AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಟಮಟ ಮಧ್ಯಾಹ್ನ ಕಾರಿನಲ್ಲೇ ಕಾಮತೃಷೆ ತೀರಿಸಲು ಮುಂದಾದ ಜೋಡಿ, ಆಮೇಲೇನಾಯ್ತು?

ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಉದ್ಯಾನವನವೊಂದರ ಬಳಿ ಕಾರಿನಲ್ಲಿದ್ದ ಜೋಡಿಯೊಂದು ಅಲ್ಲೇ ಬಟ್ಟೆಬಿಚ್ಚಿ ಕಾಮಕೇಳಿ ಆರಂಭಿಸಿದೆ. ಪಾರ್ಕ್​ನಲ್ಲಿ ಜನರಿದ್ದರೂ ಲೆಕ್ಕಿಸದ ಈ ಜೋಡಿಗೆ ಬುದ್ಧಿ ಹೇಳಲು ಸ್ಥಳದಲ್ಲಿ ಕರ್ತವ್ಯನಿರತರಾಗಿದ್ದ ಪೊಲೀಸ್ ಮುಂದಾಗಿದ್ದಾರೆ. ಆಮೇಲೇನಾಯ್ತು? ಇಲ್ಲಿದೆ ನೋಡಿ.

ಬೆಂಗಳೂರು: ಮಟಮಟ ಮಧ್ಯಾಹ್ನ ಕಾರಿನಲ್ಲೇ ಕಾಮತೃಷೆ ತೀರಿಸಲು ಮುಂದಾದ ಜೋಡಿ, ಆಮೇಲೇನಾಯ್ತು?
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: Ganapathi Sharma|

Updated on:Jan 25, 2024 | 8:44 AM

Share

ಬೆಂಗಳೂರು, ಜನವರಿ 25: ಜೋಡಿಯೊಂದು ಮಟ ಮಟ ಮಧ್ಯಾಹ್ನವೇ ಕಾರಿನಲ್ಲೇ ಬೆತ್ತಲಾಗಿ ಕಾಮತೃಷೆ ತೀರಿಸಿಕೊಳ್ಳಲು ಮುಂದಾದ ವಿಲಕ್ಷಣ ವಿದ್ಯಮಾನ ಬೆಂಗಳೂರಿನ (Bengaluru) ಉದ್ಯಾನವೊಂದರ ಬಳಿ ನಡೆದಿದೆ. ಇದೇ ವೇಳೆ, ದೃಶ್ಯ ಕಂಡು ಬುದ್ಧಿಹೇಳಲು ಬಳಿ ತೆರಳಿದ ಪೊಲೀಸ್​ (Bengaluru Police) ಮೇಲೆಯೆ ಕಾರು ಚಲಾಯಿಸಿಕೊಂಡು ಜೋಡಿ ಪರಾರಿಯಾಗಿದೆ. ಗಾಯಗೊಂಡ ಸಬ್​ ಇನ್​​ಸ್ಪೆಕ್ಟರ್​ ಮಹೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ನಡೆದಿದ್ದೇನು?

ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಉದ್ಯಾನವನವೊಂದರ ಬಳಿ ಕಿಯೋ ಸೆಲಾಟೋಸ್ ಕಾರಿನಲ್ಲಿ ಬಂದಿದ್ದ ಜೋಡಿಯೊಂದು ಅಲ್ಲೇ ಬಟ್ಟೆಬಿಚ್ಚಿ ಕಾಮಕೇಳಿ ಆರಂಭಿಸಿದೆ. ಪಾರ್ಕ್​ನಲ್ಲಿ ಅನೇಕ ಮಂದಿ ಇದ್ದರೂ, ಅವರಿಗೆಲ್ಲ ತಾವು ಕಾಣಿಸುತ್ತಿದ್ದರೂ ಅದನ್ನು ಲೆಕ್ಕಿಸದೆ ಜೋಡಿ ಸರಸದಲ್ಲಿ ತಲ್ಲೀನವಾಗಿದೆ. ಇದೇ ವೇಳೆ ಅಲ್ಲಿ ಕರ್ತವ್ಯ ನಿರತರಾಗಿದ್ದ ಸಬ್ ಇನ್ಸ್​​ಪೆಕ್ಟರ್ ಮಹೇಶ್ ಆ ಜೋಡಿಯನ್ನು ಗಮನಿಸಿದ್ದಾರೆ.

ಆಮೇಲೇನಾಯ್ತು?

ಜೋಡಿಗೆ ಬುದ್ಧಿ ಹೇಳಬೇಕು ಎಂದುಕೊಂಡ ಸಬ್ ಇನ್ಸ್​​ಪೆಕ್ಟರ್ ಮಹೇಶ್ ಕಾರಿನ ಬಳಿ ತೆರಳಿದ್ದಾರೆ. ಕಾರಿನ ಬಳಿ ಹೋಗಿ ನಂಬರ್ ಪ್ಲೇಟ್ ಪರಿಶೀಲನೆ ನಡೆಸಿದ್ದಾರೆ. ಅಷ್ಟರಲ್ಲಿ ಎಚ್ಚೆತ್ತುಕೊಂಡ ಯುವಕ ಏಕಾಏಕಿ ಕಾರು ಚಲಾಯಿಸಿದ್ದಾನೆ. ದಿಢೀರ್ ಕಾರು ಚಲಿಸಲು ಆರಂಭಿಸಿದ ಕಾರಣ ಸಬ್ ಇನ್ಸ್​​ಪೆಕ್ಟರ್ ಮಹೇಶ್ ಬಾನೆಟ್ ಮೇಲೆ ಬಿದ್ದಿದ್ದಾರೆ. ಅವರು ಕಾರಿನ ಬಾನೆಟ್ ಹಿಡಿದುಕೊಂಡು ಒದ್ದಾಡುತ್ತಿದ್ದರೂ ಲೆಕ್ಕಿಸದ ಯುವಕ ಕಾರು ಚಲಾಯಿಸಿದ್ದಾನೆ. ಏಕಾಏಕಿ ಕಾರನ್ನು ರಿವರ್ಸ್ ತೆಗೆದು ಮತ್ತೆ ಮುಂದಕ್ಕೆ ಚಲಾಯಿಸಿದ್ದಾನೆ. ಪರಿಣಾಮವಾಗಿ ಕೆಳಬಿದ್ದ ಸಬ್ ಇನ್ಸ್​ಪೆಕ್ಟರ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸದ್ಯ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮಹೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಲವು ದಿನಗಳ ಹಿಂದೆ ನಡೆದಿತ್ತು ಮತ್ತೊಂದು ಹಿಟ್ ಆ್ಯಂಡ್ ರನ್ ಘಟನೆ

ಕೆಲವು ದಿನಗಳ ಹಿಂದಷ್ಟೇ ನಗರದಲ್ಲಿ ಹಿಟ್ ಆ್ಯಂಡ್ ರನ್ ಘಟನೆ ಸಂಭವಿಸಿತ್ತು. ಡಿಕ್ಕಿಯ ರಭಸಕ್ಕೆ ಬಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಕಾರು ಚಾಲಕ ಹಲವು ಮೀಟರ್​ಗಳಷ್ಟು ದೂರಕ್ಕೆ ಎಳೆದೊಯ್ದ ಘಟನೆ ಮಲ್ಲೇಶ್ವರಂ ಬಳಿ ನಡೆದಿತ್ತು. ಘಟನೆಯ ದೃಶ್ಯವಾಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗಿತ್ತು.

ಇದನ್ನೂ ಓದಿ: ಬೆಂಗಳೂರು: ಡಿಕ್ಕಿ ಹೊಡೆದು ವ್ಯಕ್ತಿಯನ್ನು ಹಲವು ಮೀಟರ್ ದೂರ ಎಳೆದೊಯ್ದ ಕಾರು ಚಾಲಕ

ಮಲ್ಲೇಶ್ವರಂನ ಮಾರಮ್ಮ ದೇವಸ್ಥಾನದ ವೃತ್ತದಲ್ಲಿ ಜನವರಿ 15 ರಂದು ನಡೆದ ಘಟನೆಯ ಬೆಚ್ಚಿಬೀಳಿಸುವ ಸಿಸಿಟಿವಿ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:43 am, Thu, 25 January 24

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್