AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿಯನ್ನೇ ಅಪಹರಿಸಿ 40 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟ ಪೊಲೀಸರು; ಪಿಎಸ್​ಐ ಸೇರಿ ನಾಲ್ವರ ವಿರುದ್ಧ ಎಫ್​ಐಆರ್

ಪೊಲೀಸರೇ ಆರೋಪಿಯನ್ನು ಅಪಹರಿಸಿ ಆತನ ಸಂಬಂಧಿಕರ ಬಳಿ 40 ಲಕ್ಷ ರೂ.ಗೆ ಬೇಡಿಕೆ ಇಟ್ಟ ಸಿನಿಮೀಯ ಪ್ರಕರಣವೊಂದು ಬೆಂಗಳೂರಿನ (Bengaluru) ಮಾರತ್ತಹಳ್ಳಿಯಲ್ಲಿ (Marathahalli) ಬೆಳಕಿಗೆ ಬಂದಿದೆ. ಇದೀಗ ಮಾರತ್ತಹಳ್ಳಿ ಪಿಎಸ್​ಐ ರಂಗೇಶ್ ಸೇರಿ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಿಸಿಕೊಳ್ಳಲಾಗಿದೆ.

ಆರೋಪಿಯನ್ನೇ ಅಪಹರಿಸಿ 40 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟ ಪೊಲೀಸರು; ಪಿಎಸ್​ಐ ಸೇರಿ ನಾಲ್ವರ ವಿರುದ್ಧ ಎಫ್​ಐಆರ್
ಸಾಂದರ್ಭಿಕ ಚಿತ್ರ
Ganapathi Sharma
|

Updated on: Mar 22, 2023 | 10:34 PM

Share

ಬೆಂಗಳೂರು: ಪೊಲೀಸರೇ ಆರೋಪಿಯನ್ನು ಅಪಹರಿಸಿ ಆತನ ಸಂಬಂಧಿಕರ ಬಳಿ 40 ಲಕ್ಷ ರೂ.ಗೆ ಬೇಡಿಕೆ ಇಟ್ಟ ಸಿನಿಮೀಯ ಪ್ರಕರಣವೊಂದು ಬೆಂಗಳೂರಿನ (Bengaluru) ಮಾರತ್ತಹಳ್ಳಿಯಲ್ಲಿ (Marathahalli) ಬೆಳಕಿಗೆ ಬಂದಿದೆ. ಇದೀಗ ಮಾರತ್ತಹಳ್ಳಿ ಪಿಎಸ್​ಐ ರಂಗೇಶ್ ಸೇರಿ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಿಸಿಕೊಳ್ಳಲಾಗಿದೆ. ಎಫ್ಐಆರ್ ದಾಖಲಾದ ವಿಚಾರ ತಿಳಿಯುತ್ತಿದ್ದಂತೆಯೇ ಆರೋಪಿ ಪೊಲೀಸರು ತಲೆಮರೆಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಕೆಲವು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ತನಿಖೆ ವೇಳೆ ಪೊಲೀಸರೇ ಅಪಹರಣ ಎಸಗಿರುವುದು ತಿಳಿದುಬಂದಿತ್ತು. ಇದರ ಬೆನ್ನಲ್ಲೇ ಎಲ್ಲರನ್ನೂ ಬಂಧಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೂಚಿಸಿದ್ದರು.

ನಡೆದಿದ್ದೇನು?

ಹುಲಿ ಚರ್ಮ, ಉಗುರು ಮಾರಾಟ ಮಾಡುತ್ತಿದ್ದ ಆರೋಪಿ ರಾಮಾಂಜನಿ ಎಂಬಾತನನ್ನು ಮಾರ್ಚ್ 18 ರ ಸಂಜೆ 4‌.30 ಕ್ಕೆ ಅಪಹರಣ ಮಾಡಲಾಗಿತ್ತು. ಈ ವಿಚಾರವಾಗಿ ರಾಮಾಂಜನಿಯ ಸಂಬಂಧಿ ಶಿವರಾಮಯ್ಯ ಎಂಬವರು ಬಾಗಲೂರು ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದರು. ಕೂಡಲೇ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ ಮಾಡಿದ್ದ ಬಾಗಲೂರು ಪೊಲೀಸರು ರಾಮಾಂಜನಿಯನ್ನು ಕರೆತಂದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಪೊಲೀಸರೇ ಅಪಹರಣ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾನೆ.

ಇದನ್ನೂ ಓದಿ: Bengaluru: ವಿವೇಕನಗರ ಪೊಲೀಸರ ಕಾರ್ಯಾಚರಣೆ; ಕಳವಾಗಿದ್ದ 40 ಲಕ್ಷ ರೂ. ಮೌಲ್ಯದ ಫೋನ್​ ಸಹಿತ ಕಳ್ಳರ ಬಂಧನ

‘ನನ್ನನ್ನು ಕರೆದುಕೊಂಡು ಹೋಗಿ ಅಕ್ರಮವಾಗಿ ಬಂಧನದಲ್ಲಿ ಇರಿಸಿಕೊಂಡಿದ್ದರು. ಬಿಡುಗಡೆ ಮತ್ತು ಪ್ರಕರಣದಿಂದ ಬಿಡುಗಡೆ ಮಾಡಲು 45 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದರು. ಹಣ ಕೊಡದೆ ಇದ್ದರೆ ಸಾಯುವವರಿಗೆ ಜೈಲಿನಲ್ಲಿಯೇ ಇರುವಂತೆ ಮಾಡುವುದಾಗಿ ಬೆದರಿಕೆ ಹಾಕಿದ್ದರು’ ಎಂದು ವಿಚಾರಣೆ ವೇಳೆ ರಾಮಾಂಜನಿ ತಿಳಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಇದರ ಬೆನ್ನಲ್ಲೇ ಪಿಎಸ್​​ಐ ಸೇರಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಎಫ್​ಐಆರ್ ದಾಖಲಾಗುತ್ತಿದ್ದಂತೆಯೇ ಮಾರತ್ತಹಳ್ಳಿ ಪಿಎಸ್​ಐ ರಂಗೇಶ್ ಹಾಗೂ ಇತರರು ತಲೆಮರೆಸಿಕೊಂಡಿದ್ದಾರೆ. ಹೆಡ್​ಕಾನ್ಸ್​ಟೇಬಲ್ ಹರೀಶ್​ಅನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ತಲೆಗೆ ಗನ್ ಇಟ್ಟು ಹಣಕ್ಕೆ ಬೇಡಿಕೆಯಿಟ್ಟಿದ್ದರು

ಪಿಎಸ್​ಐ ರಂಗೇಶ್ ಹಾಗೂ ಇತರರು ಆರೋಪಿ ರಾಮಾಂಜನಿಯ ತಲೆಗೆ ಗನ್ ಇಟ್ಟು ಹಣಕ್ಕಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಪ್ರಕರಣದಲ್ಲಿ ಪೊಲೀಸರೇ ಆರೋಪಿಗಳು ಎಂಬುದು ಗೊತ್ತಾಗುತ್ತಿದ್ದಂತೆಯೇ ತಕ್ಷಣವೇ ಎಲ್ಲರನ್ನೂ ಬಂಧಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೂಚಿಸಿದ್ದರು. ಅದರಂತೆ ಮಂಗಳವಾರ ಹೆಡ್ ಕಾನ್ಸ್​ಟೇಬಲ್ ಹರೀಶ್​ನನ್ನು ಬಂಧಿಸಲಾಗಿತ್ತು. ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ