ಬೆಂಗಳೂರು: ಮಹಿಳೆಯರ 13 ಸಾವಿರ ನಗ್ನ ಚಿತ್ರಗಳನ್ನು ಸಂಗ್ರಹಿಸಿಟ್ಟಿದ್ದ ಆರೋಪಿ ಅರೆಸ್ಟ್

ತನ್ನ ಗೆಳತಿ ಸೇರಿದಂತೆ ಹಲವಾರು ಮಹಿಳೆಯರ 13 ಸಾವಿರ ನಗ್ನ ಚಿತ್ರಗಳನ್ನು ಫೋನ್​ನಲ್ಲಿ ಸೇವ್​ ಮಾಡಿಕೊಂಡಿದ್ದ ಆರೋಪಿಯನ್ನು ಸೈಬರ್​ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಈತ ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರ ಉದ್ಯೋಗಿಯಾಗಿದ್ದಾನೆ.

ಬೆಂಗಳೂರು: ಮಹಿಳೆಯರ 13 ಸಾವಿರ ನಗ್ನ ಚಿತ್ರಗಳನ್ನು ಸಂಗ್ರಹಿಸಿಟ್ಟಿದ್ದ ಆರೋಪಿ ಅರೆಸ್ಟ್
ಪ್ರಾತಿನಿಧಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Nov 30, 2023 | 8:07 AM

ಬೆಂಗಳೂರು ನ.30: ತನ್ನ ಗೆಳತಿ, ಇತರ ಮಹಿಳಾ ಸಹೋದ್ಯೋಗಿಗಳು ಸೇರಿದಂತೆ ಹಲವಾರು ಮಹಿಳೆಯರ 13,000 ಕ್ಕೂ ಹೆಚ್ಚು ನಗ್ನ ಫೋಟೋಗಳನ್ನು (Images) ಮೊಬೈಲ್​​ನಲ್ಲಿ ಸೇವ್​ ಮಾಡಿಕೊಂಡಿದ್ದ 25 ವರ್ಷದ ಯುವಕನನ್ನು ಬಂಧಿಸಿದ್ದಾರೆ ಬೆಂಗಳೂರು (Bengaluru) ಸೈಬರ್ ಕ್ರೈಂ (Cyber Crime) ಪೊಲೀಸರು (Police) ಬಂಧಿಸಿದ್ದಾರೆ. ಬೆಳ್ಳಂದೂರಿನ ಬಿಪಿಒ ಕಂಪನಿಯಲ್ಲಿ ಗ್ರಾಹಕ ಸೇವಾ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ ಆದಿತ್ಯ ಸಂತೋಷ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಆರೋಪಿಯು ಕಳೆದ ನಾಲ್ಕು ತಿಂಗಳಿನಿಂದ 22 ವರ್ಷದ ಮಹಿಳಾ ಸಹೋದ್ಯೋಗಿಯೊಂದಿಗೆ ಸಂಬಂಧ ಹೊಂದಿದ್ದನು. ಈ ಮಹಿಳೆಯ ಜೊತೆಗಿನ ಕೆಲವು ಖಾಸಗಿ ಕ್ಷಣಗಳನ್ನು ಆರೋಪಿ ತನ್ನ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದನು. ಈ ಫೋಟೋಗಳನ್ನು ಅಳಿಸಲು ಮಹಿಳೆ ಆರೋಪಿ ಆದಿತ್ಯ ಸಂತೋಷ್​​ನ ಫೋನ್ ತೆಗೆದುಕೊಂಡು ಗ್ಯಾಲರಿ ತೆರೆದಾಗ, ತನ್ನ ಹಾಗೂ ಸಹೋದ್ಯೋಗಿಗಳು ಸೇರಿದಂತೆ ಹಲವಾರು ಮಹಿಳೆಯರ ನಗ್ನ ಫೋಟೋಗಳನ್ನು ಕಂಡು ಆಘಾತಕ್ಕೊಳಗಾಗಿದ್ದಾರೆ.

ಇದನ್ನೂ ಓದಿ: ಪ್ರಿಯತಮನ ಫೋನ್​ನಲ್ಲಿತ್ತು 13 ಸಾವಿರ ನಗ್ನ ಚಿತ್ರ, ಬೆಂಗಳೂರು ಯುವತಿ ಶಾಕ್

ಮಹಿಳೆ ಕೂಡಲೆ ಸಂಸ್ಥೆ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ಬಳಿಕ ನವೆಂಬರ್ 23 ರಂದು ಸಂಸ್ಥೆಯ ವಕೀಲರು ಸೈಬರ್​ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಯಾವ ಉದ್ದೇಶದಿಂದ ಫೋಟೋ ಸಂಗ್ರಹಿಸಿದ್ದ ನಮಗೆ ತಿಳಿದಿಲ್ಲ. ಆದರೆ ಇದು ಮಹಿಳೆಯರಿಗೆ ಆಘಾತವನ್ನುಂಟು ಮಾಡಿದೆ. ವಿಷಯ ತಿಳಿದ ಕೂಡಲೆ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಸಂಸ್ಥೆಯ ಸಿಬ್ಬಂದಿ ತಿಳಿಸಿದ್ದಾರೆ.

ಇದನ್ನೂ ಓದಿ: ಟ್ಯಾಂಗೋ ಆ್ಯಪ್ ಬಳಸುವವರೇ ಎಚ್ಚರ: ಮಹಿಳೆಯ ನಗ್ನ ಫೋಟೋ, ವಿಡಿಯೋ ಇಟ್ಟುಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

ಸಂತೋಷ್ ಕಳೆದ ಐದು ತಿಂಗಳಿನಿಂದ ಇದೇ ಕಚೇರಿಯಲ್ಲಿ ಗ್ರಾಹಕ ಸೇವಾ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾನೆ. ಆತ ತನ್ನ ಸಂತೋಷಕ್ಕಾಗಿ ಫೋಟೋಗಳನ್ನು ಸಂಗ್ರಹಿಸಿ ಎಡಿಟ್​ ಮಾಡುತ್ತಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆದರೆ ಆರೋಪಿ ಈ ಫೋಟೋಗಳನ್ನು ವೈರಲ್​ ಮಾಡಿದ್ದಾನೆಯೇ ಅಥವಾ ಅವುಗಳನ್ನು ಬಳಸಿಕೊಂಡು ಮಹಿಳೆಯರಿಗೆ ಬ್ಲ್ಯಾಕ್‌ಮೇಲ್ ಮಾಡಿದ್ದಾನೆಯೇ ಎಂಬುವುದರ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ಆರೋಪಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 (ವಿದ್ಯುನ್ಮಾನ ರೂಪದಲ್ಲಿ ಅಶ್ಲೀಲ ವಸ್ತುಗಳನ್ನು ಪ್ರಕಟಿಸುವುದು ಅಥವಾ ರವಾನಿಸುವುದು), 67 (ಎ) (ಲೈಂಗಿಕವಾಗಿ ಅಶ್ಲೀಲ ಕೃತ್ಯವನ್ನು ಹೊಂದಿರುವ ವಸ್ತುಗಳನ್ನು ಪ್ರಕಟಿಸುವುದು ಅಥವಾ ರವಾನಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 8:03 am, Thu, 30 November 23

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ