AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಷೇರು ಮಾರುಕಟ್ಟೆ ಹೂಡಿಕೆ: ವಾಟ್ಸ್​ಆ್ಯಪ್, ಟೆಲಿಗ್ರಾಂ ಗ್ರೂಪ್​​ಗಳ ಮೂಲಕ ಭಾರೀ ವಂಚನೆ, ಇರಲಿ ಎಚ್ಚರ

Cyber Crime: ಬೆಂಗಳೂರಿನಲ್ಲಿ ಸೈಬರ್ ವಂಚನೆಯ ಮತ್ತೊಂದು ಕರಾಳ ಮುಖ ಅನಾವರಣಗೊಂಡಿದೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಕೋಟಿಗಟ್ಟಲೆ ಲಾಭ ಮಾಡಿಕೊಡುತ್ತೇವೆ ಎಂದು ವಾಟ್ಸ್​​ಆ್ಯಪ್, ಟೆಲಿಗ್ರಾಂ ಗ್ರೂಪ್​ಗಳ ಮೂಲಕ ವಂಚನೆ ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಎಚ್ಚರಿಕೆಯಿಂದಿರುವಂತೆ ಬೆಂಗಳೂರು ಈಶಾನ್ಯ ಸೈಬರ್ ಪೊಲೀಸರು ಸಲಹೆ ನೀಡಿದ್ದಾರೆ.

ಷೇರು ಮಾರುಕಟ್ಟೆ ಹೂಡಿಕೆ: ವಾಟ್ಸ್​ಆ್ಯಪ್, ಟೆಲಿಗ್ರಾಂ ಗ್ರೂಪ್​​ಗಳ ಮೂಲಕ ಭಾರೀ ವಂಚನೆ, ಇರಲಿ ಎಚ್ಚರ
ಸಾಂದರ್ಭಿಕ ಚಿತ್ರ
ಜಗದೀಶ ಬಿ.
| Edited By: |

Updated on: Feb 06, 2024 | 8:08 AM

Share

ಬೆಂಗಳೂರು, ಫೆಬ್ರವರಿ 6: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ (Stock Market Investment) ಮಾಡಿ ಹೆಚ್ಚು ಗಳಿಕೆ ಮಾಡಬೇಕೆಂಬ ಆಸೆಯಲ್ಲಿ ವಾಟ್ಸ್​​ಆ್ಯಪ್, ಟೆಲಿಗ್ರಾಂ ಗ್ರೂಪ್​ಗಳ ಮೂಲಕ ಬರುವ ಸಂದೇಶಗಳಿಗೆ ಮಾರುಹೋಗಿ ಹಣ ಕಳೆದುಕೊಳ್ಳುವವರ ಸಂಖ್ಯೆ ಬೆಂಗಳೂರಿನಲ್ಲಿ (Bengaluru) ಹೆಚ್ಚಾಗಿರುವುದು ತಿಳಿದುಬಂದಿದೆ. ಇಂಥ ಪ್ರಕರಣಗಳಿಗೆ ಸಂಬಂಧಿಸಿ ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಪೊಲೀಸರಿಗೆ (Cyber Crime Police) ಬರುವ ದೂರುಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಎನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಪೊಲೀಸರು ಮನವಿ ಮಾಡಿದ್ದಾರೆ.

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಉತ್ತಮ ರಿಟರ್ನ್ ನೀಡುವ ಭರವಸೆಯೊಂದಿಗೆ ವಾಟ್ಸ್​​ಆ್ಯಪ್, ಟೆಲಿಗ್ರಾಂ ಗ್ರೂಪ್​ಗಳ ಮೂಲಕ ಸೈಬರ್ ವಂಚಕರು ಈಗಾಗಲೇ ಹಲವಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದಾರೆ. ಹೀಗಾಗಿ ಅಂಥ ಗ್ರೂಪ್​ಗಳಲ್ಲಿದ್ದರೆ ತಕ್ಷಣವೇ ಎಕ್ಸಿಟ್ ಆಗುವಂತೆ ಪೊಲೀಸರು ಸೂಚಿಸಿದ್ದಾರೆ.

ವಂಚಕರು ಮರುಳು ಮಾಡುವುದು ಹೇಗೆ?

ವಂಚಕರು ವಾಟ್ಸ್​​ಆ್ಯಪ್, ಟೆಲಿಗ್ರಾಂ ಗ್ರೂಪಲ್ಲಿ ಟ್ರ್ಯಾಪ್ ಮಾಡಿ ವಂಚನೆ ಮಾಡುವ ವಿಧಾನವೇ ರೋಚಕವಾಗಿದೆ. ಮೊದಲು ವಾಟ್ಸ್​​ಆ್ಯಪ್, ಟೆಲಿಗ್ರಾಂ ಗ್ರೂಪ್​ಗಳನ್ನ ಕ್ರಿಯೇಟ್ ಮಾಡುವ ಖದೀಮರು, ಷೇರುಮಾರುಕಟ್ಟೆಯಲ್ಲಿ ಕೋಟಿಗಟ್ಟಲೆ ಸಂಪಾದನೆ ಮಾಡಿರುವ ಬಗ್ಗೆ ಸುಳ್ಳು ಸಂದೇಶಗಳನ್ನು ಕಳುಹಿಸುತ್ತಾರೆ. ಆ ಟ್ರೇಡಿಂಗ್ ಸಲಹಾ ಗ್ರೂಪ್​ಗಳಲ್ಲಿರುವ ಬಹುತೇಕರು ವಂಚಕರೇ ಆಗಿರುತ್ತಾರೆ. ಕೋಟಿಗಟ್ಟಲೇ ಹಣ ಗಳಿಸಿದ ಮಸೇಜ್​​ಗಳಿಗೆ ಅಮಾಯಕರು ಮಾರುಹೋಗುತ್ತಾರೆ.

ಇಂಥ ಗ್ರೂಪೊಂದರಲ್ಲಿ ಬಂದ ಸಲಹೆ ಕೇಳಿ ಹಣ ಕಳುಹಿಸಿದ ಟೆಕ್ಕಿ ಅಯ್ಯಪ್ಪ ಎಂಬವರು 90 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ತಾವು ಬೇಗನೆ ಹೆಚ್ಚು ಹಣ ಸಂಪಾದಿಸಬೇಕು ಹೇಗೆ ಎಂದು ಇಂಥ ಗ್ರೂಪ್​ಗಳಲ್ಲಿ ಕೇಳಿದವರು ಬೇಗನೆ ಅವರ ಬಲೆಗೆ ಬೀಳುತ್ತಿದ್ದಾರೆ.

ಇದನ್ನೂ ಓದಿ: ಸಾಲಗಾರರ ಕಿರುಕುಳಕ್ಕೆ ಬೇಸತ್ತ ದಂಪತಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣು

ಬೆಂಗಳೂರಿನ ‘ಟ್ರೇಡಿಂಗ್ ಸ್ಟಾಕ್ ಮಾರ್ಕೆಟ್’ ಹೆಸರಿನಲ್ಲಿ ಅಯ್ಯಪ್ಪ ಅವರನ್ನು ವಂಚಿಸಲಾಗಿದೆ. ಡಿ ಮ್ಯಾಟ್ ಅಕೌಂಟ್ ಇಲ್ಲದೇ ಷೇರು ಮಾರುಕಟ್ಟೆಯಲ್ಲಿ ಷೇರು ಹೋಲ್ಡರ್ ಆಗಲು ಸಾಧ್ಯವಿಲ್ಲ ಎಂಬುದು ಅಯ್ಯಪ್ಪ ಅವರಿಗೆ ಮೋಸಹೋದ ನಂತರ ಅರಿವಾಗಿದೆ. ಬಳಿಕ ಅವರು, ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.

ವಂಚನೆಗೀಡಾದವರಲ್ಲಿ ವಿದ್ಯಾವಂತರೇ ಹೆಚ್ಚು!

ಈಶಾನ್ಯ ಸೈಬರ್ ಪೊಲೀಸ್ ಠಾಣೆಯಲ್ಲಿ ಈವರೆಗೆ ಮೂರು ದೂರುಗಳು ದಾಖಲಾಗಿವೆ. ವಿದ್ಯಾವಂತರೇ ಹೆಚ್ಚಾಗಿ ಇಂಥ ಪ್ರಕರಣಗಳಲ್ಲಿ ವಂಚನೆಗೀಡಾಗುತ್ತಿದ್ದಾರೆ. ಸದ್ಯ ದೂರು ದಾಖಲಾಗುತ್ತಿದ್ದಂತೆಯೇ ‘ಟ್ರೇಡಿಂಗ್ ಸ್ಟಾಕ್ ಮಾರ್ಕೆಟ್’ ವೆಬ್​​​​ಸೈಟ್ ಅನ್ನು ಈಶಾನ್ಯ ವಿಭಾಗದ ಸೈಬರ್ ಪೊಲೀಸರು ಬ್ಲಾಕ್ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ