AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸಾಂಬಾರ್​ ಮಾಡುವ ವಿಚಾರಕ್ಕೆ ಸ್ನೇಹಿತರ ನಡುವೆ ಕಲಹ, ಕೊಲೆಯಲ್ಲಿ ಅಂತ್ಯ

ಸಾಂಬಾರ್ ಮಾಡುವ ವಿಷಯದಲ್ಲಿ ಉಂಟಾದ ಜಗಳದಿಂದಾಗಿ ನೇಪಾಳ ಮೂಲದ ಬಹದ್ದೂರ್ ಎಂಬಾತನ ಕೊಲೆಯಾಗಿದೆ. ಆತನ ಸ್ನೇಹಿತ ಮಹೇಂದ್ರ ಕೊಲೆ ಆರೋಪಿಯಾಗಿದ್ದಾನೆ. ರವಿವಾರ ರಾತ್ರಿ ಸಂಭವಿಸಿದ ಈ ಘಟನೆಯಲ್ಲಿ, ಸಣ್ಣ ವಿವಾದವು ಮಾರಕ ಹಲ್ಲೆಯಾಗಿ ಬದಲಾಯಿತು. ಬಹದ್ದೂರ್ ಸೆಕ್ಯೂರಿಟಿ ಗಾರ್ಡ್​ ಕೆಲಸ ಮಾಡುತ್ತಿದ್ದನು ಮತ್ತು ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದನು. ತಲಘಟ್ಟಪುರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು: ಸಾಂಬಾರ್​ ಮಾಡುವ ವಿಚಾರಕ್ಕೆ ಸ್ನೇಹಿತರ ನಡುವೆ ಕಲಹ, ಕೊಲೆಯಲ್ಲಿ ಅಂತ್ಯ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jun 23, 2025 | 2:58 PM

Share

ಬೆಂಗಳೂರು, ಜೂನ್​ 23: ಸಾಂಬಾರ್​ ಮಾಡುವ ವಿಚಾರಕ್ಕೆ ಸ್ನೇಹಿತರ (Friends) ನಡುವೆ ಗಲಾಟೆಯಾಗಿ, ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ (Bengaluru) ತಲಘಟ್ಟಪುರದಲ್ಲಿ ರವಿವಾರ ತಡರಾತ್ರಿ ಘಟನೆ ನಡೆದಿದೆ. ನೇಪಾಳ ಮೂಲದ ಬಹದ್ದೂರ್ ಕೊಲೆಯಾದ ವ್ಯಕ್ತಿ. ಮಹೇಂದ್ರ ಕೊಲೆ ಮಾಡಿದ ಆರೋಪಿ. ಬಹದ್ದೂರ್ ಮತ್ತು ಮಹೇಂದ್ರ ನಡುವೆ ರವಿವಾರ (ಜೂ.22) ರಾತ್ರಿ ಸಾಂಬಾರ್ ಮಾಡುವ ವಿಚಾರಕ್ಕೆ ರೂಂನಲ್ಲಿ ಗಲಾಟೆ ಶುರುವಾಗಿದೆ. ಗಲಾಟೆ ತಾರಕಕ್ಕೆ ಏರಿದ್ದು ಬಹದ್ದೂರ್​ ಮೇಲೆ ಮಹೇಂದ್ರ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಕೊಲೆಯಾದ ಬಹದ್ದೂರ್ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದನು. ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದನು. ಘಟನಾ ಸ್ಥಳಕ್ಕೆ ತಲಘಟ್ಟಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮೈಕ್​ ಸೆಟ್​ಬಾಕ್ಸ್​ನಿಂದ ಹೊಡೆದು ಭಿಕ್ಷುಕನ ಕೊಲೆ

ಹುಬ್ಬಳ್ಳಿ: ಮೈಕ್​ ಸೆಟ್​ಬಾಕ್ಸ್​ನಿಂದ ಹೊಡೆದು ಭಿಕ್ಷುಕನನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಬಿಹಾರ ಮೂಲದ ವಿಕಲಚೇತನ ಮಿತೇಶ್​ (36) ಕೊಲೆಯಾದ ಭಿಕ್ಷುಕ. ರಾಜೇಶ್ ಕೊಲೆ ಮಾಡಿದ ಆರೋಪಿ. ಕೊಲೆ ಆರೋಪಿ ರಾಜೇಶ್ ಕುಮಾರ್ ಸಹ ಬಿಹಾರ ಮೂಲದವನು. ಮಿತೇಶ್ ಮತ್ತು ರಾಜೇಶ್ ಒಂದೇ ಮನೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಇದನ್ನೂ ಓದಿ: ಪ್ರೀತಿಸಿದ ಯುವತಿ‌‌ಯಿಂದ ಕಿರುಕುಳ: ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆಗೆ ಶರಣು

ಇದನ್ನೂ ಓದಿ
Image
ಲೈಂಗಿಕ ದೌರ್ಜನ್ಯ ವಿರೋಧಿಸಿದ್ದಕ್ಕೆ 5 ವರ್ಷದ ಬಾಲಕನ ಹತ್ಯೆ
Image
ಹಣಕಾಸಿನ ವಿಚಾರಕ್ಕೆ ಗಲಾಟೆ: ಅಂಗನವಾಡಿಯಲ್ಲಿ ಚಾಕು ಇರಿದು ಯುವಕನ ಹತ್ಯೆ
Image
ರಜೆ ಮಜಾ ಮಾಡಲು ಹೋಗಿ ಸೈಬರ್ ವಂಚಕರ ಬಲೆಗೆ ಬಿದ್ದ
Image
ಮಹಿಳೆಯ ಪ್ರಾಣ ತೆಗೆದ ಮೊಬೈಲ್: ಪತ್ನಿಯನ್ನೇ ಕೊಂದ ಪತಿ, ಮಕ್ಕಳು ಅನಾಥ

ಇಬ್ಬರೂ ವಿಶೇಷಚೇತನರಾಗಿದ್ದು ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದರು. ರವಿವಾರ (ಜೂ.22) ಮಿತೇಶ್ ಮದ್ಯ ಸೇವಿಸಿ ಬಂದು ರಾಜೇಶ್ ತಾಯಿಗೆ ಬೈದಿದ್ದನು. ಇದರಿಂದ ಕೋಪಗೊಂಡ ರಾಜೇಶ್ ಮೈಕ್​ ಸೆಟ್​ಅಪ್ ​ಬಾಕ್ಸ್​ನಿಂದ​ ಮಿತೇಶ್ ತಲೆಗೆ ಹೊಡೆದಿದ್ದಾನೆ. ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮಿತೇಶ್ ಮೃತಪಟ್ಟಿದ್ದಾನೆ. ಆರೋಪಿ ರಾಜೇಶ್ ಕುಮಾರ್​​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗೊದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು