Bengaluru Crime: ಬೆಂಗಳೂರಿನಲ್ಲಿ ಹಾಡಹಗಲೇ ವೃದ್ಧ ದಂಪತಿಯ ಕೊಲೆ; ಪೊಲೀಸರಿಂದ ಚುರುಕಿನ ತನಿಖೆ
ವೃದ್ಧೆ ಪ್ರೇಮಲತಾ ಕುತ್ತಿಗೆಗೆ ಕೇಬಲ್ ವೈರ್ ಬಿಗಿದು ಕೊಲೆ ಮಾಡಲಾಗಿದೆ. ಶಾಂತರಾಜುಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.
ಬೆಂಗಳೂರು: ನಗರವೇ ಬೆಚ್ಚಿಬೀಳುವಂತಹ ಘಟನೆಯೊಂದು ನಡೆದಿದ್ದು, ಹಾಡಹಗಲೇ ವೃದ್ಧ ದಂಪತಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದಾರೆ. ಕಳೆದ 20 ವರ್ಷಗಳಿಂದ ಕಾಶಿನಗರದಲ್ಲಿ ವಾಸವಿದ್ದ ಬಿಎಂಟಿಸಿ ನಿವೃತ್ತ ಉದ್ಯೋಗಿ ಶಾಂತರಾಜು(65) ಮತ್ತು ಪ್ರೇಮಲತಾ(62) ಕೊಲೆಯಾದ ದಂಪತಿ. ಕುತ್ತಿಗೆ ಕೊಯ್ದು, ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಚಿನ್ನಾಭರಣ, ಹಣ ದೋಚುವ ಉದ್ದೇಶದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪರಿಚಯಸ್ಥರೇ ವೃದ್ಧ ದಂಪತಿಯನ್ನು ಕೊಲೆಗೈದಿರುವ ಕುರಿತೂ ತನಿಖೆ ನಡೆಸಲಾಗುತ್ತಿದೆ. ಒಂದು ಮನೆಯಲ್ಲಿ ತಾವಿದ್ದು, 2 ಮನೆ ಬಾಡಿಗೆಗೆ ನೀಡಿದ್ದ ಈ ದಂಪತಿಗೆ ಮಕ್ಕಳಿರಲಿಲ್ಲ. ಆದರೆ ಸಾಕು ಮಗಳು ಇರುವುದಾಗಿ ನೆರೆಹೊರೆಯವರು ಪೊಲೀಸ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ದಂಪತಿ ಮಧ್ಯಾಹ್ನ ಅಕ್ಕಪಕ್ಕದ ಮನೆಯವರೊಂದಿಗೆ ಮಾತನಾಡಿದ್ದರು. ಅಲ್ಲದೇ ಮೂವರು ಟೀ ಕುಡಿದ ಲೋಟಗಳು ಮನೆಯ ಟೇಬಲ್ ಮೇಲಿವೆ ಎಂದು ಪೊಲೀಸ್ ಸಿಬ್ಬಂದಿ ತಿಳಿಸಿದ್ದಾರೆ.
ವೃದ್ಧೆ ಪ್ರೇಮಲತಾ ಕುತ್ತಿಗೆಗೆ ಕೇಬಲ್ ವೈರ್ ಬಿಗಿದು ಕೊಲೆ ಮಾಡಲಾಗಿದೆ. ಶಾಂತರಾಜುಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಪ್ರತ್ಯೇಕ ಕೊಠಡಿಯಲ್ಲಿರುವ ಶಾಂತರಾಜು, ಪ್ರೇಮಲತಾ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಕಮಲ್ ಪಂತ್, ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಭೇಟಿ ನೀಡಿ ತನಿಖೆ ಮುಂದುವರೆಸಿದ್ದಾರೆ. ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ತೋಟ ನೋಡಿಕೊಳ್ಳುವ ಕೃಷಿ ಕಾರ್ಮಿಕರೇ ಕಳ್ಳತನ ಮಾಡಿದರೇ? ನೆಲಮಂಗಲದಲ್ಲಿ ದಾಖಲಾಯ್ತು ದೂರು ನೆಲಮಂಗಲ: ತೋಟ ನೋಡಿಕೊಳ್ಳಲು ನೇಮಿಸಿದ್ದ ಕೃಷಿ ಕಾರ್ಮಿಕರೇ ತೋಟದಲ್ಲಿ ಕಳ್ಳತನ ಮಾಡಿದ್ದಾರೆ ಎಂಬ ಆರೋಪದಡಿ ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದೆ. ಯಂಟಗಾನಹಳ್ಳಿ ಡಾ.ಮಾಧವಿ ಎಂಬುವರ ತೋಟದಲ್ಲಿ ಕಳ್ಳತನವಾಗಿದ್ದು, ಕೆಲಸಕ್ಕೆಂದು ನೇಮಿಸಲಾಗಿದ್ದ ಕಾರ್ಮಿಕರು ತೋಟದಲ್ಲಿದ್ದ ಮಿನಿ ಟ್ರ್ಯಾಕ್ಟರ್, ಕಲ್ಟಿವೇಟರ್, ಆಯಿಲ್ ಪಂಪ್, ಟ್ರಿಲ್ಲರ್ ಪಕ್ಕದ ತೋಟದ ಮಾಲೀಕರಿಗೆ ಮಾರಿ ಪರಾರಿಯಾಗಿದ್ದಾರೆ ಎಂದು ದೂರು ದಾಖಲಾಗಿದೆ. ಜತೆಗೆ ಟ್ರ್ಯಾಕ್ಟರ್ ಖರೀದಿಗೆ 6 ಲಕ್ಷ ಹಣ ಪಡೆದು ಪರಾರಿಯಾಗಿದ್ದಾರೆ ಎಂದು ಸಹ ಆಂಧ್ರಪ್ರದೇಶ ಮೂಲದ ವೆಂಕಟೇಶ್, ರಾಚಕೊಂಡ ಎಂಬ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಲಾಗಿದೆ.
ದಾವಣೆಗೆರೆಯಲ್ಲಿ ಮನೆಗಳ್ಳತನದ ಆರೋಪದಡಿ ಇಬ್ಬರ ಬಂಧನ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸುರೇಶ್ ದಾಸರ(49), ಪಿ.ರಾಜು(46) ಬಂಧಿತ ಆರೋಪಿಗಳು. ಬಂಧಿತರಿಂದ 4.5 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, 1 ಬೈಕ್ ಜಪ್ತಿ ಮಾಡಿಕೊಳ್ಳಲಾಗಿದೆ. ಆರೋಪಿಗಳು ಚನ್ನಗಿರಿ ತಾಲ್ಲೂಕು ಚಿಕ್ಕಕೊಗಲೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮನೆಗಳ್ಳತನ ಮಾಡುತ್ತಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಬೀಗ ಮುರಿದು ಕಳ್ಳತನ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:
ಅಫ್ಘಾನಿಸ್ತಾನಕ್ಕೆ ದುಡ್ಡು ಕೊಡಲು ಐಎಂಎಫ್ ನಕಾರ, ರಿಸರ್ವ್ ಬ್ಯಾಂಕ್ ಹಣ ಅಮೆರಿಕಾ ಪಾಲು; ತಾಲಿಬಾನಿಗಳ ಆದಾಯ ಏನು?
ಅಫ್ಘಾನಿಸ್ತಾನಕ್ಕಾಗಿ ಹೋರಾಡುತ್ತಿರುವ ತಾಲಿಬಾನ್ ಉಗ್ರ ಸಂಘಟನೆಯಲ್ಲ; ಭಾರತದ ಕವಿಯ ವಿವಾದಾತ್ಮಕ ಹೇಳಿಕೆ
(Bengaluru Crime Murder of an elderly couple in Kashinagar police started investigation0
Published On - 6:46 pm, Fri, 20 August 21