ಬೆಂಗಳೂರು: ಹೋಟೆಲ್​ನಲ್ಲಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯ ಬಂಧನ

ಆರ್‌ಪಿಸಿ ಲೇಔಟ್‌ನ ಹೋಟೆಲ್​​ನಲ್ಲಿ ಮಹಿಳೆ ಜತೆ ಅನುಚಿತವಾಗಿ ವರ್ತಿಸಿದ್ದ ವ್ಯಕತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸ್ನೇಹಿತನೊಬ್ಬ ಸವಾಲು ಹಾಕಿದ ಕಾರಣ ಮೋಜಿಗಾಗಿ ಮಹಿಳೆಯನ್ನು ಮುಟ್ಟಿ ಅನುಚಿತವಾಗಿ ವರ್ತಿಸಿದ್ದಾಗಿ ಆರೋಪಿಯು ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾನೆ. ಘಟನೆ ಹಿಂದೆ ಇನ್ನೂ ಏನೇನಿದೆ? ಇಲ್ಲಿದೆ ಮಾಹಿತಿ

ಬೆಂಗಳೂರು: ಹೋಟೆಲ್​ನಲ್ಲಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯ ಬಂಧನ
ಬಂಧಿತ ಆರೋಪಿ ಚಂದನ್
Follow us
TV9 Web
| Updated By: Ganapathi Sharma

Updated on: Jan 31, 2024 | 1:04 PM

ಬೆಂಗಳೂರು, ಜನವರಿ 31: ನಗರದ ಆರ್‌ಪಿಸಿ ಲೇಔಟ್‌ನಲ್ಲಿರುವ (RPC Layout) ಹೊಟೇಲ್‌ನಲ್ಲಿ ಮಹಿಳೆಯೊಬ್ಬರ ಜತೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ವಿಜಯನಗರ ಪೊಲೀಸರು (Bengaluru Police) ಬಂಧಿಸಿದ್ದಾರೆ. ಸ್ನೇಹಿತರೊಬ್ಬರು ಸವಾಲು ಹಾಕಿದ್ದರಿಂದ ಮಹಿಳೆಯನ್ನು ಮುಟ್ಟಿ ಅನುಚಿತವಾಗಿ ವರ್ತಿಸಿದ್ದಾಗಿ ಆರೋಪಿಯು ಪೊಲೀಸರಿಗೆ ತಿಳಿಸಿದ್ದಾನೆ. ಘಟನೆಗೆ ಸಾಕ್ಷಿಯಾಗಿದ್ದ ಮಹಿಳಾ ಕ್ಯಾಷಿಯರ್ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಬೆಂಗಳೂರಿನ ಹಂಪಿನಗರ ನಿವಾಸಿ ಚಂದನ್ ಎಂದು ಗುರುತಿಸಲಾಗಿದೆ. ಈತ ಗ್ಯಾಸ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾನೆ.

ಡಿಸೆಂಬರ್ 30ರಂದು ಸಂಜೆ 7:30ರ ಸುಮಾರಿಗೆ ಚಂದನ್ ಮತ್ತು ಆತನ ಇಬ್ಬರು ಸ್ನೇಹಿತರು ಆರ್‌ಪಿಸಿ ಲೇಔಟ್‌ನಲ್ಲಿರುವ ಹೋಟೆಲ್‌ಗೆ ತಿಂಡಿ ತಿನ್ನಲು ಬಂದಿದ್ದರು. ಊಟ ಮುಗಿಸಿ ಹೋಟೆಲ್‌ನಲ್ಲಿ ಸ್ವಲ್ಪ ಸಮಯ ಕಳೆಯುತ್ತಿದ್ದರು. ಅಷ್ಟರಲ್ಲಿ ಹೋಟೆಲ್ ಕ್ಯಾಶ್ ಕೌಂಟರ್ ನಲ್ಲಿ ಒಬ್ಬ ಮಹಿಳಾ ಗ್ರಾಹಕರು ಕಾಣಿಸಿಕೊಂಡರು. ಆರೋಪಿ ಚಂದನ್ ಮಹಿಳೆಯ ಬಳಿ ಬಂದು ಹಿಂಬದಿಯಿಂದ ಆಕೆಯನ್ನು ಮುಟ್ಟುತ್ತಿರುವುದು ಕಂಡು ಬಂದಿತ್ತು. ಚಂದನ್ ಆಕೆಯನ್ನು ಮುಟ್ಟಿದ ನಂತರ ಆತನ ಇಬ್ಬರು ಸ್ನೇಹಿತರು ಶಿಳ್ಳೆ ಹೊಡೆದಿದ್ದರು. ಈ ಕೃತ್ಯಕ್ಕೆ ಮಹಿಳೆ ಆಕ್ಷೇಪ ವ್ಯಕ್ತಪಡಿಸಿ ವಾಗ್ವಾದ ಆರಂಭಿಸಿದಾಗ ಹೋಟೆಲ್‌ನಲ್ಲಿದ್ದವರು ಜಮಾಯಿಸಿದ್ದರು. ಇದೇ ವೇಳೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಈ ಘಟನೆಯ ದೃಶ್ಯ ಹೋಟೆಲ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಹೋಟೆಲ್ ಮಾಲೀಕರೊಂದಿಗೆ ಸಮಾಲೋಚಿಸಿದ ನಂತರ ಘಟನೆಯ ಪ್ರತ್ಯಕ್ಷದರ್ಶಿ ಮಹಿಳಾ ಕ್ಯಾಷಿಯರ್ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 354 (ಮಹಿಳೆಯ ಮೇಲೆ ದೌರ್ಜನ್ಯ ನಡೆಸುವ ಸಂಚಿಗೆ ಸಂಬಂಧಿಸಿದ್ದು) ಮತ್ತು 509 (ಲೈಂಗಿಕ ಕಿರುಕುಳ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಾಗಿ ಶೋಧ ನಡೆಸುತ್ತಿದ್ದ ಪೊಲೀಸರು, ಬುಧವಾರ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ವೇಳೆ ಚಂದನ್ ತನ್ನ ಸ್ನೇಹಿತರೊಬ್ಬರು ಮಹಿಳೆಯನ್ನು ಮುಟ್ಟುವಂತೆ ಸವಾಲು ಹಾಕಿದ್ದ. ಅದನ್ನು ಒಪ್ಪಿಕೊಂಡು ಅಪರಾಧ ಎಸಗಿರುವುದಾಗಿ ಬಹಿರಂಗಪಡಿಸಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಣ್ಮಕ್ಕಳಿಗಿಲ್ಲ ಸೇಫ್ಟಿ: ಹೋಟೆಲ್​ಗೆ ಬಂದ ಯುವತಿ ಜೊತೆ ಅಸಭ್ಯ ವರ್ತನೆ; ಸಿಸಿಟಿವಿಯಲ್ಲಿ ಸೆರೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಣ್ಮಕ್ಕಳಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಬಿಎಂಟಿಸಿ ಬಸ್, ಮೆಟ್ರೋ, ಮಾಲ್​ಗಳಲ್ಲಿ ಹೆಣ್ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುವ ಕಾಮುಕರಿಗೆ ಕಡಿವಾಣ ಹಾಕುವವರಿಲ್ಲದಂತಾಗಿದೆ ಎಂಬ ಕೂಗು ಇತ್ತೀಚಗೆ ಕೇಳಿಬಂದಿತ್ತು. ನಮ್ಮ ಮೆಟ್ರೋದಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣದ ನಂತರ ರಾಜಧಾನಿಯಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂಬ ಆಕ್ರೋಶ ನಾಗರಿಕರಿಂದ ವ್ಯಕ್ತವಾಗಿತ್ತು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಹೋಟೆಲ್​ನಲ್ಲಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ ಘಟನೆ ವರದಿಯಾಗಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್