧಿಸಲಾಗಿದೆ.

ಬೆಂಗಳೂರು: ಕೊಡಿಗೇಹಳ್ಳಿಯಲ್ಲಿ ಪತಿಯ ಜೊತೆ ಹೋಗುತ್ತಿದ್ದ ಮಹಿಳೆಗೆ ಪುಂಡರಿಂದ ಲೈಂಗಿಕ ಕಿರುಕುಳ
ಸಾಂದರ್ಭಿಕ ಚಿತ್ರ
Follow us
Shivaprasad
| Updated By: Ganapathi Sharma

Updated on:May 01, 2024 | 9:07 AM

ಬೆಂಗಳೂರು, ಮೇ 1: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಅಪರಾಧ ಚಟುವಟಿಕೆಗಳು (Criminal Activities) ಕಳೆದ ಕೆಲವು ದಿನಗಳಿಂದ ಹೆಚ್ಚಾಗುತ್ತಿದ್ದು, ಪತಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ ಘಟನೆ ಕೊಡಿಗೇಹಳ್ಳಿಯ (Kodigehalli) ವಿರೂಪಾಕ್ಷಪುರದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ರಾತ್ರಿ 10.30 ರ ವೇಳೆಗೆ ನಡೆದುಕೊಂಡು ಹೋಗುತ್ತಿದ್ದ ಬಿಹಾರ ಮೂಲದ ದಂಪತಿಗೆ ಪುಂಡರು ಕಿರುಕುಳ ನೀಡಿದ್ದಾರೆ. ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಕಿರುಕುಳ ನೀಡಿದ್ದಾರೆ. ಒಪ್ಪದಿದ್ದಾಗ ಕಿಡ್ನ್ಯಾಪ್​ ಮಾಡುವುದಾಗಿ ಮಹಿಳೆಗೆ ಬೆದರಿಕೆ ಹಾಕಿದ್ದಾರೆ.

ನಂತರ ದಂಪತಿ ಅಲ್ಲಿಂದ ಓಡಿಹೋಗಲು ಮುಂದಾಗಿದ್ದಾರೆ. ಅಷ್ಟರಲ್ಲಿ ಅವರನ್ನು ಅಟ್ಟಾಡಿಸಿಕೊಂಡು ಹೋದ ಪುಂಡರು, ಹೆಂಡತಿಯನ್ನು ಕಳುಹಿಸಿಕೊಡುವಂತೆ ಗಂಡನಿಗೆ ಬೆದರಿಕೆ ಹಾಕಿದ್ದಾರೆ. ತಕ್ಷಣವೇ ದಂಪತಿ ಸಹಾಯ ಕೋರಿ ಪೊಲೀಸರಿಗೆ ಫೋನ್ ಮಾಡಿದ್ದಾರೆ. ಬಳಿಕ ಬಿಹಾರ ಪೊಲೀಸರಿಗೂ ಫೋನ್ ಮಾಡಿ ನೆರವು ಕೋರಿದ್ದಾರೆ. ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚೆಗಷ್ಟೇ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ನಂತರ ಘಟನೆ ಸಂಬಂಧ ಐವರು ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿದ್ದರು.

ಲಾರಿಯನ್ನೇ ಕದ್ದಿದ್ದ ಕಳ್ಳರು ಅಂದರ್

12 ಲಕ್ಷ ರೂಪಾಯಿ ಮೌಲ್ಯದ ಲಾರಿಯನ್ನೇ ಕಳವು ಮಾಡಿದ ಕೃತ್ಯ ಕನಕಪುರ ರಸ್ತೆ ಸಿಲ್ಕ್ ಕ್ವಾಟ್ರಸ್ ಬಳಿ ನಡೆದಿದೆ. ಇದೀಗ ಘಟನೆ ಸಂಬಂಧ ಆರೋಪಿಗಳಾದ ರಾಜ, ರಂಜಿತ್ ಕುಮಾರ್ ಎಂಬವರನ್ನು ಭಾರತಿ ನಗರ ಪೊಲೀಸರು ಬಂಧಿಸಿದ್ದಾರೆ. ಕನಕಪುರ ರಸ್ತೆ ಸಿಲ್ಕ್ ಕ್ವಾಟ್ರಸ್ ಕೋಲ್ಸ್ ಪಾರ್ಕ್ ಪಕ್ಕ ಪಾರ್ಕಿಂಗ್ ಮಾಡಿದ್ದ ತಮಿಳುನಾಡು ನೋಂದಣಿ ಲಾರಿಯನ್ನು ಇವರು ಕಳವು ಮಾಡಿದ್ದರು.

ಇದನ್ನೂ ಓದಿ: ಪ್ರತಿಷ್ಠಿತ ಐಕಿಯಾ ಕಂಪನಿಯ ಹೆಸರಿನಲ್ಲಿ ವಂಚನೆ, ಹಣ ಡಬಲ್ ಆಗುತ್ತದೆಂದು ನಂಬಿಸಿ ಲಕ್ಷಾಂತರ ರೂಪಾಯಿ ಪಂಗನಾಮ

ಆರೋಪಿಗಳನ್ನು ಅನುಮಾನಸ್ಪದ ನಡವಳಿಕೆಯ ಕಾರಣ ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ. ಇದೇ ವೇಳೆ, ಲಾರಿ ಕಳವು ಕೃತ್ಯ ಬಯಲಿಗೆ ಬಂದಿದೆ. ನಂತರ ಅವರನ್ನು ಬಂಧಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:05 am, Wed, 1 May 24

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ