AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಪಿಎಸ್​ಐ ಕೆಲಸ ಕೊಡಿಸುವುದಾಗಿ ನಂಬಿಸಿ 18 ಲಕ್ಷ ರೂಪಾಯಿ ವಂಚನೆ

Bengaluru Crime: ಪುಟ್ಟರಾಜು ಪುತ್ರಿ ಪಿಎಸ್ಐ ದೈಹಿಕ ಪರೀಕ್ಷೆಯಲ್ಲಿ ಫೇಲಾಗಿದ್ದರು. ಈ ವೇಳೆ, ಕೃಷ್ಣಪ್ಪ ಎಂಬವರು ಕೆಲಸ ಕೊಡಿಸುವುದಾಗಿ ಪುಟ್ಟರಾಜುಗೆ ಭರವಸೆ ನೀಡಿದ್ದರು.

Bengaluru: ಪಿಎಸ್​ಐ ಕೆಲಸ ಕೊಡಿಸುವುದಾಗಿ ನಂಬಿಸಿ 18 ಲಕ್ಷ ರೂಪಾಯಿ ವಂಚನೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Oct 08, 2021 | 5:43 PM

ಬೆಂಗಳೂರು: ವ್ಯಕ್ತಿಯೊಬ್ಬನಿಗೆ ಪಿಎಸ್​ಐ ಕೆಲಸ ಕೊಡಿಸುವುದಾಗಿ ನಂಬಿಸಿ 18 ಲಕ್ಷ ವಂಚನೆ ಮಾಡಿದ ಪ್ರಕರಣ ನಗರದಲ್ಲಿ ನಡೆದಿದೆ. ಘಟನೆ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ. ಶ್ರೀನಿವಾಸ ಎಂಬುವನ ವಿರುದ್ಧ ಪುಟ್ಟರಾಜುನಿಂದ ಠಾಣೆಗೆ ದೂರು ನೀಡಲಾಗಿದೆ. ಪುಟ್ಟರಾಜು ಪುತ್ರಿ ಪಿಎಸ್ಐ ದೈಹಿಕ ಪರೀಕ್ಷೆಯಲ್ಲಿ ಫೇಲಾಗಿದ್ದರು. ಈ ವೇಳೆ, ಕೃಷ್ಣಪ್ಪ ಎಂಬವರು ಕೆಲಸ ಕೊಡಿಸುವುದಾಗಿ ಪುಟ್ಟರಾಜುಗೆ ಭರವಸೆ ನೀಡಿದ್ದರು.

ಬಳಿಕ, ಕೃಷ್ಣಪ್ಪ ಪರಿಚಿತ ಶ್ರೀನಿವಾಸನನ್ನು ಕರೆಸಿ ಮಾತುಕತೆ ನಡೆಸಿದ್ದರು. 55 ಲಕ್ಷ ಹಣಕ್ಕೆ ಬೇಡಿಕೆಯಿಟ್ಟು 18 ಲಕ್ಷ ಮುಂಗಡ ಪಾವತಿ ಮಾಡಿಸಿಕೊಂಡಿದ್ದರು. ಕೃಷ್ಣಪ್ಪನ ಮೂಲಕ ಶ್ರೀನಿವಾಸನಿಗೆ 18 ಲಕ್ಷ ಹಣ ನೀಡಿದ್ದರು. ಪುಟ್ಟರಾಜು, ಸ್ನೇಹಿತ ಕೃಷ್ಣಪ್ಪನನ್ನ ನಂಬಿ 18 ಲಕ್ಷ ಹಣ ನೀಡಿದ್ದರು. ಹಣ ನೀಡಿದ ಬಳಿಕ ಮತ್ತೊಬ್ಬ ಸ್ನೇಹಿತನಿಂದ ವಂಚನೆ ವಿವರಿಸಲಾಗಿತ್ತು. ಪಿಎಸ್​ಐ ಆಯ್ಕೆ ಪಾರದರ್ಶಕವಾಗಿರುತ್ತದೆ ಎಂದು ಎಚ್ಚರಿಸಿದ್ದ. ಕೃಷ್ಣಪ್ಪನ ಸ್ನೇಹಿತ, ನೀವು ಮೋಸ ಹೋಗಿದ್ದೀರಿ ಎಂದು ಎಚ್ಚರಿಸಿದ್ದರು. ಈ ಹಿನ್ನೆಲೆಯಲ್ಲಿ ಪುಟ್ಟರಾಜು ತಕ್ಷಣ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ.

ಯುವತಿ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ ಯುವತಿ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ದುರ್ಘಟನೆ ನಗರದ ಹೆಚ್​ಎಎಲ್​ನ ಲಾಲ್​ ಬಹದ್ದೂರ್​ ಶಾಸ್ತ್ರಿ ನಗರದಲ್ಲಿ ನಡೆದಿದೆ. ಹಾಡಹಗಲೇ ನಡುರಸ್ತೆಯಲ್ಲಿ ಲಿಖಿತ್ (21) ಎಂಬಾತ ಬರ್ಬರ ಕೊಲೆಯಾಗಿದ್ದಾನೆ. ಡ್ಯಾಗರ್​​ನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಯುವತಿ ವಿಚಾರಕ್ಕೆ ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು. ಹೀಗಾಗಿ, ಮಾತಾಡುವುದಕ್ಕೆ ನಯೀದ್ ಎಂಬಾತ​​ನನ್ನು ಲಿಖಿತ್ ಕರೆಸಿಕೊಂಡಿದ್ದ. ಈ ವೇಳೆ ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿದೆ ಎಂದು ತಿಳಿದುಬಂದಿದೆ.

ಲಿಖಿತ್​ ಎಂಬಾತ ನಯೀದ್​ಗೆ ಡ್ಯಾಗರ್​​ನಿಂದ ಹಲ್ಲೆಗೆ ಮುಂದಾಗಿದ್ದ. ಆಗ ನಯೀದ್ ಡ್ಯಾಗರ್​ ಕಸಿದುಕೊಂಡು ಲಿಖಿತ್​ಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರ ಗಾಯಗೊಂಡಿದ್ದ ಲಲಿತ್ ​(21) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹೆಚ್​ಎಎಲ್​​​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Aadhaar Card: ಆಧಾರ್​ ಕಾರ್ಡ್​ ಮೊಬೈಲ್ ನಂಬರ್​ ಅಪ್​ಡೇಟ್​ ಮಾಡಿದ್ದೀರಾ? ವಂಚನೆ ತಪ್ಪಿಸಲು ಹೀಗೆ ಮಾಡಿ

ಇದನ್ನೂ ಓದಿ: ಶಿವಮೊಗ್ಗ: ಸಚಿವ ಕೆ.ಎಸ್.ಈಶ್ವರಪ್ಪ ಹೆಸರಿನಲ್ಲಿ ಲಕ್ಷ ಲಕ್ಷ ಹಣ ವಂಚನೆ; ಇಬ್ಬರ ಬಂಧನ, ಮೂವರು ಪರಾರಿ

Published On - 3:16 pm, Fri, 8 October 21

ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ