AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನೈಟಿ ಹಾಕಿಕೊಂಡು ಬಂದು ಶೂ ಕಳ್ಳತನ, ಸಿಸಿ ಟಿವಿಯಲ್ಲಿ ಖದೀಮನ ಕೃತ್ಯ ಸೆರೆ

ಕಿಲಾಡಿ ಕಳ್ಳನೋರ್ವ ತಡ ರಾತ್ರಿ ಮಹಿಳೆಯಂತೆ ನೈಟಿ ಧರಿಸಿ ಮನೆ, ಅಪಾರ್ಟ್ಮೆಂಟ್​ಗಳಿಗೆ ನುಗ್ಗಿ ಮನೆ ಮುಂದ ಬಿಡಲಾದ ಕಾಸ್ಲಿ ಶೂಗಳನ್ನು ಕದಿಯುತ್ತಿದ್ದಾನೆ. ಖದೀಮನ ಕೃತ್ಯದ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿವೆ. ಈ ಬಗ್ಗೆ ಎಚ್ಚರಿಕೆಯಿಂದಿರಿ ಎಂದು ಅನಿಲ್ ಎಂಬುವವರು ಟ್ವಿಟರ್​ನಲ್ಲಿ ವಿಡಿಯೋ ಹಂಚಿಕೊಂಡು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ನೈಟಿ ಹಾಕಿಕೊಂಡು ಬಂದು ಶೂ ಕಳ್ಳತನ, ಸಿಸಿ ಟಿವಿಯಲ್ಲಿ ಖದೀಮನ ಕೃತ್ಯ ಸೆರೆ
ಶೂ ಕಳ್ಳನ ಕೃತ್ಯ ಸಿಸಿಟಿವಿಯಲ್ಲಿ ಸೆರೆ
TV9 Web
| Edited By: |

Updated on: Feb 21, 2024 | 7:22 AM

Share

ಬೆಂಗಳೂರು, ಫೆ.21: ಮನೆಯ ಆಚೆ ಕಾಸ್ಟಿ ಶೂಗಳನ್ನು ಬಿಡುವ ಮಂದಿ ಎಚ್ಚರ (Shoe Thief). ಏಕೆಂದರೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶೂ ಕಳ್ಳನೋರ್ವ ಆ್ಯಕ್ಟಿವ್ ಆಗಿದ್ದಾನೆ. ಈತ ಮಹಿಳೆಯರಂತೆ ನೈಟಿ (Nighty) ಹಾಕಿಕೊಂಡು ಬಂದು ಅಪಾರ್ಟ್​ಮೆಂಟ್​​ಗೆ ನುಗ್ಗಿ ಶೂ ಕದಿಯುತ್ತಾನೆ. ಸದ್ಯ ಖತರ್ನಾಕ್ ಕಳ್ಳನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಅನಿಲ್ ಎಂಬುವವರು ಎಕ್ಸ್​ನಲ್ಲಿ ಸಿಸಿಟಿವಿ ದೃಶ್ಯ ಸಮೇತ ಪೋಸ್ಟ್ ಮಾಡಿ ವಿಚಿತ್ರ ಕಳ್ಳರಿದ್ದಾರೆ ಎಚ್ಚರವಹಿಸಿ ಎಂದು ಎಚ್ಚರಿಕೆ ನೀಡಿದ್ದಾರೆ.

ತನ್ನ ಗುರುತು ಸಿಗಬಾರದು ಎಂದು ಮಹಿಳೆಯರಂತೆ ನೈಟಿ ಧರಿಸಿ ಕಳ್ಳತನಕ್ಕೆ ಇಳಿಯುವ ಖತರ್ನಾಕ್ ಕಳ್ಳ, ಬೆಂಗಳೂರಿನ ಅಪಾರ್ಟ್​ಮೆಂಟ್​​ಗೆ ನುಗ್ಗಿ ಶೂ ಕದಿಯುತ್ತಾನೆ. ಬೆಳೆಬಾಳುವ ಶೂಗಳನ್ನು ಕದ್ದು ಕಾಂಪೌಂಡ್ ಹಾರಿ ಕಳ್ಳ ಪರಾರಿಯಾಗುವ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಅನಿಲ್ ಕುಮಾರ್ ಎಂಬಾತ ಕಳ್ಳನ ಕೃತ್ಯದ ಬಗ್ಗೆ ಪೋಸ್ಟ್​​ ಮಾಡಿದ್ದಾರೆ. ಟ್ವೀಟ್​​ನಲ್ಲಿ ಇಂತಹ ವಿಚಿತ್ರ ಕಳ್ಳರಿದ್ದಾರೆ ಎಚ್ಚರವಹಿಸಿ ಎಂದು ಪೋಸ್ಟ್​​ ಮಾಡಿದ್ದಾರೆ.

ಅನೀಲ್ ಅವರ ಟ್ವಿಟರ್ ಪೋಸ್ಟ್

ಇದನ್ನೂ ಓದಿ: ಟಿವಿ9 ಹೆಸರು ಹೇಳಿಕೊಂಡು ಓಡಾಡುತ್ತಿದ್ದ ವ್ಯಕ್ತಿಯ ವಿರುದ್ಧ ಎಫ್​ಐಆರ್, ಆರೋಪಿ ಸೀದಾ ಜೈಲಿಗೆ

ಮಗು ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ

ಆಂಧ್ರ ಸಾರಿಗೆ ಬಸ್ ಹರಿದು ಮಗು ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಬಳಿ ರಸ್ತೆ ದಾಟುತ್ತಿದ್ದ ತಾಯಿ, ಇಬ್ಬರು ಮಕ್ಕಳಿಗೆ ಬೈಕ್ ಡಿಕ್ಕಿಯಾಗಿತ್ತು. ರಸ್ತೆಗೆ ಬಿದ್ದವರ ಮೇಲೆ ಆಂಧ್ರ ಸಾರಿಗೆ ಬಸ್ ಹರಿದಿದ್ದು, ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಮತ್ತೊಂದು ಮಗು, ತಾಯಿ ಸ್ಥಿತಿ ಗಂಭೀರ ಗಾಯಳಾಗಿವೆ.

ಕಾರು, ಆಟೋ ಮುಖಾಮುಖಿ; 8 ಜನರಿಗೆ ಗಂಭೀರ ಗಾಯ

ಕಾರು ಮತ್ತು ಆಟೋ ಮುಖಾಮುಖಿ ಡಿಕ್ಕಿಯಾಗಿ 8 ಜನರಿಗೆ ಗಂಭೀರ ಗಾಯಗಳಾಗಿವೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ ಅಪಘಾತ ಸಂಭವಿಸಿದ್ದು, ಗಾಯಾಳುಗಳ ಆಕ್ರಂದನ ಮುಗಿಲು ಮುಟ್ಟಿದೆ. ಕಾರು ಚಾಲಕನ ಅತಿಯಾದ ವೇಗ, ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ. ಅಪಘಾತ ನಂತರ ಪ್ರಜ್ಞಾಹೀನರಾಗಿ ಬಿದ್ದಿದ್ದ ಆಟೋ ಪ್ರಯಾಣಿಕರನ್ನ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ