ಬೆಂಗಳೂರು ನ.30: ತನ್ನ ಗೆಳತಿ, ಇತರ ಮಹಿಳಾ ಸಹೋದ್ಯೋಗಿಗಳು ಸೇರಿದಂತೆ ಹಲವಾರು ಮಹಿಳೆಯರ 13,000 ಕ್ಕೂ ಹೆಚ್ಚು ನಗ್ನ ಫೋಟೋಗಳನ್ನು (Images) ಮೊಬೈಲ್ನಲ್ಲಿ ಸೇವ್ ಮಾಡಿಕೊಂಡಿದ್ದ 25 ವರ್ಷದ ಯುವಕನನ್ನು ಬಂಧಿಸಿದ್ದಾರೆ ಬೆಂಗಳೂರು (Bengaluru) ಸೈಬರ್ ಕ್ರೈಂ (Cyber Crime) ಪೊಲೀಸರು (Police) ಬಂಧಿಸಿದ್ದಾರೆ. ಬೆಳ್ಳಂದೂರಿನ ಬಿಪಿಒ ಕಂಪನಿಯಲ್ಲಿ ಗ್ರಾಹಕ ಸೇವಾ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ ಆದಿತ್ಯ ಸಂತೋಷ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಆರೋಪಿಯು ಕಳೆದ ನಾಲ್ಕು ತಿಂಗಳಿನಿಂದ 22 ವರ್ಷದ ಮಹಿಳಾ ಸಹೋದ್ಯೋಗಿಯೊಂದಿಗೆ ಸಂಬಂಧ ಹೊಂದಿದ್ದನು. ಈ ಮಹಿಳೆಯ ಜೊತೆಗಿನ ಕೆಲವು ಖಾಸಗಿ ಕ್ಷಣಗಳನ್ನು ಆರೋಪಿ ತನ್ನ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದನು. ಈ ಫೋಟೋಗಳನ್ನು ಅಳಿಸಲು ಮಹಿಳೆ ಆರೋಪಿ ಆದಿತ್ಯ ಸಂತೋಷ್ನ ಫೋನ್ ತೆಗೆದುಕೊಂಡು ಗ್ಯಾಲರಿ ತೆರೆದಾಗ, ತನ್ನ ಹಾಗೂ ಸಹೋದ್ಯೋಗಿಗಳು ಸೇರಿದಂತೆ ಹಲವಾರು ಮಹಿಳೆಯರ ನಗ್ನ ಫೋಟೋಗಳನ್ನು ಕಂಡು ಆಘಾತಕ್ಕೊಳಗಾಗಿದ್ದಾರೆ.
ಇದನ್ನೂ ಓದಿ: ಪ್ರಿಯತಮನ ಫೋನ್ನಲ್ಲಿತ್ತು 13 ಸಾವಿರ ನಗ್ನ ಚಿತ್ರ, ಬೆಂಗಳೂರು ಯುವತಿ ಶಾಕ್
ಮಹಿಳೆ ಕೂಡಲೆ ಸಂಸ್ಥೆ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ಬಳಿಕ ನವೆಂಬರ್ 23 ರಂದು ಸಂಸ್ಥೆಯ ವಕೀಲರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಯಾವ ಉದ್ದೇಶದಿಂದ ಫೋಟೋ ಸಂಗ್ರಹಿಸಿದ್ದ ನಮಗೆ ತಿಳಿದಿಲ್ಲ. ಆದರೆ ಇದು ಮಹಿಳೆಯರಿಗೆ ಆಘಾತವನ್ನುಂಟು ಮಾಡಿದೆ. ವಿಷಯ ತಿಳಿದ ಕೂಡಲೆ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಸಂಸ್ಥೆಯ ಸಿಬ್ಬಂದಿ ತಿಳಿಸಿದ್ದಾರೆ.
ಇದನ್ನೂ ಓದಿ: ಟ್ಯಾಂಗೋ ಆ್ಯಪ್ ಬಳಸುವವರೇ ಎಚ್ಚರ: ಮಹಿಳೆಯ ನಗ್ನ ಫೋಟೋ, ವಿಡಿಯೋ ಇಟ್ಟುಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
ಸಂತೋಷ್ ಕಳೆದ ಐದು ತಿಂಗಳಿನಿಂದ ಇದೇ ಕಚೇರಿಯಲ್ಲಿ ಗ್ರಾಹಕ ಸೇವಾ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾನೆ. ಆತ ತನ್ನ ಸಂತೋಷಕ್ಕಾಗಿ ಫೋಟೋಗಳನ್ನು ಸಂಗ್ರಹಿಸಿ ಎಡಿಟ್ ಮಾಡುತ್ತಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆದರೆ ಆರೋಪಿ ಈ ಫೋಟೋಗಳನ್ನು ವೈರಲ್ ಮಾಡಿದ್ದಾನೆಯೇ ಅಥವಾ ಅವುಗಳನ್ನು ಬಳಸಿಕೊಂಡು ಮಹಿಳೆಯರಿಗೆ ಬ್ಲ್ಯಾಕ್‌ಮೇಲ್ ಮಾಡಿದ್ದಾನೆಯೇ ಎಂಬುವುದರ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರು ಆರೋಪಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 (ವಿದ್ಯುನ್ಮಾನ ರೂಪದಲ್ಲಿ ಅಶ್ಲೀಲ ವಸ್ತುಗಳನ್ನು ಪ್ರಕಟಿಸುವುದು ಅಥವಾ ರವಾನಿಸುವುದು), 67 (ಎ) (ಲೈಂಗಿಕವಾಗಿ ಅಶ್ಲೀಲ ಕೃತ್ಯವನ್ನು ಹೊಂದಿರುವ ವಸ್ತುಗಳನ್ನು ಪ್ರಕಟಿಸುವುದು ಅಥವಾ ರವಾನಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:03 am, Thu, 30 November 23