ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ; ಫ್ಲೈಓವರ್​ ಮೇಲಿಂದ ಬಿದ್ದ ಇಬ್ಬರ ದೇಹ ಛಿದ್ರ

ಕಾರು ಡಿಕ್ಕಿಯಾದ ರಭಸಕ್ಕೆ ಇಬ್ಬರು ಯುವತಿಯರ ದೇಹಗಳು ಪ್ಲೈ ಓವರ್ ಮೇಲಿಂದ ಕೆಳಗೆ ಬಿದ್ದು ಛಿದ್ರಗೊಂಡಿವೆ.

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ; ಫ್ಲೈಓವರ್​ ಮೇಲಿಂದ ಬಿದ್ದ ಇಬ್ಬರ ದೇಹ ಛಿದ್ರ
ಸಾಂಕೇತಿಕ ಚಿತ್ರ

ಆನೇಕಲ್: ಬೊಮ್ಮನಹಳ್ಳಿ -ಎಲೆಕ್ಟ್ರಾನಿಕ್ ಸಿಟಿ ಮಾರ್ಗದ ಫ್ಲೈಓವರ್ ಮೇಲೆ ಭೀಕರ ಅಪಘಾತ ನಡೆದಿದ್ದು, ಫ್ಲೈಓವರ್ ಮೇಲಿಂದ ಬಿದ್ದು ಇಬ್ಬರು ಬೈಕ್ ಸವಾರರ ದೇಹ ಛಿದ್ರಗೊಂಡು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಫ್ಲೈಓವರ್​ನಲ್ಲಿ ಓವರ್ಟೇಕ್ ಮಾಡಲು ಹೋಗಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂ ಆಗಿತ್ತು. ಕಾರು ಡಿಕ್ಕಿಯಾದ ರಭಸಕ್ಕೆ ಇಬ್ಬರು ಬೈಕ್ ಸವಾರರ ದೇಹಗಳು ಪ್ಲೈ ಓವರ್ ಮೇಲಿಂದ ಕೆಳಗೆ ಬಿದ್ದು ಛಿದ್ರಗೊಂಡಿವೆ. ಕಾರಿನ ವೇಗಕ್ಕೆ ಬೈಕ್ ಸವಾರರು ಬಲಿಯಾಗಿದ್ದಾರೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೋಲಾರ: ದೆಹಲಿ ಪೊಲೀಸರಿಂದ ವ್ಯಕ್ತಿ ವಶಕ್ಕೆ
ದೆಹಲಿಯಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ವಸೀವುಲ್ಲಾ (34) ಎಂಬ ವ್ಯಕ್ತಿಯನ್ನು ದೆಹಲಿಯ ಲಕ್ಷ್ಮೀನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಗಾರಪೇಟೆ ಪೊಲೀಸರ ಸಹಕಾರದೊಂದಿಗೆ ದೆಹಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಈವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಕೆಜಿಎಫ್ ಎಸ್ಪಿ ಇಲಕ್ಕಿಯಾ ಕರುಣಾಗರನ್ ತಿಳಿಸಿದ್ದಾರೆ.

ಮನೆಯಲ್ಲೇ ಗೃಹಿಣಿಯರಿಂದ ವೇಶ್ಯಾವಾಟಿಕೆ
ನೆಲಮಂಗಲ: ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಣ ಸಂಪಾದನೆಯ ಆಸೆ ಹುಟ್ಟಿಸಿ ಗೃಹಿಣಿಯರಿಂದ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹೆಸರಘಟ್ಟ ರಸ್ತೆ ಕಿರ್ಲೋಸ್ಕರ್ ಲೇಔಟ್​ನಲ್ಲಿ ಘಟನೆ ನಡೆದಿದ್ದು, ಮನೆ ಮಾಲೀಕ ಸೋಮಶೇಖರ್ ಸೇರಿದಂತೆ ನಾಲ್ವರನ್ನು ಪೊಲೀಸರು ದಾಳಿಯ ವೇಳೆ ವಶಕ್ಕೆ ಪಡೆದುಕೊಂಡಿದ್ದಾರೆ. ಜತೆಗೆ ಓರ್ವ ಗೃಹಿಣಿಯನ್ನು ರಕ್ಷಿಸಿದ್ದು, 5 ಸಾವಿರ ನಗದು, 4 ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ:  

ಅಪರಾಧ ಸುದ್ದಿ: ಅತ್ತೆ ಮಗಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ

ಅಪರಾಧ ಸುದ್ದಿಗಳು: ಬೆಂಗಳೂರಿನಲ್ಲಿ ಹೆಚ್ಚಿದ ಪೆಟ್ರೋಲ್ ಕಳ್ಳರ ಹಾವಳಿ

(Bengaluru electronic city flyover A terrible accident two young women fell off the flyover)

Click on your DTH Provider to Add TV9 Kannada