Bengaluru: ಹಾಡಹಗಲೇ ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಮತ್ತು ಸಿಇಒ ಕೊಲೆ ಮಾಡಿದ ಟಿಕ್ ಟಾಕ್ ಸ್ಟಾರ್ ಜೋಕರ್

ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಮತ್ತು ಸಿಇಒ ಅವರನ್ನು ಕಂಪನಿಯ ಮಾಜಿ ಉದ್ಯೋಗಿಯೂ ಆಗಿರುವ ಟಿಕ್ ಟಾಕ್ ಸ್ಟಾರ್ ಜೋಕರ್ ಫೆಲಿಕ್ಸ್ ಕೊಲೆ ಮಾಡಿದ ಘಟನೆ ಬೆಂಗಳೂರು ನಗರದ ಅಮೃತಹಳ್ಳಿಯಲ್ಲಿ ನಡೆದಿದೆ.

Bengaluru: ಹಾಡಹಗಲೇ ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಮತ್ತು ಸಿಇಒ ಕೊಲೆ ಮಾಡಿದ ಟಿಕ್ ಟಾಕ್ ಸ್ಟಾರ್ ಜೋಕರ್
ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಮತ್ತು ಸಿಇಒ ಕೊಲೆ ಮಾಡಿದ ಟಿಕ್ ಟಾಕ್ ಸ್ಟಾರ್ ಜೋಕರ್ ಫೆಲಿಕ್ಸ್
Follow us
Jagadisha B
| Updated By: Rakesh Nayak Manchi

Updated on:Jul 11, 2023 | 7:59 PM

ಬೆಂಗಳೂರು: ಏರೋನಿಕ್ಸ್ ಇಂಟರ್ನೆಟ್ (Aeronics Internet) ಕಂಪನಿ ಎಂಡಿ ಫಣಿಂದ್ರ ಸುಬ್ರಹ್ಮಣ್ಯ ಮತ್ತು ಸಿಇಒ ವಿನುಕುಮಾರ್​ ಅವರನ್ನು ಕಂಪನಿಯ ಮಾಜಿ ಉದ್ಯೋಗಿಯೂ ಆಗಿರುವ ಟಿಕ್ ಟಾಕ್ ಸ್ಟಾರ್ ಜೋಕರ್ ಫೆಲಿಕ್ಸ್ ಎಂಬಾತ  ಕೊಲೆ (Double Murder) ಮಾಡಿದ ಘಟನೆ ನಗರದ ಅಮೃತಹಳ್ಳಿಯಲ್ಲಿ ಇಂದು ನಡೆದಿದೆ. ​

ಏರೋನಿಕ್ಸ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಫೆಲಿಕ್ಸ್, ಕಂಪನಿಯಿಂದ ಹೊರಬಂದು ಸ್ವಂತ ಕಂಪನಿ ಸ್ಥಾಪಿಸಿದ್ದ. ಈ ಉದ್ಯಮಕ್ಕೆ ಪಣೀಂದ್ರ ಎದುರಾಳಿಯಾಗಿದ್ದನಂತೆ. ಇದೇ ಕಾರಣಕ್ಕೆ ಫೆಲಿಕ್ಸ್, ಎದುರಾಳಿ ಫಣೀಂದ್ರರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾನೆ. ಅದರಂತೆ ಪಂಪಾ ಬಡವಾಣೆಯಲ್ಲಿರುವ ಏರೋನಿಕ್ಸ್ ಕಂಪನಿಗೆ ಇಂದು ಸಂಜೆ 4 ಗಂಟೆ ಸುಮಾರಿಗೆ ಆಗಮಿಸಿ ಪಣೀಂದ್ರ ಹಾಗೂ ವಿನುಕುಮಾರ್ ಮೇಲೆ ತಲ್ವಾರ್​ನಿಂದ ಹಲ್ಲೆ ನಡೆಸಿ ಚಾಕುವಿನಿಂದ ಚುಚ್ಚಿ ಪರಾರಿಯಾಗಿದ್ದಾನೆ.

ಇದನ್ನೂ ಓದಿ: Yuva Brigade; ವೇಣುಗೋಪಾಲ್ ಕೊಲೆಯಲ್ಲಿ ಸಚಿವ ಮಹಾದೇವಪ್ಪ ಪುತ್ರ ಸುನಿಲ್ ಬೋಸ್ ಸಹಚರರು ಭಾಗಿಯಾಗಿದ್ದಾರೆ: ಚಕ್ರವರ್ತಿ ಸೂಲಿಬೆಲೆ

ತಲ್ವಾರ್ ಮತ್ತು ಚಾಕುವಿನ ಇರಿತದಿಂದ ಗಂಭೀರವಾಗಿ ಗಾಯಗೊಂಡ ಫಣೀಂದ್ರ ಮತ್ತು ವಿನುಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಮೃತಹಳ್ಳಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಫಣಿಂದ್ರ, ವಿನುಕುಮಾರ್ ಮೃತದೇಹಗಳನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಬೇರೆ ಬೇರೆ ಮಹಡಿಯಲ್ಲಿ ಇಬ್ಬರ ಕೊಲೆ

ಪ್ರಕರಣದಲ್ಲಿ ಫೆಲಿಕ್ಸ್ ಸೇರಿದಂತೆ ಮೂವರು ಆರೋಪಿಗಳು ಕಂಪನಿಗೆ ನುಗ್ಗಿ  ಮೊದಲ‌‌ ಮಹಡಿಯಲ್ಲಿ ಒಬ್ಬರನ್ನ ಕೊಲೆ ಮಾಡಿ, ಎರಡನೇ ಮಹಡಿಯಲ್ಲಿ ಮತ್ತೊಬ್ಬರನ್ನು ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.

ಈ ಬಗ್ಗೆ ಮಾತನಾಡಿದ ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮೀ ಪ್ರಸಾದ್, ಮೂರು ಜನರು ಭಾಗಿಯಾಗಿ ಕೊಲೆ ಮಾಡಿದ್ದಾರೆ. ಒಬ್ಬ ಆರೋಪಿಯ ಬಗ್ಗೆ ಈಗಾಗಲೇ ಸುಳಿವು ಸಿಕ್ಕಿದೆ. ಕೊಲೆಗೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಎಲ್ಲಾ ಆಯಾಮದಲ್ಲೂ ತನಿಖೆ ಆಗುತ್ತಿದೆ. ಈಗಾಗಲೇ ಆರೋಪಿ ಬಗ್ಗೆ ಮಾಹಿತಿ ಇದೆ. ಈ ಹಂತದಲ್ಲಿ ಏನೂ ಹೇಳಲು ಸಾಧ್ಯವಿಲ್ಲ ಎಂದರು.

ಮಾತುಕತೆ ಬಳಿಕ ಏಕಾಏಕಿ ಅಟ್ಯಾಕ್

ಎಂಡಿ ಮತ್ತು ಸಿಇಒ ಅವರನ್ನು ಕೊಲೆ ಮಾಡುವ ಮುನ್ನ ಚೇಂಬರಿಗೆ ಆಗಮಿಸಿದ ಮೂವರು ಮಾತುಕತೆ ನಡೆಸಿದ್ದಾರೆ. ಸುಮಾರು ಅರ್ಧಗಂಟೆಗಳ ಕಾಲ ಮಾತನಾಡಿದ್ದಾರೆ. ಈ ವೇಳೆ ಕಂಪನಿಯಲ್ಲಿ 10-12 ಜನರು ಕೆಲಸ ಮಾಡುತ್ತಿದ್ದರು. ಮಾತುಕತೆ ಬಳಿಕ ಆರೋಪಿಗಳು ಏಕಾಏಕಿಯಾಗಿ ದಾಳಿ ನಡೆಸಿದ್ದು, ಎಂಡಿ ಮತ್ತು ಸಿಇಒ ತಪ್ಪಿಸಿಕೊಳ್ಳು ಪ್ರಯತ್ನಿಸಿದ್ದು, ಕೆಲಸ ಮಾಡುತ್ತಿದ್ದವರು ರಕ್ಷಣೆ ಮಾಡಲು ದಾವಿಸಿದ್ದಾರೆ. ಈ ವೇಳೆ ಇವರಿಗೆ ತಲ್ವಾರ್ ತೋರಿಸಿ ಬೆದರಿಕೆ ಹಾಕಿದ್ದದು, ನಂತರ ಇಬ್ಬರನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ‌‌ ಮೊದಲು ಕೊಲೆಯಾದವರು ಹಾಗೂ ಮೊದಲ ಆರೋಪಿ ಬನ್ನೇರುಘಟ್ಟ ರಸ್ತೆಯ ಖಾಸಗಿ ನೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:06 pm, Tue, 11 July 23

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್