ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​​ನ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​​ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಾಟನ್​ಪೇಟೆ ಫ್ಲವರ್​ ಗಾರ್ಡನ್​ನಲ್ಲಿ ನಡೆದಿದೆ. ಮತ್ತೊಂದು ಘಟನೆಯಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಗುರುಮಠಕಲ್ ತಾಲೂಕಿನ ಚಂಡ್ರಕಿ ಗ್ರಾಮದ ನರಸಿಂಹಲು (48) ಎಂಬುವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​​ನ ಕೊಲೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Mar 09, 2024 | 1:13 PM

ಬೆಂಗಳೂರು, ಮಾರ್ಚ್​ 09: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​​ನನ್ನು (Rowdy Sheeter) ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಕಾಟನ್​ಪೇಟೆ (Cotton pet) ಫ್ಲವರ್​ ಗಾರ್ಡನ್​ನಲ್ಲಿ ನಡೆದಿದೆ. ಶಿವ ಕೊಲೆಯಾದ ರೌಡಿಶೀಟರ್. ರೌಡಿಶೀಟರ್ ಶಿವನನ್ನು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಕಾಟನ್​ಪೇಟೆ ಪೊಲೀಸ್ (Police)​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಆಸ್ತಿ ವಿಚಾರವಾಗಿ ವ್ಯಕ್ತಿಯ ಕೊಲೆ ಶಂಕೆ

ಯಾದಗಿರಿ: ಗುರುಮಠಕಲ್ ತಾಲೂಕಿನ ಚಂಡ್ರಕಿ ಗ್ರಾಮದ ನರಸಿಂಹಲು (48) ಎಂಬುವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಆಸ್ತಿ ವಿಚಾರವಾಗಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಗುರುಮಠಕಲ್ ಪೊಲೀಸರು ಭೇಟಿ ಪರಿಶೀಲಿಸಿದ್ದಾರೆ. ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಮನಗರ: 500 ರೂಪಾಯಿಗೆ ಯುವಕನ ಕೊಲೆ; ಮಲಗೋದಕ್ಕೆ ಜಾಗ ಕೊಟ್ಟು, ಹತ್ಯೆ ಮಾಡಿದವ ಅಂದರ್

ಮೌಲಾನಾ ಅಕ್ಮಲ್ ಕೊಲೆ: KSDMC ಅಧ್ಯಕ್ಷ ವಿರುದ್ಧ ಎಫ್​ಐಆರ್​

ಮೈಸೂರು: ಮೌಲಾನಾ ಅಕ್ಮಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಂಡಿಸಿ ಅಧ್ಯಕ್ಷ ಬಿ.ಕೆ.ಅಲ್ತಾಫ್ ಸೇರಿದಂತೆ ಐವರ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ. ಶುಕ್ರವಾರ ಮಾರ್ಚ್​ 8 ರಂದು ರಾಜೀವ್ ನಗರದ ನಿಮ್ರಾ ಮಸೀದಿ ಬಳಿ ಅಕ್ಮಲ್ ಕೊಲೆ ಆಗಿತ್ತು. ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಯಾಜ್ ಪಾಷಾ(ಪಂಡು)ನ ಸಹೋದರ ಅಕ್ಮಲ್ ಕೊಲೆಯಾದ ವ್ಯಕ್ತಿ.

ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಂತರ ಅಲ್ತಾಫ್ ಮೈಸೂರಿಗೆ ಆಗಮಿಸಿದ್ದರು. ಹೀಗಾಗಿ ಬಷೀರ್ ಎಂಬುವ ಅಲ್ತಾಫ್‌ಗೆ ಸ್ವಾಗತ ಕೋರಿ ಫ್ಲೆಕ್ಸ್ ಅಳವಡಿಸಿದ್ದನು. ಇದನ್ನು ಪ್ರಶ್ನೆ ಮಾಡಿ ಧರ್ಮಗುರು ಮೌಲಾನಾ ಅಕ್ಮಲ್ ಮಹಾನಗರಪಾಲಿಕೆಗೆ ದೂರು ನೀಡಿದ್ದರು.

ಹೀಗಾಗಿ ಬಿ.ಕೆ ಅಲ್ತಾಪ್ ಕಾರ್ಯಕ್ರಮವೊಂದರಲ್ಲಿ ಮೌಲಾನಾ ಅಕ್ಮಲ್ ಅವರ ವಿರುದ್ಧ ವಾಗ್ದಾಳಿ ಮಾಡಿದ್ದರು. ಹೀಗಾಗಿ ಮೌಲಾನಾ ಅಕ್ಮಲ್ ಅವರು ಬಿ.ಕೆ.ಅಲ್ತಾಫ್ ವಿರುದ್ಧ ವಿಡಿಯೋ ಮಾಡಿ ಫೇಸ್​​ಬುಕ್​ನಲ್ಲಿ ಫೋಸ್ಟ್ ​​ಮಾಡಿದ್ದರು. ಮೌಲಾನಾ ಅಕ್ಮಲ್ ವಿಡಿಯೋದಲ್ಲಿ ಸಾಕಷ್ಟು ವಿಚಾರಗಳನ್ನು ಪ್ರಸ್ತಾಪ ಮಾಡಿ ಅವರು ಬಿ.ಕೆ.ಅಲ್ತಾಫ್ ಅವರಿಗೆ ಸವಾಲು ಹಕಿದ್ದರು.  ಇದರಿಂದ ಕೋಪಗೊಂಡು ಕೊಲೆ ಮಾಡಿರುವ ಶಂಕೆ ವ್ಯಕವಾಗಿದೆ. ಅಕ್ಮಲ್ ಎಸ್‌ಡಿಪಿಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಅಕ್ಮಲ್​ ಪತ್ನಿ ನಾಝಿಯಾ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಅಲ್ತಾಫ್ ಸೇರಿದಂತೆ ಐವರ ವಿರುದ್ಧ ದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:23 am, Sat, 9 March 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ