ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಕೇಸ್: ಆರೋಪಪಟ್ಟಿ ಸಲ್ಲಿಕೆ, 8 ನಿಮಿಷದಲ್ಲಿ ನಡೆದಿತ್ತು ಹತ್ಯೆ
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಬರೋಬ್ಬರಿ 600 ಪುಟಗಳ ಚಾರ್ಜ್ಶೀಟ್ ಅನ್ನು ಕೋರ್ಟ್ಗೆ ಸಲ್ಲಿಸಿದ್ದು, ಕೊಲೆಗೆ ಸಂಬಂಧಿಸಿದಂತೆ ಮಹತ್ವದ ಅಂಶಗಳನ್ನು ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ. ಹಾಗಾದ್ರೆ, ಚಾರ್ಜ್ಶೀಟ್ನಲ್ಲಿ ಏನೆಲ್ಲಾ ಉಲ್ಲೇಖಿಸಿದ್ದಾರೆ ಎನ್ನುವ ವಿವರ ಇಲ್ಲಿದೆ.
ಬೆಂಗಳೂರು, (ಫೆಬ್ರವರಿ.4): ಮೂರು ತಿಂಗಳ ಹಿಂದೆ ನಡೆದಿದ್ದ ಬೆಂಗಳೂರು ನಗರ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯಪುರ ಪೊಲೀಸರು ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ನ್ಯಾಯಾಲಯಕ್ಕೆ ಆರೋಪಪಟ್ಟಿಯನ್ನು ಸಲ್ಲಿಸಿದ್ದಾರೆ. ಹಂತಕ ಕಿರಣ್ ವಿರುದ್ಧ ಸಾಕ್ಷ್ಯಾಧಾರಗಳ ಮೂಲಕ ಒಟ್ಟು 600 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಚಾರ್ಜ್ ಶೀಟ್ ನಲ್ಲಿ ಕೊಲೆಗೆ ಪೂರಕವಾದ ಸಾಕ್ಷಿ ಬಗ್ಗೆ ಮಾಹಿತಿ ನೀಡಲಾಗಿದೆ.
ಆರೋಪ ಪಟ್ಟಿಯಲ್ಲಿ ಏನಿದೆ?
ಹಂತಕ ಕಿರಣ್ ಕೆಲಸದಿಂದ ವಜಾಗೊಳಿಸಿದ್ದಕ್ಕೆ ಕೊಲೆಗೆ ಸಂಚು ರೂಪಿಸಿದ್ದ. ನ 3ರಂದು ಹತ್ಯೆಗೆ ಸಂಚು ರೂಪಿಸಿದ್ದ ಮತ್ತೆ ನವೆಂಬರ್ 4ರಂದು ಕೊಲೆಗೆ ಸಂಚು ರೂಪಿಸಿ ಮನೆ ಮೇಲೆ ಅವಿತು ಕುಳಿತಿದ್ದ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಹಾಗೇ ಸಾಂಧರ್ಬಿಕ ಸಾಕ್ಷಿಗಳ ಕಲೆ, ಪೋನ್ ಲೊಕೇಷನ್ ಎವಿಡೆನ್ಸ್, ಸಿಸಿಟಿವಿ ಎವಿಡೆನ್ಸ್ ದಾಖಲು ಮಾಡಲಾಗಿದೆ.
ಹಂತಕ ಕಿರಣ್ ಅಧಿಕಾರಿ ಪ್ರತಿಮಾರನ್ನು 8 ನಿಮಿಷದಲ್ಲಿ ಕೊಲೆ ಮಾಡಿದ್ದ. ಮನೆ ಡೋರ್ ಓಪನ್ ಮಾಡುತ್ತಿದ್ದಂತೆ ಹಿಂಬದಿಯಿಂದ ಅಟ್ಯಾಕ್ ಮಾಡಿ ಮೈಮೇಲಿದ್ದ ದುಪ್ಪಟದಿಂದ ಕತ್ತು ಬಿಗಿದು ನಂತರ ಚಾಕುವಿನಿಂದ ಕತ್ತುಕೊಯ್ದು ಕೊಲೆ ಮಾಡಿದ್ದ. ಮಾತ್ರವಲ್ಲ ಮೈಮೇಲಿದ್ದ ಬಳೆ, ಬ್ರಾಸ್ಲೈಟ್ ಮೂಗುತಿ, ಕಬೋರ್ಡ್ ನಲ್ಲಿದ್ದ ಐದು ಲಕ್ಷ ರೂ, ಹಣದೊಂದಿಗೆ ದೋಚಿ ಪರಾರಿಯಾಗಿದ್ದ.
ಸ್ನೇಹಿತನಿಗೆ ಹಣ ಕೊಟ್ಟು ಮತ್ತಿಬ್ಬರ ಜೊತೆ ಮಲೈಮಹದೇಶ್ವರ ಬೆಟ್ಟಕ್ಕೆ ಪರಾರಿಯಾಗಿದ್ದ, ಲೊಕೇಶನ್ ಟ್ರ್ಯಾಪ್ ಮೂಲಕ ಆರೋಪಿಯನ್ನು ಬಂಧನ ಮಾಡಲಾಗಿತ್ತು. ಇವೆಲ್ಲ ಮಾಹಿತಿಯನ್ನು ಪೊಲೀಸರು ಸಲ್ಲಿಸಿರುವ 600 ಪುಟಗಳ ಚಾರ್ಜ್ ಶೀಟ್ನಲ್ಲಿ ಉಲ್ಲೇಖ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ