ಬೆಂಗಳೂರು: ಮಗನನ್ನೇ ಗುಂಡಿಕ್ಕಿ ಹತ್ಯೆ ಮಾಡಿದ ತಂದೆ

ಜೀವನ್ಮರಣ ಸ್ಥಿತಿಯಲ್ಲಿದ್ದ ನರ್ತನ್​​ನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ದುರಾದೃಷ್ಟವಶಾತ್, ಚಿಕಿತ್ಸೆಗೆ ಸ್ಪಂದಿಸದೇ ಖಾಸಗಿ ಆಸ್ಪತ್ರೆಯಲ್ಲಿ ಯುವಕ ಮೃತಪಟ್ಟಿದ್ದಾರೆ. ಸದ್ಯ, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬೆಂಗಳೂರು: ಮಗನನ್ನೇ ಗುಂಡಿಕ್ಕಿ ಹತ್ಯೆ ಮಾಡಿದ ತಂದೆ
ಬೆಂಗಳೂರು: ಮಗನನ್ನೇ ಗುಂಡಿಕ್ಕಿ ಹತ್ಯೆ ಮಾಡಿದ ತಂದೆ
Follow us
Jagadisha B
| Updated By: Ganapathi Sharma

Updated on: Jan 26, 2024 | 7:35 AM

ಬೆಂಗಳೂರು, ಜನವರಿ 26: ವ್ಯಕ್ತಿಯೊಬ್ಬರು ಮಗನನ್ನೇ ಗುಂಡಿಕ್ಕಿ ಹತ್ಯೆ ಮಾಡಿದ ದಾರುಣ ಘಟನೆ ಬೆಂಗಳೂರಿನಲ್ಲಿ ಗುರುವಾರ ರಾತ್ರಿ ನಡೆದಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕರೆಕಲ್​ನ ಮನೆಯೊಂದರಲ್ಲಿ ಸುರೇಶ್ ಎಂಬವರು ಮಗ ನರ್ತನ್ ಬೋಪಣ್ಣ (32) ಅವರನ್ನು ಕೊಲೆ ಮಾಡಿದ್ದಾರೆ.​​ ಘಟನೆ ನಡೆದ ತಕ್ಷಣ ಸ್ಥಳೀಯರು ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ಮನೆಗೆ ತೆರಳಿದ್ದರು. ಈ ವೇಳೆ ನರ್ತನ್ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ.

ಜೀವನ್ಮರಣ ಸ್ಥಿತಿಯಲ್ಲಿದ್ದ ನರ್ತನ್​​ನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ದುರಾದೃಷ್ಟವಶಾತ್, ಚಿಕಿತ್ಸೆಗೆ ಸ್ಪಂದಿಸದೇ ಖಾಸಗಿ ಆಸ್ಪತ್ರೆಯಲ್ಲಿ ಯುವಕ ಮೃತಪಟ್ಟಿದ್ದಾರೆ. ಸದ್ಯ, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಘಟನೆಯ ಹಿಂದಿನ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದಲ್ಲಿ ಗುಂಡಿನ ದಾಳಿ ನಡೆಸಿ ವ್ಯಕ್ತಿಯೊಬ್ಬರ ಕೊಲೆಗೆ ಯತ್ನಿಸಿದ ಘಟನೆ ಕೆಲವು ದಿನಗಳ ಹಿಂದೆ ವಿಜಯಪುರದಲ್ಲಿ ನಡೆದಿತ್ತು. ಘಟನೆಯಲ್ಲಿ ರಾಜು ನ್ಯಾಮಗೊಂಡ ಎಂಬವರು ಗಾಯಗೊಂಡಿದ್ದರು.

ಬೆಂಗಳೂರಿನಲ್ಲಿಂದು ಸಂಚಾರ ಬದಲಾವಣೆ

ಗಣರಾಜ್ಯೋತ್ಸವ ಪ್ರಯುಕ್ತ ಬೆಂಗಳೂರಲ್ಲಿ ಕೆಲ ಮಾರ್ಗಗಳಲ್ಲ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಬೆಳಗ್ಗೆ 9.30ರಿಂದ 10.30ರ ವರೆಗೆ ಕಬ್ಬನ್ ರಸ್ತೆ, BRV ಜಂಕ್ಷನ್, ಕಾಮರಾಜ ರಸ್ತೆಯಲ್ಲಿ ವಾಹನಗಳ ಸಂಚಾರ ಬಂದ್ ಆಗಲಿವೆ. ಪರ್ಯಾಯ ಮಾರ್ಗಗಳ ಮೂಲಕ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಇನ್​ಫೆಂಟ್ರಿ ರಸ್ತೆ, ಮಣಿಪಾಲ್ ಸೆಂಟರ್ ​ಕಡೆ ಸಂಚರಿಸುವ ವಾಹನಗಳು ಇನ್​ಫೆಂಟ್ರಿ ರಸ್ತೆ-ಸಫೀನಾ ಪ್ಲಾಜಾ ಮೂಲಕ ಎಡ ತಿರುವು ಪಡೆದು ಮೈನ್​ಗಾರ್ಡ್ ರಸ್ತೆ, ಡಿಕನ್ಸ್​ಸನ್ ರಸ್ತೆ ಮೂಲಕ ಕಬ್ಬನ್ ರಸ್ತೆಗೆ ಸಂಚರಿಸಬಹುದಾಗಿದೆ.

ಇದನ್ನೂ ಓದಿ: ಹಳೆ ವೈಷಮ್ಯ ಹಿನ್ನೆಲೆ ವಿಜಯಪುರದಲ್ಲಿ ಗುಂಡಿನ ದಾಳಿ: ಓರ್ವನಿಗೆ ಗಾಯ

ಗಣರಾಜ್ಯೋತ್ಸವಕ್ಕೆ ಸಮಾರಂಭಕ್ಕೆ ಆಗಮಿಸುವವರು, ಕಾರ್ ಪಾಸ್‌ಗಳನ್ನು ಹೊಂದಿರುವ ಎಲ್ಲಾ ಆಹ್ವಾನಿತರು ಪಾಸ್​ಗಳಲ್ಲಿ ನಿಗದಿಪಡಿಸಿದ ಗೇಟ್‌ಗಳಲ್ಲಿ ಇಳಿದುಕೊಳ್ಳುವುದು ಹಾಗೂ ಪಾಸ್‌ನಲ್ಲಿ ನಿಗದಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡುವಂತೆ ಕೋರಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ