AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸಾಲ ತೀರಿಸಲು ಎಳನೀರು ಕದ್ದು ಮಾರುತ್ತಿದ್ದ ವ್ಯಕ್ತಿಯ ಬಂಧನ

ಬೆಂಗಳೂರಿನ ರಾಜಣ್ಣ ಎಂಬುವರು ಮಾರಾಟ ಮಾಡಲು 12 ಸಾವಿರ ಎಳನೀರು ತಂದಿದ್ದರು. ಆದರೆ ಬೆಳಿಗ್ಗೆ ಅಂಗಡಿಗೆ ಬಂದು ನೋಡಿದಾಗ ಎಳುನೀರು ಕಾಣೆಯಾಗಿದ್ದವು. ಈ ಹಿನ್ನೆಲೆಯಲ್ಲಿ ರಾಜಣ್ಣ ಅವರು ಗಿರಿನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಸಾಲ ತೀರಿಸಲು ಎಳನೀರು ಕದ್ದು ಮಾರುತ್ತಿದ್ದ ವ್ಯಕ್ತಿಯ ಬಂಧನ
ಆರೋಪಿ ಮೋಹನ್​, ಕದ್ದ ಎಳನೀರು
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on:Nov 22, 2023 | 10:04 AM

Share

ಬೆಂಗಳೂರು ನ.22: ರಾತ್ರಿ ಕದ್ದ (Theft) ಎಳನೀರನ್ನು (Coconut Water) ಬೆಳಿಗ್ಗೆ ಮಾರುತ್ತಿದ್ದ ಆರೋಪಿಯನ್ನು ಗಿರಿನಗರ ಪೊಲೀಸರು (Police) ಬಂಧಿಸಿದ್ದಾರೆ. ಮೋಹನ್ ಬಂಧಿತ ಆರೋಪಿ. ಆರೋಪಿ ಮೋಹನ್​ ಕಳೆದ ಮೂರು ತಿಂಗಳಿಂದ ಬೆಂಗಳೂರಿನಲ್ಲಿ ಕೃತ್ಯ ಎಸಗುತ್ತಿದ್ದನು. ರಾತ್ರಿ ವೇಳೆ ಕಾರ್​ನಲ್ಲಿ ಬಂದು ರಸ್ತೆಯ ಪಕ್ಕ ಇಟ್ಟ ಎಳನೀರುಗಳನ್ನು ಕದಿಯುತ್ತಿದ್ದನು. ವ್ಯಾಪಾರಿ ರಾಜಣ್ಣ ಎಂಬುವರು ಮಾರಾಟ ಮಾಡಲು 12 ಸಾವಿರ ಎಳನೀರು ತಂದಿದ್ದರು. ಆದರೆ ಬೆಳಿಗ್ಗೆ ಅಂಗಡಿಗೆ ಬಂದು ನೋಡಿದಾಗ ಎಳನೀರು ಕಾಣೆಯಾಗಿದ್ದವು. ಈ ಹಿನ್ನೆಲೆಯಲ್ಲಿ ರಾಜಣ್ಣ ಅವರು ಗಿರಿನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದರು.

ತನಿಖೆ ಕೈಗೊಂಡ ಗಿರಿನಗರ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಪೊಲೀಸರು ಕಳ್ಳತನಕ್ಕೆ ಬಳಸಿದ್ದ ಕಾರು, ಒಂದು ಎನ್ ಫೀಲ್ಡ್ ಬೈಕ್​ ಸಹಿತ 8 ಲಕ್ಷ ಮೌಲ್ಯದ ವಸ್ತುಗಳು ವಂಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಖತರ್ನಾಕ್ ಖದೀಮರಿಂದ ಸರಣಿ ಕಳ್ಳತನ; ಬಾರ್ ಶಟರ್ ಮುರಿದು ಆರು ಲಕ್ಷ ಹಣ ದೋಚಿ ಪರಾರಿ

ವಿಚಾರಣೆ ವೇಳೆ ಹೊರಬಂತು ಕಳ್ಳತನದ ಹಿಂದಿನ ಕಹಾನಿ

ಈ ಹಿಂದೆ ಮೋಹನ್​ ಎಳನೀರು ವ್ಯಾಪಾರಿಯಾಗಿದ್ದನು. ಬಿಡುವಿನ ಸಮಯದಲ್ಲಿ ರಮ್ಮಿ ಆಟವಾಡಿ ಲಕ್ಷ ಲಕ್ಷ ರೂ. ಸಾಲ ಮಾಡಿಕೊಂಡಿದ್ದನು. ಸಾಲ ತೀರಿಸಲು ಕಾರ್ ಬಾಡಿಗೆ ಪಡೆದು ಟ್ಯಾಕ್ಸಿ ಓಡಿಸಲು ಆರಂಭಿಸಿದನು. ಹೀಗೆ ಒಂದು ರಾತ್ರಿ ಕಾರಿನಲ್ಲಿ ಹೋಗುವಾಗ ಎಳನೀರು ನೋಡಿದ್ದಾನೆ. ಆಗ ಮೋಹನ್​​​ಗೆ ಕಳ್ಳತನದ ಪ್ಲ್ಯಾನ್ ಹೊಳೆದಿದೆ. ಕದ್ದ ಎಳನೀರನ್ನು ಮಾರಲು ಗ್ರಾಹಕರನ್ನು ಸಹ ಹುಡುಕಿಕೊಂಡಿದ್ದನು. ಪ್ಯ್ಲಾನ್​ ಪ್ರಕಾರ ಎಲ್ಲ ಸೆಟ್​ ಆದ ಮೇಲೆ ಪ್ರತಿರಾತ್ರಿ 100 ಎಳನೀರನ್ನು ಕದ್ದು ಕ್ಯಾಬ್​ನಲ್ಲಿ ಹಾಕಿಕೊಂಡು ಮನೆಗೆ ಹೋಗುತ್ತಿದ್ದನು.

ಬೆಳಗ್ಗೆ ಎಳನೀರನ್ನು ಮಾರಿ ಹಣ ಪಡೆಯುತ್ತಿದ್ದನು. ಇದೇ ರೀತಿ ಕಳೆದ ಮೂರು ತಿಂಗಳಿಂದ ಕಳ್ಳತನ ಮಾಡುತ್ತಿದ್ದನು. ಎಳನೀರು ಕಳೆದುಕೊಂಡು ವ್ಯಾಪಾರಿಗಳು ಯಾರು ದೂರು ನೀಡಲು ಮುಂದಾಗಿರಲಿಲ್ಲ. ಕೊನೆಗೆ ರಾಜಣ್ಣ ಎಂಬುವವರು ದೂರು ಕೊಟ್ಟ ಬಳಿಕ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:47 am, Wed, 22 November 23

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ